AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ವೇಗಿ ಯಶ್ ದಯಾಳ್​ಗೆ ನಿಷೇಧ..!

Yash Dayal: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಡಗೈ ವೇಗಿ ಯಶ್ ದಯಾಳ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಮತ್ತೊಂದೆಡೆ ಲೈಂಗಿಕ ದೌರ್ಜನ್ಯದ ಆರೋಪದಡಿಯಲ್ಲಿ ಉತ್ತರ ಪ್ರದೇಶದ ಗಾಝಿಯಾಬಾದ್​ ಠಾಣೆಯಲ್ಲಿ ದಯಾಳ್ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತ ಎಫ್​ಐಆರ್​ ದಾಖಲಾಗಿರುವ ಕಾರಣ ಯಶ್ ದಯಾಳ್ ಅವರನ್ನು ಬಂಧಿಸುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on:Aug 10, 2025 | 11:54 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಉತ್ತರ ಪ್ರದೇಶ ಟಿ20 ಲೀಗ್​ನಿಂದ ನಿಷೇಧಿಸಲಾಗಿದೆ ಎಂದು ವರದಿಯಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿರುವ ಯಶ್ ದಯಾಳ್ ಅವರನ್ನು UPT20 2025 ಲೀಗ್​ನಿಂದ ಕೈ ಬಿಡಲಾಗಿದ್ದು, ಹೀಗಾಗಿ ಮುಂಬರುವ ಟೂರ್ನಿಯಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ.

1 / 5
ಯಶ್ ದಯಾಳ್ ಮೇಲೆ 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪವಿದೆ. ಈ ಪ್ರಕರಣ ಸಂಬಂಧ ಬಂಧನದ ಭೀತಿಯನ್ನು ಸಹ ಎದುರಿಸುತ್ತಿದ್ದಾರೆ. ಹೀಗಾಗಿ ಯುಪಿ ಕ್ರಿಕೆಟ್ ಅಸೋಸಿಯೇಷನ್ (ಯುಪಿಸಿಎ) ಮುಂಬರುವ ಉತ್ತರ ಪ್ರದೇಶ ಟಿ20 ಲೀಗ್​ನಲ್ಲಿ ಕಣಕ್ಕಿಳಿಯದಂತೆ ಯಶ್ ದಯಾಳ್​ಗೆ ಸೂಚಿಸಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2 / 5
ಈ ಬಾರಿಯ ಉತ್ತರ ಪ್ರದೇಶ ಟಿ20 ಲೀಗ್​ನಲ್ಲಿ ಯಶ್ ದಯಾಳ್  ಗೋರಖ್‌ಪುರ ಲಯನ್ಸ್ ಪರ ಕಣಕ್ಕಿಳಿಯಬೇಕಿತ್ತು. ಕಳೆದ ಬಾರಿ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಆರ್​ಸಿಬಿ ವೇಗಿಯನ್ನು ಗೋರಖ್​ಪುರ್ ಲಯನ್ಸ್ ಫ್ರಾಂಚೈಸಿಯು 7 ಲಕ್ಷ ರೂ. ನೀಡಿ ಖರೀದಿಸಿದ್ದರು. ಆದರೀಗ ದಯಾಳ್ ಅವರನ್ನು ಕೈ ಬಿಡುವಂತೆ ಗೋರಖ್​ಪುರ್ ಲಯನ್ಸ್ ಫ್ರಾಂಚೈಸಿಗೆ ಯುಪಿಸಿಎ ತಿಳಿಸಿದೆ.

3 / 5
ಇದಕ್ಕೂ ಮುನ್ನ ಯಶ್ ದಯಾಳ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 15 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಜೋಶ್ ಹೇಝಲ್​ವುಡ್ ಜೊತೆ ದಾಳಿ ಸಂಘಟಿಸಿದ್ದ ಎಡಗೈ ವೇಗಿ ಒಟ್ಟು 13 ವಿಕೆಟ್​ಗಳನ್ನು ಸಹ ಕಬಳಿಸಿದ್ದರು. ಈ ಮೂಲಕ ಆರ್​ಸಿಬಿ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

4 / 5
ಈ ಗೆಲುವಿನ ಸಂಭ್ರಮದ ಬೆನ್ನಲ್ಲೇ ಯಶ್ ದಯಾಳ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿತ್ತು. ಅಲ್ಲದೆ ಈ ಬಗ್ಗೆ ಪ್ರಕರಣ ಕೂಡ ದಾಖಲಾಗಿದೆ. ಈ ಸಂಬಂಧ ಬಂಧನವನ್ನು ತಡೆ ಹಿಡಿಯುವಂತೆ ಯಶ್ ದಯಾಳ್ ಅವರಿಗೆ ರಾಜಸ್ಥಾನ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಪ್ರಕರಣದಲ್ಲಿ ಅವರ ಬಂಧನ ಮತ್ತು ಪೊಲೀಸ್ ಕ್ರಮಕ್ಕೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ. ಹೀಗಾಗಿ ಯುಪಿ ಟಿ20 ಲೀಗ್​ನಲ್ಲಿ ಕಣಕ್ಕಿಳಿಯದಂತೆ ಯಶ್ ದಯಾಳ್ ಅವರ ಮೇಲೆ ಯುಪಿಸಿಎ ನಿಷೇಧ ಹೇರಿದೆ.

5 / 5

Published On - 11:53 am, Sun, 10 August 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ

ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು

34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ