ಭಾರತ ತಂಡದಿಂದ ಹೊರಬಿದ್ದ ಯಶ್ ದಯಾಳ್: RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್
IPL 2025: ಐಪಿಎಲ್ ಮೆಗಾ ಹರಾಜು ನಿಯಮದ ಪ್ರಕಾರ, ರಾಷ್ಟ್ರೀಯ ತಂಡದ ಪರ ಆಡದ ಹಾಗೂ ರಾಷ್ಟ್ರೀಯ ತಂಡದ ಪರ ಆಡಿ 5 ವರ್ಷ ಕಳೆದಿರುವ ಆಟಗಾರರನ್ನು ಅನ್ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ರಿಟೈನ್ ಮಾಡಿಕೊಳ್ಳಬಹುದು. ಹೀಗೆ ರಿಟೈನ್ ಮಾಡಲಾಗುವ ಅನ್ಕ್ಯಾಪ್ಡ್ ಆಟಗಾರರಿಗೆ ಕೇವಲ 4 ಕೋಟಿ ರೂ. ನೀಡಿದರೆ ಸಾಕು.
1 / 6
ಅಕ್ಟೋಬರ್ 16 ರಿಂದ ಶುರುವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದ ಆಟಗಾರರನ್ನೇ ಈ ಸಿರೀಸ್ಗೂ ಆಯ್ಕೆ ಮಾಡಲಾಗಿದೆ. ಆದರೆ ಈ ಬಳಗದಿಂದ RCB ವೇಗಿಯನ್ನು ಮಾತ್ರ ಕೈ ಬಿಟ್ಟಿದ್ದಾರೆ.
2 / 6
ಬಾಂಗ್ಲಾದೇಶ್ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಯ್ಕೆ ಮಾಡಲಾಗಿದ್ದ 16 ಸದಸ್ಯರ ತಂಡದಲ್ಲಿ RCB ವೇಗಿ ಯಶ್ ದಯಾಳ್ ಕಾಣಿಸಿಕೊಂಡಿದ್ದರು. ಆದರೆ ಈ ಬಾರಿ ಕೇವಲ 15 ಸದಸ್ಯರ ತಂಡವನ್ನು ಆಯ್ಕೆ ಮಾಡಲಾಗಿದೆ. ಪರಿಣಾಮ ಯಶ್ ದಯಾಳ್ ಟೀಮ್ ಇಂಡಿಯಾದಿಂದ ಹೊರಬಿದ್ದಿದ್ದಾರೆ.
3 / 6
ಇತ್ತ ಯಶ್ ದಯಾಳ್ ಭಾರತ ತಂಡದಿಂದ ಹೊರಬಿದ್ದಿರುವುದು RCB ಫ್ರಾಂಚೈಸಿಗೆ ಪ್ಲಸ್ ಪಾಯಿಂಟ್. ಏಕೆಂದರೆ ಮುಂಬರುವ ಮೆಗಾ ಹರಾಜಿಗೂ ಮುನ್ನ ದಯಾಳ್ ಅವರನ್ನು ಆರ್ಸಿಬಿ ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಉಳಿಸಿಕೊಳ್ಳಬಹುದು.
4 / 6
ಒಂದು ವೇಳೆ ಯಶ್ ದಯಾಳ್ ಭಾರತ ತಂಡಕ್ಕೆ ಆಯ್ಕೆಯಾಗಿ ಕಣಕ್ಕಿಳಿದರೆ, ರಿಟೈನ್ಗಾಗಿ ಅವರನ್ನು ರಾಷ್ಟ್ರೀಯ ಆಟಗಾರ ಎಂದು ಪರಿಗಣಿಸಬೇಕಾಗುತ್ತದೆ. ಇದರಿಂದ ಅವರನ್ನು ಉಳಿಸಿಕೊಳ್ಳಲು ಕನಿಷ್ಠ 11 ಕೋಟಿ ರೂ. ನೀಡಬೇಕಾಗುತ್ತದೆ.
5 / 6
ಇದೀಗ ಟೀಮ್ ಇಂಡಿಯಾದಿಂದ ಹೊರಬಿದ್ದಿರುವ ಕಾರಣ, ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಪಾದಾರ್ಪಣೆ ಮಾಡುವುದಿಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಆರ್ಸಿಬಿ ಫ್ರಾಂಚೈಸಿಯು ಯಶ್ ದಯಾಳ್ ಅವರನ್ನು ಅನ್ ಕ್ಯಾಪ್ಡ್ ಆಟಗಾರರ ಪಟ್ಟಿಯಲ್ಲಿ ಕೇವಲ 4 ಕೋಟಿ ರೂ.ಗೆ ಉಳಿಸಿಕೊಳ್ಳಬಹುದು.
6 / 6
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೇಲ್ (ವಿಕೆಟ್ ಕೀಪರ್), ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
Published On - 8:04 am, Sat, 12 October 24