WTC ಅಂಕ ಪಟ್ಟಿಯಲ್ಲಿ ಪಾಕಿಸ್ತಾನಕ್ಕಿಂತ ಕೆಳಗೆ ಟೀಮ್ ಇಂಡಿಯಾ

Updated on: Dec 21, 2025 | 11:56 AM

WTC Points Table: ಇಂಗ್ಲೆಂಡ್-ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಪಾಯಿಂಟ್ಸ್ ಟೇಬಲ್​ ಬಿಡುಗಡೆಯಾಗಿದೆ. ಹೊಸ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿ ಕಾಣಿಸಿಕೊಂಡರೆ, ಸೌತ್ ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಭಾರತ ಟಾಪ್ ಫೈವ್​ಯಿಂದ ಹೊರಬಿದ್ದಿದೆ.

1 / 9
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಆಸ್ಟ್ರೇಲಿಯಾ ತಂಡವು ಗೆಲುವಿನ ನಾಗಾಲೋಟ ಮುಂದುವರೆಸಿದೆ. ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೊದಲ ಮೂರು ಪಂದ್ಯಗಳಲ್ಲೂ ಆಸೀಸ್ ಪಡೆ ಜಯಭೇರಿ ಬಾರಿಸಿದ್ದು, ಈ ಮೂಲಕ WTC ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

2 / 9
ಆದರೆ ಮತ್ತೊಂದೆಡೆ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಹೀನಾಯ ಸೋಲನುಭವಿಸಿದ್ದ ಟೀಮ್ ಇಂಡಿಯಾ ಇದೀಗ ಅಂಕ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಕುಸಿದಿದೆ. ಅಂದರೆ ಈ ಬಾರಿ ಭಾರತ ತಂಡವು ಪಾಕಿಸ್ತಾನಕ್ಕಿಂತಲೂ ಕೆಳಗಿನ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅದರಂತೆ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿ ಈ ಕೆಳಗಿನಂತಿದೆ...

3 / 9
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವು ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ. ಆಸೀಸ್ ಪಡೆ ಈವರೆಗೆ 6 ಪಂದ್ಯಗಳನ್ನು ಆಡಿದ್ದರು, ಆರರಲ್ಲೂ ಜಯ ಸಾಧಿಸಿದೆ. ಈ ಮೂಲಕ 100 ಶೇಕಡಾವಾರಿನೊಂದಿಗೆ ಮೊದಲ ಸ್ಥಾನವನ್ನು ಅಲಂಕರಿಸಿದೆ.

4 / 9
ಟೀಮ್ ಇಂಡಿಯಾವನ್ನು 2-0 ಅಂತರದಿಂದ ಸೋಲಿಸಿರುವ  ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಆಫ್ರಿಕಾ ಪಡೆ ಈವರೆಗೆ 4 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ನಾಲ್ಕು ಮ್ಯಾಚ್​ಗಳಲ್ಲಿ 3 ಜಯ ಸಾಧಿಸಿದೆ. ಈ ಮೂಲಕ 75 ಶೇಕಡಾವಾರಿನೊಂದಿಗೆ ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನವನ್ನು ಅಲಂಕರಿಸಿದೆ.

5 / 9
ಇನ್ನು ತೃತೀಯ ಸ್ಥಾನದಲ್ಲಿ ನ್ಯೂಝಿಲೆಂಡ್ ತಂಡವಿದ್ದು, ಕಿವೀಸ್ ಪಡೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಆಡಿದ 2 ಮ್ಯಾಚ್​ಗಳಲ್ಲಿ ಒಂದು ಗೆಲುವು ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಹೊಂದಿದೆ. ಈ ಮೂಲಕ WTC ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

6 / 9
ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.

7 / 9
ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.

8 / 9
ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್​ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ  48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.

9 / 9
ಆ್ಯಶಸ್ ಸರಣಿ ಸೋತಿರುವ ಇಂಗ್ಲೆಂಡ್ ತಂಡವು 27.080 ಶೇಕಡಾವಾರು ಅಂಕಗಳೊಂದಿಗೆ 7ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಬಾಂಗ್ಲಾದೇಶ್ ತಂಡವು 16.67 ಶೇಕಡಾವಾರು ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದ್ದರೆ, 7 ಪಂದ್ಯಗಳನ್ನಾಡಿದ 6 ಸೋಲನುಭವಿಸಿರುವ ವೆಸ್ಟ್ ಇಂಡೀಸ್ ತಂಡ 4.760 ಶೇಕಡಾವಾರು ಅಂಕಗಳೊಂದಿಗೆ 9ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

Published On - 11:54 am, Sun, 21 December 25