AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಅಂತಿಮ ಅಂಕಪಟ್ಟಿ ಪ್ರಕಟ: ಪಾಕಿಸ್ತಾನ್ ತಂಡಕ್ಕೆ ಕೊನೆಯ ಸ್ಥಾನ

WTC Points Table: ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿ ಮುಕ್ತಾಯದೊಂದಿಗೆ 2023-2025 ರ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್ ಸರಣಿಗೆ ತೆರೆಬಿದ್ದಿದೆ. ಇನ್ನುಳಿದಿರುವುದು ಆಸ್ಟ್ರೇಲಿಯಾ ಮತ್ತು ಸೌತ್ ಆಫ್ರಿಕಾ ನಡುವಣ ಫೈನಲ್ ಪಂದ್ಯ ಮಾತ್ರ. ಜೂನ್ 11 ರಂದು ಲಾರ್ಡ್ಸ್​ನಲ್ಲಿ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆದಿರುವ ಸೌತ್ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಸೆಣಸಲಿದೆ.

ಝಾಹಿರ್ ಯೂಸುಫ್
|

Updated on: Feb 10, 2025 | 2:30 PM

Share
ವಿಶ್ವ ಟೆಸ್ಟ್ ಚಾಂಪಿಯನ್ಸ್​ 2023-25ರ ಸರಣಿ ಮುಕ್ತಾಯಗೊಂಡಿದೆ. ಇನ್ನುಳಿದಿರುವುದು ಫೈನಲ್ ಪಂದ್ಯ ಮಾತ್ರ. ಈ ಸರಣಿ ಮುಕ್ತಾಯದೊಂದಿಗೆ ನೂತನ WTC ಅಂಕ ಪಟ್ಟಿ ಪ್ರಕಟಗೊಂಡಿದೆ. ಹೊಸ ಪಾಯಿಂಟ್ಸ್​ ಟೇಬಲ್​ನಲ್ಲಿ ಕೊನೆಯ ಸ್ಥಾನ ಅಲಂಕರಿಸುವ ಮೂಲಕ ಪಾಕಿಸ್ತಾನ್ ತಂಡವು ಭಾರೀ ಮುಖಭಂಗಕ್ಕೆ ಒಳಗಾಗಿದೆ.

1 / 7
ಅಂದರೆ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಪಾಕಿಸ್ತಾನ್ ತಂಡವು ಕೊನೆಯ ಸ್ಥಾನ ಪಡೆದುಕೊಂಡಿದೆ. WTC ಸರಣಿಯಲ್ಲಿ ಆಡಿದ 14 ಪಂದ್ಯಗಳಲ್ಲಿ ಪಾಕ್ ಪಡೆ ಗೆದ್ದಿರುವುದು ಕೇವಲ 5 ಮ್ಯಾಚ್​ಗಳಲ್ಲಿ ಮಾತ್ರ. ಅಲ್ಲದೆ 9 ಪಂದ್ಯಗಳಲ್ಲಿ ಸೋಲನುಭವಿಸಿದೆ.

2 / 7
ಈ 9 ಪಂದ್ಯಗಳಲ್ಲಿನ ಸೋಲಿನೊಂದಿಗೆ ಪಾಕಿಸ್ತಾನ್ ತಂಡವು WTC ಪಾಯಿಂಟ್ಸ್​ ಟೇಬಲ್​ನಲ್ಲಿ ಕೇವಲ 27.98 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ 2023-25ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ತಂಡ ಎನಿಸಿಕೊಂಡಿದೆ.

3 / 7
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2023-25ರ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಸೌತ್ ಆಫ್ರಿಕಾ ತಂಡ. ಆಫ್ರಿಕನ್ ಪಡೆ ಆಡಿದ 12 ಪಂದ್ಯಗಳಲ್ಲಿ 8 ಗೆಲುವು ದಾಖಲಿಸಿದೆ. ಅಲ್ಲದೆ ಒಂದು ಮ್ಯಾಚ್ ಅನ್ನು ಡ್ರಾ ಮಾಡಿಕೊಳ್ಳುವ ಮೂಲಕ ಒಟ್ಟು 69.44% ಅಂಕಗಳನ್ನು ಪಡೆದು ಅಗ್ರಸ್ಥಾನ ಅಲಂಕರಿಸಿದೆ. ಈ ಅಗ್ರಸ್ಥಾನದೊಂದಿಗೆ ಸೌತ್ ಆಫ್ರಿಕಾ WTC ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ.

4 / 7
ಹಾಗೆಯೇ ದ್ವಿತೀಯ ಸ್ಥಾನದಲ್ಲಿರುವುದು ಆಸ್ಟ್ರೇಲಿಯಾ. ಆಸೀಸ್ ಪಡೆ ಈ ಬಾರಿಯ WTC ಸರಣಿಯಲ್ಲಿ ಒಟ್ಟು 19 ಪಂದ್ಯಗಳನ್ನಾಡಿದ್ದು, ಈ ವೇಳೆ 13 ಜಯ, 4 ಸೋಲು ಹಾಗೂ 2 ಡ್ರಾನೊಂದಿಗೆ 67.540% ಅಂಕಗಳನ್ನು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​​ಶಿಪ್​​ ಫೈನಲ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ.

5 / 7
ಇನ್ನು ಭಾರತ ತಂಡವು ಈ ಬಾರಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಟೀಮ್ ಇಂಡಿಯಾ ಈ ಬಾರಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಒಟ್ಟು 19 ಪಂದ್ಯಗಳನ್ನಾಡಿದ್ದು, ಈ ವೇಳೆ 9 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು 2 ಪಂದ್ಯಗಳಲ್ಲಿ ಡ್ರಾ ಸಾಧಿಸಿದರೆ, 8 ಮ್ಯಾಚ್​ಗಳಲ್ಲಿ ಸೋಲನುಭವಿಸಿದೆ. ಈ ಮೂಲಕ 50.00% ಅಂಕಗಳನ್ನು ಪಡೆದು ಫೈನಲ್​ಗೇರುವಲ್ಲಿ ವಿಫಲವಾಗಿದೆ.

6 / 7
ಇನ್ನುಳಿದಂತೆ ನ್ಯೂಝಿಲೆಂಡ್ (48.21%) ತಂಡದ 4ನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ (43.18%) 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಹಾಗೆಯೇ 6ನೇ ಸ್ಥಾನದಲ್ಲಿ ಶ್ರೀಲಂಕಾ (38.46%) ತಂಡವಿದ್ದು, 7ನೇ ಸ್ಥಾನದಲ್ಲಿ ಬಾಂಗ್ಲಾದೇಶ್ (31.25%) ತಂಡವಿದೆ. ಇನ್ನು ವೆಸ್ಟ್ ಇಂಡೀಸ್ (28.21%) 8ನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನ್ (27.98%) ಕೊನೆಯ ಸ್ಥಾನದಲ್ಲಿದೆ.

7 / 7
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ