WTC points table: ಲಂಕಾವನ್ನು ಮಣಿಸಿ ಡಬ್ಲ್ಯುಟಿಸಿ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಆಫ್ರಿಕಾ
WTC points table: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್ನಲ್ಲಿರಿವ ದಕ್ಷಿಣ ಆಫ್ರಿಕಾ ತಂಡ ಶ್ರೀಲಂಕಾ ವಿರುದ್ಧ ಅಮೋಘ ಜಯ ಸಾಧಿಸುವ ಮೂಲಕ ಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.ಹೀಗಾಗಿ ಆಸ್ಟ್ರೇಲಿಯಾ ಮೂರನೇ ಸ್ಥಾನಕ್ಕೆ ಕುಸಿದಿದೆ. ಇದೀಗ ಟೀಂ ಇಂಡಿಯಾ ಕೂಡ ಮೊದಲ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದೆ.
1 / 6
2023-25ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ರೇಸ್ ಪಂದ್ಯದಿಂದ ಪಂದ್ಯಕ್ಕೆ ಕುತೂಹಲಕಾರಿ ಘಟ್ಟ ತಲುಪುತ್ತಿದೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ಸೇರಿದಂತೆ ಒಟ್ಟು 5 ತಂಡಗಳು ಫೈನಲ್ ತಲುಪಲು ಸ್ಪರ್ಧಿಗಳಾಗಿವೆ. ಇತ್ತೀಚೆಗಷ್ಟೇ ಪರ್ತ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಪಾಯಿಂಟ್ಸ್ ಪಟ್ಟಿಯಲ್ಲಿ ಮತ್ತೊಮ್ಮೆ ಮೊದಲ ಸ್ಥಾನ ಗಳಿಸಿತ್ತು.
2 / 6
ಆದರೆ ಇದೀಗ ಆಸ್ಟ್ರೇಲಿಯಾಕ್ಕೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದ್ದು, ಮೊದಲ ಟೆಸ್ಟ್ ಸೋತಿರುವ ಕಾಂಗರೂ ಪಡೆ ಟಾಪ್-2ರಿಂದಲೂ ಹೊರಗುಳಿದಿದೆ. ಅದೇ ಸಮಯದಲ್ಲಿ ಈ ಹಿಂದೆ 5 ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾ ರಂಡ ನೇರವಾಗಿ ಎರಡನೇ ಸ್ಥಾನಕ್ಕೆ ಬಂದಿದೆ. ಅಂದರೆ ಫೈನಲ್ ರೇಸ್ನಲ್ಲಿ ಆಫ್ರಿಕಾ ತಂಡಕ್ಕೆ ಭಾರಿ ಮುನ್ನಡೆ ಸಿಕ್ಕಿದೆ.
3 / 6
ಪ್ರಸ್ತುತ ಶ್ರೀಲಂಕಾ ಹಾಗೂ ದಕ್ಷಿಣ ಆಫ್ರಿಕಾ ನಡುವೆ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯ ಕಿಂಗ್ಸ್‌ಮೀಡ್ ಡರ್ಬಿಯಲ್ಲಿ ನಡೆಯಿತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ 233 ರನ್‌ಗಳ ಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂಕಪಟ್ಟಿಯನ್ನು ಸಂಪೂರ್ಣವಾಗಿ ಬದಲಾಯಿಸಿದೆ.
4 / 6
ದಕ್ಷಿಣ ಆಫ್ರಿಕಾ ಇದುವರೆಗೆ ಆಡಿರುವ 9 ಪಂದ್ಯಗಳಲ್ಲಿ 5 ಗೆಲುವು ಮತ್ತು 3 ಸೋಲುಗಳೊಂದಿಗೆ 59.25 ಶೇಕಡಾವಾರು ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೇರಿದೆ. ಇದರಿಂದಾಗಿ ಆಸ್ಟ್ರೇಲಿಯಾ ತಂಡ ಮೂರನೇ ಸ್ಥಾನಕ್ಕೆ ಜಾರಿದೆ. ಮತ್ತೊಂದೆಡೆ ಶ್ರೀಲಂಕಾ ತಂಡ 3ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಕುಸಿದಿದ್ದು ಅದರ ಶೇಕಡಾವಾರು ಅಂಕಗಳು 50.00 ಆಗಿವೆ.
5 / 6
ಉಳಿದಂತೆ ಟೀಂ ಇಂಡಿಯಾ 15 ಪಂದ್ಯಗಳಲ್ಲಿ 9 ಗೆಲುವು, ಶೇ.61.11 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಆಸ್ಟ್ರೇಲಿಯ ತಂಡ 13 ಪಂದ್ಯಗಳಲ್ಲಿ 8 ಗೆಲುವು ಮತ್ತು 57.69 ಶೇಕಡಾ ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಜಾರಿದೆ. ಇದರರ್ಥ ದಕ್ಷಿಣ ಆಫ್ರಿಕಾ ಈಗ ಟೀಂ ಇಂಡಿಯಾವನ್ನು ಹಿಂದಿಕ್ಕುವ ಅವಕಾಶವನ್ನು ಹೊಂದಿದೆ. ಹೀಗಾಗಿ ಟೀಂ ಇಂಡಿಯಾ ಅಡಿಲೇಡ್ ಟೆಸ್ಟ್‌ನಲ್ಲಿ ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕು.
6 / 6
ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ 191 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಶ್ರೀಲಂಕಾ ತಂಡವು ಈ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಕೇವಲ 13.5 ಓವರ್‌ಗಳಲ್ಲಿ 42 ರನ್ ಗಳಿಸಿ ಆಲೌಟ್ ಆಗಿತ್ತು. ಇದಾದ ಬಳಿಕ ಎರಡನೇ ಇನ್ನಿಂಗ್ಸ್ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ದಕ್ಷಿಣ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 366 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡು, ಶ್ರೀಲಂಕಾ ಗೆಲುವಿಗೆ 516 ರನ್‌ಗಳ ಗುರಿ ನೀಡಿತ್ತು. ಈ ಬೃಹತ್ ಗುರಿ ಬೆನ್ನಟ್ಟಿದ ಶ್ರೀಲಂಕಾ ತಂಡ 282 ರನ್‌ಗಳಿಗೆ ಆಲೌಟ್ ಆಗುವ ಮೂಲಕ, 233 ರನ್‌ಗಳಿಂದ ಸೋಲನುಭವಿಸಿತು.