Updated on: Jul 24, 2023 | 9:25 AM
ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಿನ ಆ್ಯಶಸ್ ಸರಣಿಯ 4ನೇ ಮ್ಯಾಂಚೆಸ್ಟರ್ ಟೆಸ್ಟ್ ಮಳೆಯಿಂದಾಗಿ ಡ್ರಾದಲ್ಲಿ ಕೊನೆಗೊಂಡಿದೆ. ಇದರೊಂದಿಗೆ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಪಾಯಿಂಟ್ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ.
ಪ್ರಸ್ತುತ ವಿಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಟೀಂ ಇಂಡಿಯಾ 100 ಪ್ರತಿಶತ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ವಿಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಭಾರತ ತನ್ನ ಮುಂದಿನ ಟೆಸ್ಟ್ ಸರಣಿಯನ್ನು ದಕ್ಷಿಣ ಆಫ್ರಿಕಾ ವಿರುದ್ಧ ಡಿಸೆಂಬರ್-ಜನವರಿಯಲ್ಲಿ ಆಡಲಿದೆ.
ಇತ್ತ ತನ್ನ ಮೊದಲ ಟೆಸ್ಟ್‌ನಲ್ಲಿ ಶ್ರೀಲಂಕಾವನ್ನು ಸೋಲಿಸಿದ ಪಾಕಿಸ್ತಾನ ಕ್ರಿಕೆಟ್ ತಂಡ ಕೂಡ 100 ಪ್ರತಿಶತ ಗೆಲುವಿನೊಂದಿಗೆ 2 ನೇ ಸ್ಥಾನ ಪಡೆದುಕೊಂಡಿದೆ.
ಹಾಗೆಯೇ 5 ಪಂದ್ಯಗಳ ಆ್ಯಶಸ್ ಟೆಸ್ಟ್ ಸರಣಿಯೊಂದಿಗೆ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಆರಂಣಿಸಿದ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.
ಇನ್ನು ಕೊನೆಯ ಟೆಸ್ಟ್‌ನಲ್ಲಿ ಆಸೀಸ್ ಗೆಲುವು ಸಾಧಿಸಿದರೆ, ಆ್ಯಶಸ್ ಸರಣಿಯನ್ನು ತನ್ನದಾಗಿಸಿಕೊಳ್ಳುವುದರೊಂದಿಗೆ ಪಾಯಿಂಟ್ ಪಟ್ಟಿಯಲ್ಲೂ ಮೇಲಕ್ಕೇರುವ ಸಾಧ್ಯತೆಗಳಿವೆ. ಆಶಸ್ ನಂತರ ಆಸ್ಟ್ರೇಲಿಯಾ ಡಿಸೆಂಬರ್-ಜನವರಿಯಲ್ಲಿ ತವರಿನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.
ಆಸೀಸ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯಲ್ಲಿ 1-2 ಅಂತರದಿಂದ ಹಿನ್ನಡೆ ಕಾಯ್ದುಕೊಂಡಿರುವ ಇಂಗ್ಲೆಂಡ್, 27.78 ರಷ್ಟು ಗೆಲುವಿನ ಸರಾಸರಿಯೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.
ಆಡಿರುವ 1 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ ಸೋಲು ಕಂಡಿರುವ ಶ್ರೀಲಂಕಾ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದುಕೊಂಡಿದೆ.