AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Points Table: ಇಂಗ್ಲೆಂಡ್‌ ವಿರುದ್ಧ ಸೋತು ಡಬ್ಲ್ಯುಟಿಸಿ ಫೈನಲ್ ರೇಸ್​ನಿಂದ ಹೊರಬಿದ್ದ ಪಾಕ್

WTC Points Table: ಪಾಕಿಸ್ತಾನದ ಈ ಸೋಲಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅದರಂತೆ ಪಾಯಿಂಟ್ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡ ಭಾರಿ ಮುನ್ನಡೆ ಸಾಧಿಸಿದ್ದರೆ, ಪಾಕಿಸ್ತಾನದ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಇದೀಗ ಪಾಕಿಸ್ತಾನಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಬಾಗಿಲು ಬಹುತೇಕ ಮುಚ್ಚಿದೆ.

ಪೃಥ್ವಿಶಂಕರ
|

Updated on:Oct 11, 2024 | 4:18 PM

Share
ಪಾಕಿಸ್ತಾನ ಮತ್ತು ಇಂಗ್ಲೆಂಡ್ ನಡುವೆ ಮುಲ್ತಾನ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಮತ್ತೊಮ್ಮೆ ತವರಿನಲ್ಲಿ ಹೀನಾಯ ಸೋಲು ಎದುರಿಸಿದೆ. ಮೊದಲ ಇನ್ನಿಂಗ್ಸ್​ನಲ್ಲಿ 500 ಕ್ಕೂ ಅಧಿಕ ರನ್ ಬಾರಿಸಿದ ಹೊರತಾಗಿಯೂ ಪಾಕಿಸ್ತಾನ ತಂಡ ಇನಿಂಗ್ಸ್ ಮತ್ತು 47 ರನ್‌ಗಳ ಅವಮಾನಕರ ಸೋಲಿಗೆ ತುತ್ತಾಗಿದೆ.

1 / 7
ಪಾಕಿಸ್ತಾನದ ಈ ಸೋಲಿನೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂಕಪಟ್ಟಿಯಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಅದರಂತೆ ಪಾಯಿಂಟ್ ಪಟ್ಟಿಯಲ್ಲಿ ಇಂಗ್ಲೆಂಡ್ ತಂಡ ಭಾರಿ ಮುನ್ನಡೆ ಸಾಧಿಸಿದ್ದರೆ, ಪಾಕಿಸ್ತಾನದ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ. ಇದೀಗ ಪಾಕಿಸ್ತಾನಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಬಾಗಿಲು ಬಹುತೇಕ ಮುಚ್ಚಿದೆ.

2 / 7
ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಇಂಗ್ಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಸುಧಾರಿಸಿದೆ. ಇಂಗ್ಲೆಂಡ್ ತಂಡ ಇದೀಗ ನ್ಯೂಜಿಲೆಂಡ್ ಮತ್ತು ದಕ್ಷಿಣ ಆಫ್ರಿಕಾವನ್ನು ಹಿಂದಿಕ್ಕುವ ಮೂಲಕ ನಾಲ್ಕನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

3 / 7
ಮೂರನೇ ಆವೃತ್ತಿಯ  ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ನಲ್ಲಿ ಇಂಗ್ಲೆಂಡ್ ತಂಡ ಇದುವರೆಗೆ ಆಡಿರುವ 17 ಪಂದ್ಯಗಳಲ್ಲಿ 9 ಗೆಲುವು ಮತ್ತು 7 ಸೋಲಿನೊಂದಿಗೆ 93 ಅಂಕಗಳನ್ನು ಹೊಂದಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಇಂಗ್ಲೆಂಡ್ ಬಲವಾದ ಹೆಜ್ಜೆ ಇಟ್ಟಿದೆ.

4 / 7
ಇತ್ತ ಈ ಟೆಸ್ಟ್​ಗೂ ಮುನ್ನ ಬಾಂಗ್ಲಾದೇಶ ತಂಡದ ವಿರುದ್ಧ ಪಾಕಿಸ್ತಾನ ತಂಡ ಹೀನಾಯ ಸೋಲು ಕಂಡಿತ್ತು. ಇದೀಗ ಮುಲ್ತಾನ್ ಟೆಸ್ಟ್​ನಲ್ಲಿ ಶಾನ್ ಮಸೂದ್ ತಂಡವನ್ನು ಇಂಗ್ಲೆಂಡ್ ಸೋಲಿಸಿದೆ. ಈ ಸೋಲಿನೊಂದಿಗೆ ಇದೀಗ ಪಾಕಿಸ್ತಾನಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನ ಬಾಗಿಲು ಬಹುತೇಕ ಮುಚ್ಚಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಅಂಕಪಟ್ಟಿಯಲ್ಲಿ ಪಾಕ್ ತಂಡ ಎಂಟನೇ ಸ್ಥಾನದಲ್ಲಿದ್ದು, ಪಾಕಿಸ್ತಾನ ಇದುವರೆಗೆ ಆಡಿರುವ 7 ಪಂದ್ಯಗಳಲ್ಲಿ 2ರಲ್ಲಿ ಮಾತ್ರ ಗೆದ್ದಿದೆ.

5 / 7
ಮುಲ್ತಾನ್ ಟೆಸ್ಟ್ ಪಂದ್ಯವನ್ನು ಇಂಗ್ಲೆಂಡ್ ತಂಡ ಇನಿಂಗ್ಸ್ ಮತ್ತು 47 ರನ್‌ಗಳಿಂದ ಗೆದ್ದಿದೆ. ಮೊದಲ ಇನಿಂಗ್ಸ್‌ನಲ್ಲಿ 550ಕ್ಕೂ ಹೆಚ್ಚು ರನ್ ಗಳಿಸಿದ್ದರೂ ಪಾಕಿಸ್ತಾನ ಇಂತಹ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಇಂಗ್ಲೆಂಡ್ 7 ವಿಕೆಟ್ ಕಳೆದುಕೊಂಡು ಬರೋಬ್ಬರಿ 823 ರನ್ ಗಳಿಸಿತ್ತು.

6 / 7
ಇಂಗ್ಲೆಂಡ್ ಪರ ಹ್ಯಾರಿ ಬ್ರೂಕ್ ತ್ರಿಶತಕ ಹಾಗೂ ಜೋ ರೂಟ್ ದ್ವಿಶತಕ ಬಾರಿಸಿದರು. ಈ ಮೂಲಕ ಇಂಗ್ಲೆಂಡ್‌ ಮೊದಲ ಇನ್ನಿಂಗ್ಸ್​ನಲ್ಲಿ 267 ರನ್​ಗಳ ಮುನ್ನಡೆ ಪಡೆಯಿತು. ಈ ಗುರಿ ಬೆನ್ನಟ್ಟಿದ ಪಾಕ್ ತಂಡ ಕೇವಲ 220 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಇಂಗ್ಲೆಂಡ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

7 / 7

Published On - 4:16 pm, Fri, 11 October 24

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್

ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!

KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?

ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ

ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್

ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ

ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್