- Kannada News Photo gallery Cricket photos WTC Updated Points Table after pakistan vs england multan test kannada news
WTC Points Table: ಇಂಗ್ಲೆಂಡ್ ವಿರುದ್ಧ ಸೋತು ಡಬ್ಲ್ಯುಟಿಸಿ ಫೈನಲ್ ರೇಸ್ನಿಂದ ಹೊರಬಿದ್ದ ಪಾಕ್
WTC Points Table: ಪಾಕಿಸ್ತಾನದ ಈ ಸೋಲಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅದರಂತೆ ಪಾಯಿಂಟ್ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡ ಭಾರಿ ಮುನ್ನಡೆ ಸಾಧಿಸಿದ್ದರೆ, ಪಾಕಿಸ್ತಾನದ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಇದೀಗ ಪಾಕಿಸ್ತಾನಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಬಾಗಿಲು ಬಹುತೇಕ ಮುಚ್ಚಿದೆ.
Updated on:Oct 11, 2024 | 4:18 PM

ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಮತ್ತೊಮ್ಮೆ ತವರಿನಲ್ಲಿ ಹೀನಾಯ ಸೋಲು ಎದುರಿಸಿದೆ. ಮೊದಲ ಇನ್ನಿಂಗ್ಸ್ನಲ್ಲಿ 500 ಕ್ಕೂ ಅಧಿಕ ರನ್ ಬಾರಿಸಿದ ಹೊರತಾಗಿಯೂ ಪಾಕಿಸ್ತಾನ ತಂಡ ಇನಿಂಗ್ಸ್ ಮತ್ತು 47 ರನ್‌ಗಳ ಅವಮಾನಕರ ಸೋಲಿಗೆ ತುತ್ತಾಗಿದೆ.

ಪಾಕಿಸ್ತಾನದ ಈ ಸೋಲಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅದರಂತೆ ಪಾಯಿಂಟ್ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡ ಭಾರಿ ಮುನ್ನಡೆ ಸಾಧಿಸಿದ್ದರೆ, ಪಾಕಿಸ್ತಾನದ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಇದೀಗ ಪಾಕಿಸ್ತಾನಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಬಾಗಿಲು ಬಹುತೇಕ ಮುಚ್ಚಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಸುಧಾರಿಸಿದೆ. ಇಂಗ್ಲೆಂಡ್ ತಂಡ ಇದೀಗ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕುವ ಮೂಲಕ ನಾಲ್ಕನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಇಂಗ್ಲೆಂಡ್ ತಂಡ ಇದುವರೆಗೆ ಆಡಿರುವ 17 ಪಂದ್ಯಗಳಲ್ಲಿ 9 ಗೆಲುವು ಮತ್ತು 7 ಸೋಲಿನೊಂದಿಗೆ 93 ಅಂಕಗಳನ್ನು ಹೊಂದಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಇಂಗ್ಲೆಂಡ್ ಬಲವಾದ ಹೆಜ್ಜೆ ಇಟ್ಟಿದೆ.

ಇತ್ತ ಈ ಟೆಸ್ಟ್ಗೂ ಮುನ್ನ ಬಾಂಗ್ಲಾದೇಶ ತಂಡದ ವಿರುದ್ಧ ಪಾಕಿಸ್ತಾನ ತಂಡ ಹೀನಾಯ ಸೋಲು ಕಂಡಿತ್ತು. ಇದೀಗ ಮುಲ್ತಾನ್ ಟೆಸ್ಟ್ನಲ್ಲಿ ಶಾನ್ ಮಸೂದ್ ತಂಡವನ್ನು ಇಂಗ್ಲೆಂಡ್ ಸೋಲಿಸಿದೆ. ಈ ಸೋಲಿನೊಂದಿಗೆ ಇದೀಗ ಪಾಕಿಸ್ತಾನಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಬಾಗಿಲು ಬಹುತೇಕ ಮುಚ್ಚಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂಕಪಟ್ಟಿಯಲ್ಲಿ ಪಾಕ್ ತಂಡ ಎಂಟನೇ ಸ್ಥಾನದಲ್ಲಿದ್ದು, ಪಾಕಿಸ್ತಾನ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 2ರಲ್ಲಿ ಮಾತ್ರ ಗೆದ್ದಿದೆ.

ಮುಲ್ತಾನ್ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ತಂಡ ಇನಿಂಗ್ಸ್ ಮತ್ತು 47 ರನ್‌ಗಳಿಂದ ಗೆದ್ದಿದೆ. ಮೊದಲ ಇನಿಂಗ್ಸ್‌ನಲ್ಲಿ 550ಕ್ಕೂ ಹೆಚ್ಚು ರನ್ ಗಳಿಸಿದ್ದರೂ ಪಾಕಿಸ್ತಾನ ಇಂತಹ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 823 ರನ್ ಗಳಿಸಿತ್ತು.

ಇಂಗ್ಲೆಂಡ್ ಪರ ಹ್ಯಾರಿ ಬ್ರೂಕ್ ತ್ರಿಶತಕ ಹಾಗೂ ಜೋ ರೂಟ್ ದ್ವಿಶತಕ ಬಾರಿಸಿದರು. ಈ ಮೂಲಕ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್ನಲ್ಲಿ 267 ರನ್‌ಗಳ ಮುನ್ನಡೆ ಪಡೆಯಿತು. ಈ ಗುರಿ ಬೆನ್ನಟ್ಟಿದ ಪಾಕ್ ತಂಡ ಕೇವಲ 220 ರನ್ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಇಂಗ್ಲೆಂಡ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
Published On - 4:16 pm, Fri, 11 October 24
