AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡದಿಂದ ಹೊರಬಿದ್ದ ಯಶ್ ದಯಾಳ್: RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್

IPL 2025: ಐಪಿಎಲ್ ಮೆಗಾ ಹರಾಜು ನಿಯಮದ ಪ್ರಕಾರ, ರಾಷ್ಟ್ರೀಯ ತಂಡದ ಪರ ಆಡದ ಹಾಗೂ ರಾಷ್ಟ್ರೀಯ ತಂಡದ ಪರ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್​ಕ್ಯಾಪ್ಡ್​ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು. ಹೀಗೆ ರಿಟೈನ್ ಮಾಡಲಾಗುವ ಅನ್​ಕ್ಯಾಪ್ಡ್​ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.

ಝಾಹಿರ್ ಯೂಸುಫ್
|

Updated on:Oct 12, 2024 | 8:05 AM

Share
ಅಕ್ಟೋಬರ್ 16 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್‌ ಸರಣಿಗೆ ಆಯ್ಕೆಯಾಗಿದ್ದ ಆಟಗಾರರನ್ನೇ ಈ ಸಿರೀಸ್​ಗೂ ಆಯ್ಕೆ ಮಾಡಲಾಗಿದೆ. ಆದರೆ ಈ  ಬಳಗದಿಂದ RCB ವೇಗಿಯನ್ನು ಮಾತ್ರ ಕೈ ಬಿಟ್ಟಿದ್ದಾರೆ.

1 / 6
ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದ್ದ 16 ಸದಸ್ಯರ ತಂಡದಲ್ಲಿ RCB ವೇಗಿ ಯಶ್ ದಯಾಳ್ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಕೇವಲ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಪರಿಣಾಮ ಯಶ್ ದಯಾಳ್ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ.

2 / 6
ಇತ್ತ ಯಶ್ ದಯಾಳ್ ಭಾರತ ತಂಡದಿಂದ ಹೊರಬಿದ್ದಿರುವುದು RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್. ಏಕೆಂದರೆ ಮುಂಬರುವ ಮೆಗಾ ಹರಾಜಿಗೂ ಮುನ್ನ ದಯಾಳ್ ಅವರನ್ನು ಆರ್​ಸಿಬಿ ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಬಹುದು.

3 / 6
ಒಂದು ವೇಳೆ ಯಶ್ ದಯಾಳ್ ಭಾರತ ತಂಡಕ್ಕೆ ಆಯ್ಕೆಯಾಗಿ ಕಣಕ್ಕಿಳಿದರೆ, ರಿಟೈನ್​ಗಾಗಿ ಅವರನ್ನು ರಾಷ್ಟ್ರೀಯ ಆಟಗಾರ ಎಂದು ಪರಿಗಣಿಸಬೇಕಾಗುತ್ತದೆ. ಇದರಿಂದ ಅವರನ್ನು ಉಳಿಸಿಕೊಳ್ಳಲು ಕನಿಷ್ಠ 11 ಕೋಟಿ ರೂ. ನೀಡಬೇಕಾಗುತ್ತದೆ.

4 / 6
ಇದೀಗ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಕಾರಣ, ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಪಾದಾರ್ಪಣೆ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಆರ್​ಸಿಬಿ ಫ್ರಾಂಚೈಸಿಯು ಯಶ್ ದಯಾಳ್ ಅವರನ್ನು ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಕೇವಲ 4 ಕೋಟಿ ರೂ.ಗೆ ಉಳಿಸಿಕೊಳ್ಳಬಹುದು.

5 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್),  ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.

6 / 6

Published On - 8:04 am, Sat, 12 October 24

ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಮೆಗ್ಗಾನ್ ಆಸ್ಪತ್ರೆ ವೈದ್ಯರ ಯಡವಟ್ಟು: ವಿದ್ಯಾರ್ಥಿನಿ ದುರಂತ ಸಾವು

ಫೇಕ್ ಸುದ್ದಿ ಹಬ್ಬಿಸುವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಕೊಪ್ಪಳ ಎಸ್ಪಿ

ಕ್ಯಾಂಟೀನ್‌ನಲ್ಲಿ ಬಾಣಂತಿಗೆ ನೀಡಿದ್ದ ಕೇಸರಿಬಾತ್‌ನಲ್ಲಿ ಹಲ್ಲಿ ಪತ್ತೆ

ವೈಷ್ಣವಿಯ ಟ್ಯಾಲೆಂಟ್​ಗೆ ಮನಸೋತ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್

ಭೂಮಿ ಹಿಂದಿರುಗಿಸಬೇಕೆಂದು ಆಂದೋಲನ ಘೋಷಿಸಿದ ಕುಮಾರಸ್ವಾಮಿ

ವಿಷ್ಣು ಅಮೃತ ಮಹೋತ್ಸವದಲ್ಲಿ ಶಿವಣ್ಣ ಮುತ್ತಿನಂಥ ಮಾತು: ವಿಡಿಯೋ

ಸ್ನೇಹಿತನಿಗೆ ಸೀಟ್‌ ಕೊಡಿಸಲು ಡೀಲ್‌; ಕನ್ನಾಳೆ ಶಿಷ್ಯನ ಕಳ್ಳಾಟ ಬಯಲು

ಚಿತ್ರರಂಗದಲ್ಲಿ ಮೂರು ದಶಕ: ಕಿಚ್ಚನಿಗೆ ರಿಷಬ್ ಶುಭಾಶಯ

ಏತ ನೀರಾವರಿ ಹೆಸರಲ್ಲಿ ಅವೈಜ್ಞಾನಿಕ ಕಾಮಗಾರಿ: ಸಾವಿರಾರು ಮರಗಳಿಗೆ ಅಪಾಯ

ಮಳೆ ಅಬ್ಬರ, ಭೂಕುಸಿತ ಬದರಿನಾಥ ರಾಷ್ಟ್ರೀಯ ಹೆದ್ದಾರಿ ಬಂದ್