WTC points table: ಐತಿಹಾಸಿಕ ಜಯ ಸಾಧಿಸಿದ ಕಿವೀಸ್​ಗೆ ನಂ.1 ಪಟ್ಟ; ಭಾರತಕ್ಕೆ ಹೆಚ್ಚಾಯ್ತು ಸಂಕಷ್ಟ..!

Updated on: Feb 16, 2024 | 9:41 PM

WTC points table: ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು 7 ವಿಕೆಟ್​ಗಳಿಂದ ಗೆದ್ದು ಸರಣಿ ವಶಪಡಿಸಿಕೊಂಡ ನ್ಯೂಜಿಲೆಂಡ್ ತಂಡ ಮೊದಲ ಬಾರಿಗೆ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ದಾಖಲೆ ಬರೆದರೆ, ಇನ್ನೊಂದೆಡೆ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲೂ ಭರ್ಜರಿ ಲಾಭ ಪಡೆದಿದೆ.

1 / 8
ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು 7 ವಿಕೆಟ್​ಗಳಿಂದ ಗೆದ್ದು ಸರಣಿ ವಶಪಡಿಸಿಕೊಂಡ ನ್ಯೂಜಿಲೆಂಡ್ ತಂಡ ಮೊದಲ ಬಾರಿಗೆ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ದಾಖಲೆ ಬರೆದರೆ, ಇನ್ನೊಂದೆಡೆ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲೂ ಭರ್ಜರಿ ಲಾಭ ಪಡೆದಿದೆ.

ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯವನ್ನು 7 ವಿಕೆಟ್​ಗಳಿಂದ ಗೆದ್ದು ಸರಣಿ ವಶಪಡಿಸಿಕೊಂಡ ನ್ಯೂಜಿಲೆಂಡ್ ತಂಡ ಮೊದಲ ಬಾರಿಗೆ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ದಾಖಲೆ ಬರೆದರೆ, ಇನ್ನೊಂದೆಡೆ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲೂ ಭರ್ಜರಿ ಲಾಭ ಪಡೆದಿದೆ.

2 / 8

ಹರಿಣಗಳಿಗೆ ಸರಣಿ ಸೋಲಿನ ಮುಖಭಂಗ ನೀಡಿದ ನ್ಯೂಜಿಲೆಂಡ್ ತಂಡ ಈಗಾಗಲೇ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿತ್ತು. ಆದರೆ ಇದೀಗ ಎರಡನೇ ಟೆಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 7 ವಿಕೆಟ್‌ಗಳಿಂದ ಸೋಲಿಸಿ ತನ್ನ ಮುನ್ನಡೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಇದು ಡಬ್ಲ್ಯುಟಿಸಿ ಫೈನಲ್​ಗೇರಬೇಕೆಂಬ ಭಾರತದ ಬಯಕೆಗೆ ತೊಂದರೆಯನ್ನುಂಟು ಮಾಡಿದೆ.

3 / 8

ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ತಂಡವನ್ನು ಸೋಲಿಸಿದರೂ ನಂಬರ್ ಒನ್ ಸ್ಥಾನವನ್ನು ಅಲಂಕರಿಸಲು ಸಾಧ್ಯವಿಲ್ಲ. ಆದರೆ, ಆಸ್ಟ್ರೇಲಿಯವನ್ನು ಹಿಂದಿಕ್ಕಿ ಭಾರತ ತಂಡ 2ನೇ ಸ್ಥಾನಕ್ಕೇರುವ ಅವಕಾಶಗಳಿವೆ.

4 / 8

ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​ನಲ್ಲಿ ನ್ಯೂಜಿಲೆಂಡ್ ಪ್ರಸ್ತುತ ಮೊದಲ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಗೆಲ್ಲುವ ಮೂಲಕ ಅಗ್ರ ಸ್ಥಾನ ಸಾಧಿಸಿದ್ದ ಕಿವೀಸ್ ಗೆಲುವಿನ ಶೇಕಡಾವಾರು 66.66 ಆಗಿತ್ತು. ಇದೀಗ ಎರಡನೇ ಟೆಸ್ಟ್‌ನ ಗೆಲುವಿನ ನಂತರ ಗೆಲುವಿನ ಶೇಕಡಾವಾರು 75ಕ್ಕೆ ಏರಿದೆ.

5 / 8

ಕಿವೀಸ್ ನಂತರ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡದ ಗೆಲುವಿನ ಶೇಕಡಾವಾರು 55.00 ಆಗಿದೆ. ಇನ್ನು ಭಾರತ ತಂಡದ ಬಗ್ಗೆ ಹೇಳುವುದಾದರೆ ಸದ್ಯ ಮೂರನೇ ಸ್ಥಾನದಲ್ಲಿರುವ ಟೀಂ ಇಂಡಿಯಾದ ಗೆಲುವಿನ ಶೇಕಡಾವಾರು 52.77 ಆಗಿದೆ.

6 / 8

ಇದೀಗ ಭಾರತ ತಂಡ ಎರಡನೇ ಟೆಸ್ಟ್​ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದರೆ, ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯವನ್ನು ಮಣಿಸುವ ಮೂಲಕ ತಂಡ ನೇರವಾಗಿ ಎರಡನೇ ಸ್ಥಾನಕ್ಕೆ ತಲುಪಲಿದೆ. ಆದರೆ ನಂಬರ್ ಒನ್ ಆಗುವ ಸಾಧ್ಯತೆಗಳಿಲ್ಲ. ಇಲ್ಲಿಯವರೆಗೆ ಭಾರತ 6 ಟೆಸ್ಟ್ ಪಂದ್ಯಗಳನ್ನು ಆಡಿದ್ದು ಮೂರರಲ್ಲಿ ಗೆದ್ದು ಎರಡರಲ್ಲಿ ಸೋತಿದೆ.

7 / 8

ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ಭಾರತದ ನಂತರ 50 ಗೆಲುವಿನ ಶೇಕಡಾವಾರು ಹೊಂದಿರುವ ಬಾಂಗ್ಲಾದೇಶ ತಂಡವು ನಾಲ್ಕನೇ ಸ್ಥಾನದಲ್ಲಿದೆ. ಐದನೇ ಸ್ಥಾನದಲ್ಲಿರುವ ಪಾಕಿಸ್ತಾನ ತಂಡ ಇದುವರೆಗೆ ಆಡಿದ 5 ಟೆಸ್ಟ್‌ಗಳಲ್ಲಿ ಎರಡರಲ್ಲಿ ಗೆದ್ದು ಮೂರರಲ್ಲಿ ಸೋತಿದೆ. ಇದರಿಂದಾಗಿ ಅದರ ಗೆಲುವಿನ ಶೇಕಡಾವಾರು 36.66 ಆಗಿದೆ.

8 / 8

ಮುಂದಿನ ದಿನಗಳಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್ ವಿರುದ್ಧ ಉಳಿದ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದ್ದರೆ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಅವಧಿಯಲ್ಲೂ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯಲ್ಲಿ ಸಾಕಷ್ಟು ಬದಲಾವಣೆಗಳನ್ನು ಕಾಣಬಹುದಾಗಿದೆ.

Published On - 9:41 pm, Fri, 16 February 24

Loading...
Unable to load recommendations.
Follow Us