AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಸಿಬಿ ವೇಗಿ ಯಶ್ ದಯಾಳ್​ಗೆ ಬಿಗ್ ರಿಲೀಫ್ ನೀಡಿದ ಅಲಹಾಬಾದ್ ಹೈಕೋರ್ಟ್

Cricketer Yash Dayal: ಮದುವೆಯ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಕ್ರಿಕೆಟಿಗ ಯಶ್ ದಯಾಳ್‌ಗೆ ಅಲಹಾಬಾದ್ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದ್ದು, ಯಶ್ ದಯಾಳ್ ತಮ್ಮ ಸಂಬಂಧವು ಸಮ್ಮತಿದಾಯಕವಾಗಿತ್ತು ಮತ್ತು ಯಾವುದೇ ಮದುವೆಯ ಭರವಸೆ ಇರಲಿಲ್ಲ ಎಂದು ವಾದಿಸಿದ್ದಾರೆ. ಪ್ರಸಿದ್ಧಿ ಪಡೆದ ನಂತರ ಹಣಕ್ಕಾಗಿ ಈ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪೃಥ್ವಿಶಂಕರ
|

Updated on: Jul 29, 2026 | 6:11 PM

Share
ಮದುವೆಯ ಆಮೀಷವೊಡ್ಡಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಕ್ರಿಕೆಟಿಗ ಯಶ್ ದಯಾಳ್​ಗೆ ಅಲಹಾಬಾದ್ ಹೈಕೋರ್ಟ್ ಬಿಗ್ ರಿಲೀಪ್ ನೀಡಿದೆ. ಯಶ್ ದಯಾಳ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ತಡೆ ನೀಡಿದೆ(PC-PTI).

1 / 6
ಗಾಜಿಯಾಬಾದ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಹೊರಡಿಸಿದ ಸಮನ್ಸ್ ಮತ್ತು ಇಡೀ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯ ತಡೆ ನೀಡಿದೆ. ಪೊಲೀಸ್ ಚಾರ್ಜ್‌ಶೀಟ್ ಮತ್ತು ವಿಚಾರಣಾ ನ್ಯಾಯಾಲಯದ ಕಾಗ್ನಿಜನ್ಸ್ ಆದೇಶವನ್ನು ಪ್ರಶ್ನಿಸಿ ಯಶ್ ದಯಾಳ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಮೂರ್ತಿ ಸಂಜಯ್ ಕುಮಾರ್ ಪಚೋರಿ ಅವರ ಏಕ ಪೀಠವು ಈ ಆದೇಶವನ್ನು ಹೊರಡಿಸಿದೆ(PC-PTI).

2 / 6
ಯಶ್ ದಯಳ್ ನನ್ನನ್ನು ಮದುವೆಯಾಗುವುದಾಗಿ ನಂಬಿಸಿ 5 ವರ್ಷಗಳ ಕಾಲ ಜೊತೆಗಿದ್ದು, ತನ್ನೊಂದಿಗೆ ದೈಹಿಕ ಸಂಪರ್ಕವನ್ನು ಹೊಂದಿದ ಬಳಿಕ ನನ್ನ ಮೇಲೆ ದೈಹಿಕ ದೌರ್ಜನ್ಯ ನಡೆಸಿ ನನ್ನನ್ನು ಮದುವೆಯಾಗಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಗಾಜಿಯಾಬಾದ್ ಪೊಲೀಸರು ಜುಲೈ 2025 ರಲ್ಲಿ ಯಶ್ ದಯಾಳ್ ವಿರುದ್ಧ ಪ್ರಕರಣ ದಾಖಲಿಸಿದ್ದರು(PC-PTI).

3 / 6
ಇದಕ್ಕೂ ಮೊದಲು, ಜುಲೈ 15, 2025 ರಂದು, ಎಫ್‌ಐಆರ್ ರದ್ದುಗೊಳಿಸುವಂತೆ ದಯಾಳ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಹೈಕೋರ್ಟ್ ಅವರ ಬಂಧನಕ್ಕೆ ತಡೆ ನೀಡಿತ್ತು. ಈಗ, ಆರೋಪಪಟ್ಟಿ ಸಲ್ಲಿಸಿದ ನಂತರ, ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗಳನ್ನು ರದ್ದುಗೊಳಿಸಲು ಅವರು ಪ್ರತ್ಯೇಕ ಅರ್ಜಿಯನ್ನು ಸಲ್ಲಿಸಿದ್ದಾರೆ(PC-PTI).

4 / 6
ಅರ್ಜಿಯಲ್ಲಿ ಯಶ್ ದಯಾಳ್, ತಮ್ಮ ಸಂಬಂಧವು ಮೊದಲಿನಿಂದಲೂ ಸಮ್ಮತಿಯಿಂದ ಕೂಡಿತ್ತು ಮತ್ತು ಮದುವೆಯ ಭರವಸೆ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ 2021 ರಲ್ಲಿ ದೈಹಿಕ ಸಂಬಂಧಗಳು ನಡೆದಿದ್ದು ನಿಜ ಎಂಬುದನ್ನು ಒಪ್ಪಿಕೊಂಡಿರುವ ದಯಾಳ್, ಆ ವೇಳೆ ಮದುವೆಯ ಬಗ್ಗೆ ಯಾವುದೇ ಮಾತುಕತೆ ನಡೆದಿರಲಿಲ್ಲ.  ಆದರೆ ಆ ಬಳಿಕ ಮದುವೆಯ ಮಾತುಕತೆಗಳು ಬಂದವು ಎಂದಿದ್ದಾರೆ(PC-PTI).

5 / 6
ಅಲ್ಲದೆ ದೂರುದಾರರು ಅಥವಾ ಯಾವುದೇ ಸಾಕ್ಷಿಗಳ ಹೇಳಿಕೆಗಳಲ್ಲಿ ಮದುವೆಯ ಭರವಸೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ನಾನು ನನ್ನ ವೃತ್ತಿಜೀವನದಲ್ಲಿ ಪ್ರಸಿದ್ಧರಾದ ನಂತರ ತಮ್ಮಿಂದ ಹಣ ಸುಲಿಗೆ ಮಾಡಲು ಈ ಪ್ರಕರಣ ದಾಖಲಿಸಲಾಗಿದೆ ಎಂದು ದಯಾಳ್ ಆರೋಪಿಸಿದ್ದಾರೆ(PC-PTI).

6 / 6
Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್

ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!

ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk

37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ

ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ

ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ

ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು

ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ

ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ

ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ