AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆದ್ದರೂ WTC ಅಂಕಪಟ್ಟಿಯಲ್ಲಿ ಮೇಲೇರದ ಟೀಮ್ ಇಂಡಿಯಾ

WTC Points Table: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಪಾಯಿಂಟ್ಸ್ ಟೇಬಲ್​ ಬಿಡುಗಡೆಯಾಗಿದೆ. ಹೊಸ ಅಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಟಾಪ್-5 ನಲ್ಲಿ ಕಾಣಿಸಿಕೊಂಡಿದೆ. ಇನ್ನು ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್ ತಂಡಗಳು WTC ನಲ್ಲಿ ಗೆಲುವಿನ ಖಾತೆ ತೆರೆಯಬೇಕಿದೆ.

ಝಾಹಿರ್ ಯೂಸುಫ್
|

Updated on: Oct 14, 2025 | 1:53 PM

Share
ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಜಯ ಸಾಧಿಸಿದ್ದ ಟೀಮ್ ಇಂಡಿಯಾ ಇದೀಗ ಸೌತ್ ಆಫ್ರಿಕಾ ವಿರುದ್ಧದ ಮೊದಲ ಪಂದ್ಯದಲ್ಲೇ ಸೋತಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಕೊನೆಯ ಇನಿಂಗ್ಸ್​ನಲ್ಲಿ 124 ರನ್​ ಬೆನ್ನತ್ತಲಾಗದೇ ಭಾರತ ತಂಡವು 30 ರನ್​​ಗಳಿಂದ ಸೋಲೊಪ್ಪಿಕೊಂಡಿದೆ.

1 / 6
ಈ ಹೀನಾಯ ಸೋಲಿನ ಬೆನ್ನಲ್ಲೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ನೂತನ ಅಂಕ ಪಟ್ಟಿ ಬಿಡುಗಡೆಯಾಗಿದೆ. ಕಳೆದ ಬಾರಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದು, ಸೌತ್ ಆಫ್ರಿಕಾ ತಂಡ ದ್ವಿತೀಯ ಸ್ಥಾನಕ್ಕೇರಿದೆ. 

2 / 6
ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ನೂತನ ಅಂಕ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ ಮೊದಲ ಸ್ಥಾನದಲ್ಲಿದೆ. ಆಸೀಸ್ ಪಡೆ ಈವರೆಗೆ 7 ಪಂದ್ಯಗಳನ್ನು ಆಡಿದ್ದು, ಈ ವೇಳೆ 6 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಇನ್ನು ಒಂದು ಪಂದ್ಯದಲ್ಲಿ ಸೋತಿರುವ ಆಸ್ಟ್ರೇಲಿಯಾ ಇದೀಗ 85.710 ಶೇಕಡಾವಾರು ಅಂಕಗಳೊಂದಿಗೆ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ.

3 / 6
ಹಾಗೆಯೇ ಶ್ರೀಲಂಕಾ ತಂಡ ನಾಲ್ಕನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಲಂಕಾ ಪಡೆ ಕೂಡ ಈವರೆಗೆ 2 ಪಂದ್ಯಗಳನ್ನು ಮಾತ್ರ ಆಡಿದ್ದು, ಈ ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಡ್ರಾನೊಂದಿಗೆ 66.67 ಶೇಕಡಾವಾರು ಅಂಕಗಳನ್ನು ಪಡೆದುಕೊಂಡಿದೆ.

4 / 6
ಇನ್ನು ಟೀಮ್ ಇಂಡಿಯಾ ಈವರೆಗೆ 9 ಪಂದ್ಯಗಳಲ್ಲಿ 4 ಗೆಲುವು ಮತ್ತು ಒಂದು ಡ್ರಾ ಸಾಧಿಸಿದೆ. ಇನ್ನುಳಿದ 4 ಮ್ಯಾಚ್​ಗಳಲ್ಲೂ ಹೀನಾಯ ಸೋಲನುಭವಿಸಿದೆ. ಈ ಸೋಲು-ಗೆಲುವುಗಳೊಂದಿಗೆ  48.150 ಶೇಕಡಾವಾರು ಅಂಕ ಪಡೆದಿರುವ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ಕುಸಿದಿದೆ.

5 / 6
ಐದನೇ ಸ್ಥಾನದಲ್ಲಿ ಈ ಬಾರಿ ಪಾಕಿಸ್ತಾನ್ ತಂಡ ಕಾಣಿಸಿಕೊಂಡಿದೆ. ಪಾಕ್ ಪಡೆ ಆಡಿರುವ 2 ಮ್ಯಾಚ್​ಗಳಲ್ಲಿ ಒಂದು ಜಯ ಹಾಗೂ ಒಂದು ಸೋಲಿನೊಂದಿಗೆ 50 ಶೇಕಡಾವಾರು ಪಡೆದುಕೊಂಡಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯ ಅಂಕ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.

6 / 6
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ

ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ

ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್

ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ

ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ

ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು

ಅಧಿಕ ಮಾಸದಲ್ಲಿ ಹುಟ್ಟಿದ ಮಕ್ಕಳ ಭವಿಷ್ಯ ಹೇಗಿರಲಿದೆ?

ಇಂದು ಈ ರಾಶಿಯವರು ಕೋಪ ಮತ್ತು ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ