Yash Dayal: ಕೋಮು ದ್ವೇಷ ಹರಡಿ, ಬಳಿಕ ಕ್ಷಮೆ ಕೇಳಿದ ಯಶ್ ದಯಾಳ್

Yash Dayal Instagram Post: ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Jun 05, 2023 | 5:29 PM

ಗುಜರಾತ್ ಟೈಟಾನ್ಸ್ ತಂಡದ ವೇಗದ ಬೌಲರ್ ಯಶ್ ದಯಾಳ್ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದ ಫೋಟೋವೊಂದು ಇದೀಗ ವಿವಾದಕ್ಕೀಡಾಗಿದೆ.

1 / 8
ಇತ್ತೀಚೆಗೆ ದೆಹಲಿಯಲ್ಲಿ ಸಾಹಿಲ್ ಖಾನ್ ಎಂಬಾತ 16 ವರ್ಷದ ಬಾಲಕಿ ಸಾಕ್ಷಿಯನ್ನು 20 ಬಾರಿ ಇರಿದು ಭೀಕರವಾಗಿ ಕೊಲೆಗೈದಿದ್ದ. ಈ ಕೊಲೆಗೆ ಸಂಬಂಧಿಸಿದಂತೆ ದ್ವೇಷ ಹರಡುವ ಫೋಟೋವೊಂದನ್ನು ತಮ್ಮ ಅಧಿಕೃತ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಯಶ್ ದಯಾಳ್ ಹಂಚಿಕೊಂಡಿದ್ದರು.

2 / 8
ಸಮಾಜದಲ್ಲಿ ಕೋಮು ದ್ವೇಷ ಬಿತ್ತುವಂತಹ ಈ ಪೋಸ್ಟ್ ವೈರಲ್ ಆದ ಬೆನ್ನಲ್ಲೇ ಗುಜರಾತ್ ಟೈಟಾನ್ಸ್ ಆಟಗಾರನ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ಯಶ್ ದಯಾಳ್ ತಮ್ಮ ಇನ್​ಸ್ಟಾಗ್ರಾಮ್ ಸ್ಟೋರಿಯನ್ನು ಡಿಲೀಟ್ ಮಾಡಿದ್ದಾರೆ.

3 / 8
ಇದೀಗ ಈ ಫೋಟೋಗೆ ಸಂಬಂಧಿಸಿದಂತೆ ಯಶ್ ದಯಾಳ್ ಕ್ಷಮೆಯಾಚಿಸಿದ್ದಾರೆ. ಗೆಳೆಯರೇ, ಈ ಸ್ಟೋರಿಗಾಗಿ ಕ್ಷಮಾಪಣೆ. ತಪ್ಪಾಗಿ ಈ ಪೋಸ್ಟ್ ಮಾಡಲಾಗಿದ್ದು, ದಯವಿಟ್ಟು ಯಾರು ಕೂಡ ದ್ವೇಷವನ್ನು ಹರಡಬೇಡಿ. ಧನ್ಯವಾದಗಳು. ಪ್ರತಿ ಸಮುದಾಯ ಮತ್ತು ಸಮಾಜದ ಬಗ್ಗೆ ನನಗೆ ಗೌರವವಿದೆ" ಎಂದು ದಯಾಳ್ ತನ್ನ ಇನ್​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

4 / 8
ಅಂದಹಾಗೆ ಕಳೆದ ಸೀಸನ್​ನಿಂದ ಐಪಿಎಲ್ ಆಡುತ್ತಿರುವ ಯಶ್ ದಯಾಳ್ ಎಲ್ಲರಿಗೂ ಚಿರಪರಿಚಿತರಾಗಿದ್ದು ಈ ಬಾರಿಯ ಐಪಿಎಲ್​ ಮೂಲಕ ಎಂಬುದು ವಿಶೇಷ. ಅದು ಕೂಡ ರಿಂಕು ಸಿಂಗ್ ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದ ಎಂಬುದು ಮತ್ತೊಂದು ವಿಶೇಷ.

5 / 8
ಕೆಕೆಆರ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 204 ರನ್ ಪೇರಿಸಿತ್ತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಕೆಕೆಆರ್ ತಂಡಕ್ಕೆ ಗೆಲ್ಲಲು ಕೊನೆಯ ಓವರ್​ನಲ್ಲಿ 29 ರನ್​ಗಳ ಅವಶ್ಯಕತೆಯಿತ್ತು.

6 / 8
ಇತ್ತ 20ನೇ ಓವರ್​ನಲ್ಲಿ ದಾಳಿಗಿಳಿದ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ ಉಮೇಶ್ ಯಾದವ್ ಸಿಂಗಲ್ ತೆಗೆದಿದ್ದರು. ಉಳಿದ 5 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ ರಿಂಕು ಸಿಂಗ್ ಕೆಕೆಆರ್ ತಂಡಕ್ಕೆ ರಣರೋಚಕ ಜಯ ತಂದುಕೊಟ್ಟಿದ್ದರು.

7 / 8
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಹೊಡೆಸಿಕೊಂಡ ಬಳಿಕ ಖಿನ್ನತೆಗೆ ಒಳಗಾಗಿದ್ದ ಯಶ್ ದಯಾಳ್ 8 ಕೆ.ಜಿಗಳನ್ನು ಕಳೆದುಕೊಂಡು ಅನಾರೋಗ್ಯಕ್ಕೀಡಾಗಿದ್ದರು. ಆ ಬಳಿಕ ಒಂದು ಪಂದ್ಯದಲ್ಲಿ ಮಾತ್ರ ಅವರು ಕಣಕ್ಕಿಳಿದಿದ್ದರು. ಇದೀಗ ಕೋಮು ದ್ವೇಷಪೂರಿತ ಪೋಸ್ಟ್ ಹಂಚಿಕೊಳ್ಳುವ ಮೂಲಕ ಯಶ್ ದಯಾಳ್ ಮತ್ತೆ ಸುದ್ದಿಯಾಗಿದ್ದಾರೆ.

8 / 8
Follow us
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ

ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ

ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ

ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..

ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ