WTC Points Table: ಅಗ್ರಸ್ಥಾನಕ್ಕೇರಿದ ನ್ಯೂಜಿಲೆಂಡ್; ಜಾರಿದ ಟೀಂ ಇಂಡಿಯಾ..!

|

Updated on: Feb 07, 2024 | 4:38 PM

WTC Points Table 2024: ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಕಿವೀ ತಂಡ ಅಂದರೆ ನ್ಯೂಜಿಲೆಂಡ್ 281 ರನ್‌ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದ ಗೆಲುವಿನೊಂದಿಗೆ ಡಬ್ಲ್ಯುಟಿಸಿಯ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ತಲುಪಿದೆ. ನ್ಯೂಜಿಲೆಂಡ್ ಅಗ್ರಸ್ಥಾನಕ್ಕೇರಿದ ಕಾರಣ ಇದೀಗ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ಒಂದೊಂದು ಸ್ಥಾನ ಕುಸಿತ ಕಂಡಿವೆ.

1 / 6
ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ನಡುವಿನ  ಮೊದಲ ಟೆಸ್ಟ್ ಪಂದ್ಯದ ಮುಕ್ತಾಯದ ನಂತರ ಡಬ್ಲ್ಯುಟಿಸಿಯ ಪಾಯಿಂಟ್ ಪಟ್ಟಿಯಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ. ಅದರಂತೆ ಕೆಲ ದಿನಗಳ ಹಿಂದೆಯಷ್ಟೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಎರಡನೇ ಸ್ಥಾನಕ್ಕೆ ತಲುಪಿತ್ತು. ಆದರೆ ಇದೀಗ ಮತ್ತೊಮ್ಮೆ ಟಾಪ್ 2 ರಿಂದ ಹೊರಬಿದ್ದಿದ್ದು, ಹೊಸ ತಂಡವೊಂದು ಟಾಪ್ 2 ರೊಳಗೆ ಪ್ರವೇಶಿಸಿದೆ.

2 / 6
ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆದ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಕಿವೀ ತಂಡ ಅಂದರೆ ನ್ಯೂಜಿಲೆಂಡ್ 281 ರನ್‌ಗಳಿಂದ ಗೆದ್ದುಕೊಂಡಿದೆ. ಈ ಪಂದ್ಯದ ಗೆಲುವಿನೊಂದಿಗೆ ಡಬ್ಲ್ಯುಟಿಸಿಯ ಪಾಯಿಂಟ್ಸ್ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ತಲುಪಿದೆ ನ್ಯೂಜಿಲೆಂಡ್ ಅಗ್ರಸ್ಥಾನಕ್ಕೇರಿದ ಕಾರಣ ಇದೀಗ ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ಒಂದೊಂದು ಸ್ಥಾನ ಕುಸಿತ ಕಂಡಿವೆ.

3 / 6
ಟೀಂ ಇಂಡಿಯಾ ಈಗ ಎರಡನೇ ಸ್ಥಾನದಿಂದ ಮೂರನೇ ಸ್ಥಾನಕ್ಕೆ ಜಾರಿದ್ದರೆ, ಆಸ್ಟ್ರೇಲಿಯಾ ತಂಡ ತನ್ನ ಮೊದಲ ಸ್ಥಾನವನ್ನು ಕಳೆದುಕೊಂಡು ಎರಡನೇ ಸ್ಥಾನಕ್ಕೆ ಇಳಿದಿದೆ. ನ್ಯೂಜಿಲೆಂಡ್ ತಂಡ ಈ ಸೀಸನ್​ನಲ್ಲಿ ಮೊದಲ ಬಾರಿಗೆ ಅಗ್ರಸ್ಥಾನವನ್ನು ತಲುಪಿದ್ದು, ಮುಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಅಗ್ರಸ್ಥಾನವನ್ನು ಉಳಿಸಿಕೊಳ್ಳಲು ಬಯಸುತ್ತಿದೆ.

4 / 6
ಡಬ್ಲ್ಯುಟಿಸಿ 2023- 25 ರ ಆವೃತ್ತಿಯಲ್ಲಿ ನ್ಯೂಜಿಲೆಂಡ್ ತಂಡ ಇದುವರೆಗೆ ಒಟ್ಟು ಮೂರು ಪಂದ್ಯಗಳನ್ನು ಆಡಿದೆ. ಅದರಲ್ಲಿ ಎರಡು ಪಂದ್ಯಗಳನ್ನು ಗೆದ್ದಿದ್ದು, ಒಂದೇ ಒಂದು ಪಂದ್ಯದಲ್ಲಿ ಸೋಲನ್ನು ಎದುರಿಸಿದೆ. ಈ ಮೂಲಕ ನ್ಯೂಜಿಲೆಂಡ್ ತಂಡ 66.66 ಪಿಟಿಸಿ ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ.

5 / 6
ಭಾರತ ತಂಡ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನೂ ಆಡುತ್ತಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಸೋಲನುಭವಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳಿದ್ದ ಭಾರತ ಭಾರಿ ಅಂತರದ ಗೆಲುವು ಸಾಧಿಸಿತ್ತು.

6 / 6
ಡಬ್ಲ್ಯುಟಿಸಿ 2023- 25 ರ ಆವೃತ್ತಿಯಲ್ಲಿ ಟೀಂ ಇಂಡಿಯಾ ಇದುವರೆಗೆ 6 ಪಂದ್ಯಗಳಲ್ಲಿ ಮೂರು ಗೆಲುವು, ಎರಡು ಸೋಲು ಮತ್ತು ಒಂದು ಡ್ರಾದೊಂದಿಗೆ WTC ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹಾಗೆಯೇ 52.77 ಪಿಟಿಸಿ ಪಾಯಿಂಟ್ಸ್ ಹೊಂದಿದ್ದು, ಭಾರತಕ್ಕಿಂತ ಸ್ವಲ್ಪ ಮೇಲಿರುವ ಆಸ್ಟ್ರೇಲಿಯಾ ತಂಡ 55 ಪಿಟಿಸಿ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.