WTC points table 2023-25: ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ ತಂಡ 4-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿದರೆ, ಉಳಿದ ನಾಲ್ಕು ಪಂದ್ಯಗಳಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಗೆಲುವಿನೊಂದಿಗೆ ಇದೀಗ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸಿದೆ.