- Kannada News Photo gallery Cricket photos WTC Points Table 2025: Team India slip to 6th position in WTC Standings
WTC ಅಂಕ ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತ ಕೆಳಗೆ ಟೀಮ್ ಇಂಡಿಯಾ
WTC Points Table: ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ನೂತನ ಪಾಯಿಂಟ್ಸ್ ಟೇಬಲ್ ಬಿಡುಗಡೆಯಾಗಿದೆ. ಹೊಸ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿ ಕಾಣಿಸಿಕೊಂಡರೆ, ಸೌತ್ ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಭಾರತ ಟಾಪ್ ಫೈವ್ಯಿಂದ ಹೊರಬಿದ್ದಿದೆ.
Updated on:Dec 21, 2025 | 11:56 AM

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು ಗೆಲುವಿನ ನಾಗಾಲೋಟ ಮುಂದುವರೆಸಿದೆ. ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಆಸೀಸ್ ಪಡೆ ಜಯಭೇರಿ ಬಾರಿಸಿದ್ದು, ಈ ಮೂಲಕ WTC ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಆದರೆ ಮತ್ತೊಂದೆಡೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಹೀನಾಯ ಸೋಲನುಭವಿಸಿದ್ದ ಟೀಮ್ ಇಂಡಿಯಾ ಇದೀಗ ಅಂಕ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ. ಅಂದರೆ ಈ ಬಾರಿ ಭಾರತ ತಂಡವು ಪಾಕಿಸ್ತಾನಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅದರಂತೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವು ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ. ಆಸೀಸ್ ಪಡೆ ಈವರೆಗೆ 6 ಪಂದ್ಯಗಳನ್ನು ಆಡಿದ್ದರು, ಆರರಲ್ಲೂ ಜಯ ಸಾಧಿಸಿದೆ. ಈ ಮೂಲಕ 100 ಶೇಕಡಾವಾರಿನೊಂದಿಗೆ ಮೊದಲ ಸ್ಥಾನವನ್ನು ಅಲಂಕರಿಸಿದೆ.

ಟೀಮ್ ಇಂಡಿಯಾವನ್ನು 2-0 ಅಂತರದಿಂದ ಸೋಲಿಸಿರುವ ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಆಫ್ರಿಕಾ ಪಡೆ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ನಾಲ್ಕು ಮ್ಯಾಚ್ಗಳಲ್ಲಿ 3 ಜಯ ಸಾಧಿಸಿದೆ. ಈ ಮೂಲಕ 75 ಶೇಕಡಾವಾರಿನೊಂದಿಗೆ ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ.

ಇನ್ನು ತೃತೀಯ ಸ್ಥಾನದಲ್ಲಿ ನ್ಯೂಝಿಲೆಂಡ್ ತಂಡವಿದ್ದು, ಕಿವೀಸ್ ಪಡೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಆಡಿದ 2 ಮ್ಯಾಚ್ಗಳಲ್ಲಿ ಒಂದು ಗೆಲುವು ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಹೊಂದಿದೆ. ಈ ಮೂಲಕ WTC ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.

ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.

ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ 48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.

ಆ್ಯಶಸ್ ಸರಣಿ ಸೋತಿರುವ ಇಂಗ್ಲೆಂಡ್ ತಂಡವು 27.080 ಶೇಕಡಾವಾರು ಅಂಕಗಳೊಂದಿಗೆ 7ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಬಾಂಗ್ಲಾದೇಶ್ ತಂಡವು 16.67 ಶೇಕಡಾವಾರು ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿದ 6 ಸೋಲನುಭವಿಸಿರುವ ವೆಸ್ಟ್ ಇಂಡೀಸ್ ತಂಡ 4.760 ಶೇಕಡಾವಾರು ಅಂಕಗಳೊಂದಿಗೆ 9ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.
Published On - 11:54 am, Sun, 21 December 25
