WTC Points Table: ಬಾಂಗ್ಲಾ- ಇಂಗ್ಲೆಂಡ್ ಗೆಲುವು; ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ ಏನೆಲ್ಲ ಬದಲಾವಣೆ?
WTC Points Table: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳನ್ನು ಗೆಲ್ಲಲು ಶಕ್ತವಾಗಿದ್ದು, 4 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಶೇಕಡಾ 30.56 ಗೆಲುವಿನೊಂದಿಗೆ ಪಾಕ್ ತಂಡ ಇದರೊಂದಿಗೆ 8 ನೇ ಸ್ಥಾನಕ್ಕೆ ಜಾರಿದೆ.
1 / 7
25 ವರ್ಷಗಳ ನಂತರ ಬಾಂಗ್ಲಾದೇಶ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧ ಐತಿಹಾಸಿಕ ಜಯ ದಾಖಲಿಸಿದೆ. 1999ರ ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಮೊದಲ ಬಾರಿಗೆ ಏಕದಿನ ಪಂದ್ಯದಲ್ಲಿ ಸೋಲಿಸಿದ ಬಾಂಗ್ಲಾದೇಶ, 25 ವರ್ಷಗಳ ನಂತರ ಈ ತಂಡದ ವಿರುದ್ಧ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಗೆದ್ದು ಇತಿಹಾಸ ಸೃಷ್ಟಿಸಿದೆ. ಇದರೊಂದಿಗೆ ಬಾಂಗ್ಲಾದೇಶ ತಂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್ಸ್ ಪಟ್ಟಿಯಲ್ಲಿ ಭಾರಿ ಲಾಭ ಪಡೆದಿದೆ.
2 / 7
ಭಾನುವಾರ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ 10 ವಿಕೆಟ್‌ಗಳ ಜಯದೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಆರನೇ ಸ್ಥಾನವನ್ನು ಪಡೆದುಕೊಂಡಿದೆ. ಅದೇ ಸಮಯದಲ್ಲಿ ಇಂಗ್ಲೆಂಡ್ ಕೂಡ ಶ್ರೀಲಂಕಾ ವಿರುದ್ಧದ ಗೆಲುವಿನೊಂದಿಗೆ ಮುಂಬಡ್ತಿ ಪಡೆಯುವಲ್ಲಿ ಯಶಸ್ವಿಯಾಗಿದೆ.
3 / 7
ಈ ಗೆಲುವಿನೊಂದಿಗೆ ಬಾಂಗ್ಲಾದೇಶ ತಂಡ 40 ರ ಶೇಕಡವಾರುವಿನೊಂದಿಗೆ 24 ಅಂಕಗಳೊಂದಿಗೆ ಆರನೇ ಸ್ಥಾನಕ್ಕೆ ತಲುಪಿದೆ. ಈ ಪಂದ್ಯಕ್ಕೂ ಮುನ್ನ ಬಾಂಗ್ಲಾ ತಂಡ ಎಂಟನೇ ಸ್ಥಾನದಲ್ಲಿತ್ತು. ಅದೇ ವೇಳೆ ಈ ಸೋಲಿನಿಂದ ಪಾಕಿಸ್ತಾನ ತಂಡ ಏಳನೇ ಸ್ಥಾನದಿಂದ ಎಂಟನೇ ಸ್ಥಾನಕ್ಕೆ ಕುಸಿದಿದೆ.
4 / 7
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು, ಕೇವಲ 2 ಪಂದ್ಯಗಳನ್ನು ಗೆಲ್ಲಲು ಶಕ್ತವಾಗಿದ್ದು, 4 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಶೇಕಡಾ 30.56 ಗೆಲುವಿನೊಂದಿಗೆ ಪಾಕ್ ತಂಡ ಇದರೊಂದಿಗೆ 8 ನೇ ಸ್ಥಾನಕ್ಕೆ ಜಾರಿದೆ.
5 / 7
ಮತ್ತೊಂದೆಡೆ, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಐದು ವಿಕೆಟ್‌ಗಳ ಜಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಪಾಯಿಂಟ್‌ಗಳ ಪಟ್ಟಿಯಲ್ಲಿ ಭಾರಿ ಜಿಗಿತವನ್ನು ಸಾಧಿಸಿದೆ. ಶ್ರೀಲಂಕಾವನ್ನು ಸೋಲಿಸುವ ಮೂಲಕ ಓಲಿ ಪೋಪ್ ನೇತೃತ್ವದ ತಂಡ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
6 / 7
ಈ ಆವೃತ್ತಿಯಲ್ಲಿ 14 ಟೆಸ್ಟ್ ಪಂದ್ಯಗಳನ್ನಾಡಿರುವ ಇಂಗ್ಲೆಂಡ್‌ಗೆ ಇದು ಏಳನೇ ಗೆಲುವು. ಇದರೊಂದಿಗೆ ಇಂಗ್ಲೆಂಡ್ ತಂಡ ಇದೀಗ ನಾಲ್ಕನೇ ಸ್ಥಾನಕ್ಕೆ ತಲುಪಿದ್ದು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ರೇಸ್ನಲ್ಲಿ ಇನ್ನು ಜೀವಂತವಾಗುಳಿದಿದೆ. ಈ ಹಿಂದೆ ಇಂಗ್ಲೆಂಡ್ ತಂಡ ಆರನೇ ಸ್ಥಾನದಲ್ಲಿತ್ತು.
7 / 7
ಭಾರತ ಮತ್ತು ಹಾಲಿ ಚಾಂಪಿಯನ್ ಆಸ್ಟ್ರೇಲಿಯ ಕ್ರಮವಾಗಿ 68.5 ಮತ್ತು 62.5 ಅಂಕಗಳೊಂದಿಗೆ ಮೊದಲ ಎರಡು ಸ್ಥಾನಗಳಲ್ಲಿ ಉಳಿದಿವೆ. ಭಾರತ ತಂಡ ಸೆಪ್ಟೆಂಬರ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ಎರಡು ಟೆಸ್ಟ್‌ಗಳ ಸರಣಿಯನ್ನು ಆಡಬೇಕಿದೆ. ಮೊದಲ ಪಂದ್ಯ ಸೆಪ್ಟೆಂಬರ್ 19 ರಿಂದ ಚೆನ್ನೈನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಕಾನ್ಪುರದಲ್ಲಿ ಸೆಪ್ಟೆಂಬರ್ 27 ರಿಂದ ನಡೆಯಲಿದೆ. ಇದಾದ ನಂತರ, ನವೆಂಬರ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಪ್ರತಿಷ್ಠಿತ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ನಡೆಯಲಿದೆ.