WTC Standings 2023-25: ಮುಂದುವರೆದ ಭಾರತದ ನಾಗಾಲೋಟ; ಆಸೀಸ್​ಗೆ 3ನೇ ಸ್ಥಾನ

|

Updated on: Jul 24, 2023 | 9:25 AM

WTC Standings 2023-25: ಪ್ರಸ್ತುತ ವಿಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಟೀಂ ಇಂಡಿಯಾ 100 ಪ್ರತಿಶತ ಗೆಲುವಿನೊಂದಿಗೆ ಪಾಯಿಂಟ್​ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.

1 / 7
ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವಿನ ಆ್ಯಶಸ್ ಸರಣಿಯ 4ನೇ ಮ್ಯಾಂಚೆಸ್ಟರ್ ಟೆಸ್ಟ್ ಮಳೆಯಿಂದಾಗಿ ಡ್ರಾದಲ್ಲಿ ಕೊನೆಗೊಂಡಿದೆ. ಇದರೊಂದಿಗೆ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಪಾಯಿಂಟ್​ ಪಟ್ಟಿಯಲ್ಲೂ ಮಹತ್ವದ ಬದಲಾವಣೆಯಾಗಿದೆ.

2 / 7
ಪ್ರಸ್ತುತ ವಿಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಟೀಂ ಇಂಡಿಯಾ 100 ಪ್ರತಿಶತ ಗೆಲುವಿನೊಂದಿಗೆ ಪಾಯಿಂಟ್​ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ. ವಿಂಡೀಸ್ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ಭಾರತ ತನ್ನ ಮುಂದಿನ ಟೆಸ್ಟ್ ಸರಣಿಯನ್ನು ದಕ್ಷಿಣ ಆಫ್ರಿಕಾ ವಿರುದ್ಧ ಡಿಸೆಂಬರ್-ಜನವರಿಯಲ್ಲಿ ಆಡಲಿದೆ.

3 / 7
ಇತ್ತ ತನ್ನ ಮೊದಲ ಟೆಸ್ಟ್‌ನಲ್ಲಿ ಶ್ರೀಲಂಕಾವನ್ನು ಸೋಲಿಸಿದ ಪಾಕಿಸ್ತಾನ ಕ್ರಿಕೆಟ್ ತಂಡ ಕೂಡ 100 ಪ್ರತಿಶತ ಗೆಲುವಿನೊಂದಿಗೆ 2 ನೇ ಸ್ಥಾನ ಪಡೆದುಕೊಂಡಿದೆ.

4 / 7
ಹಾಗೆಯೇ 5 ಪಂದ್ಯಗಳ ಆ್ಯಶಸ್ ಟೆಸ್ಟ್ ಸರಣಿಯೊಂದಿಗೆ 3ನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಆರಂಣಿಸಿದ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ.

5 / 7
ಇನ್ನು ಕೊನೆಯ ಟೆಸ್ಟ್‌ನಲ್ಲಿ ಆಸೀಸ್ ಗೆಲುವು ಸಾಧಿಸಿದರೆ, ಆ್ಯಶಸ್ ಸರಣಿಯನ್ನು ತನ್ನದಾಗಿಸಿಕೊಳ್ಳುವುದರೊಂದಿಗೆ ಪಾಯಿಂಟ್ ಪಟ್ಟಿಯಲ್ಲೂ ಮೇಲಕ್ಕೇರುವ ಸಾಧ್ಯತೆಗಳಿವೆ. ಆಶಸ್ ನಂತರ ಆಸ್ಟ್ರೇಲಿಯಾ ಡಿಸೆಂಬರ್-ಜನವರಿಯಲ್ಲಿ ತವರಿನಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ.

6 / 7
ಆಸೀಸ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯಲ್ಲಿ 1-2 ಅಂತರದಿಂದ ಹಿನ್ನಡೆ ಕಾಯ್ದುಕೊಂಡಿರುವ ಇಂಗ್ಲೆಂಡ್, 27.78 ರಷ್ಟು ಗೆಲುವಿನ ಸರಾಸರಿಯೊಂದಿಗೆ ನಾಲ್ಕನೇ ಸ್ಥಾನದಲ್ಲಿದೆ.

7 / 7
ಆಡಿರುವ 1 ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ ಸೋಲು ಕಂಡಿರುವ ಶ್ರೀಲಂಕಾ ಪಾಯಿಂಟ್ ಪಟ್ಟಿಯಲ್ಲಿ 5ನೇ ಸ್ಥಾನ ಪಡೆದುಕೊಂಡಿದೆ.