IND vs AUS: ಗಾಯಗೊಂಡು ಟೆಸ್ಟ್ ಸರಣಿಯಿಂದಲೇ ಹೊರಬಿದ್ದ ಟೀಂ ಇಂಡಿಯಾದ ಸ್ಟಾರ್ ವೇಗಿ..!

IND vs AUS: ಭಾರತದ ವೇಗದ ಬೌಲರ್ ಖಲೀಲ್ ಅಹ್ಮದ್ ಗಾಯಗೊಂಡಿದ್ದರಿಂದ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ಆಯ್ಕೆ ಮಾಡಲಾಗಿದೆ.

ಪೃಥ್ವಿಶಂಕರ
|

Updated on: Nov 20, 2024 | 6:00 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ನವೆಂಬರ್ 22 ರಿಂದ ಪರ್ತ್‌ನ ಆಪ್ಟಸ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಬಿಸಿಸಿಐ ಒಟ್ಟು 18 ಆಟಗಾರರನ್ನು ಭಾರತ ತಂಡದಲ್ಲಿ ಆಯ್ಕೆ ಮಾಡಿತ್ತು. ಇವರಲ್ಲದೆ ಮೂವರು ಮೀಸಲು ಆಟಗಾರರನ್ನು ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ಕರೆದುಕೊಂಡು ಹೋಗಿತ್ತು.

1 / 7
ಆದರೆ ಈ ಸರಣಿಗೂ ಮುನ್ನ ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ವೇಗದ ಬೌಲರ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿರುವುದಲ್ಲದೆ ಭಾರತಕ್ಕೆ ವಾಪಸ್ಸಾಗುತ್ತಿದ್ದಾರೆ. ಹೀಗಾಗಿ ಬಿಸಿಸಿಐ ಮುಂಜಾಗೃತ ಕ್ರಮವಾಗಿ ಇಂಜುರಿಗೊಂಡಿರುವ ಈ ಆಟಗಾರನ ಸ್ಥಾನಕ್ಕೆ ಇನ್ನೊಬ್ಬ ಯುವ ಆಟಗಾರನನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸಿದೆ.

2 / 7
ಬಾರ್ಡರ್-ಗವಾಸ್ಕರ್ ಟ್ರೋಫಿ ಆರಂಭಕ್ಕೂ ಮುನ್ನ ವೇಗದ ಬೌಲರ್ ಖಲೀಲ್ ಅಹ್ಮದ್ ಗಾಯಗೊಂಡಿದ್ದಾರೆ. ವಾಸ್ತವವಾಗಿ ಖಲೀಲ್ ಅಹ್ಮದ್ ಅವರನ್ನು ಈ ಸರಣಿಗೆ ಮೀಸಲು ಆಟಗಾರನಾಗಿ ತಂಡದಲ್ಲಿ ಆಯ್ಕೆ ಮಾಡಲಾಗಿದೆ. ಆದರೆ ಗಾಯದಿಂದಾಗಿ ಅವರು ಭಾರತಕ್ಕೆ ಮರಳಿದ್ದಾರೆ. ಅವರ ಜಾಗಕ್ಕೆ ಈಗ ಮತ್ತೊಬ್ಬ ಯುವ ವೇಗದ ಬೌಲರ್ ಯಶ್ ದಯಾಳ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ.

3 / 7
ಈ ಇಂಜುರಿಯಿಂದಾಗಿ ಖಲೀಲ್ ಅವರಿಗೆ ನೆಟ್ಸ್‌ನಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ. ಹೀಗಾಗಿ ವೈದ್ಯಕೀಯ ತಂಡವು ಖಲೀಲ್ ಅವರಿಗೆ ವಿಶ್ರಾಂತಿ ನೀಡಲು ಸೂಚಿಸಿದ್ದು, ಅವರನ್ನು ಭಾರತಕ್ಕೆ ಕಳುಹಿಸಲಾಗಿದೆ. ಇದೀಗ ಇಂಜುರಿಗೊಂಡಿರುವ ಖಲೀಲ್ ಐಪಿಎಲ್ ಹರಾಜಿಗೂ ಮುನ್ನ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯನ್ನು ಆಡುತ್ತಾರೋ ಇಲ್ಲವೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ.

4 / 7
 ಖಲೀಲ್ ಅಹ್ಮದ್ ಬದಲಿಗೆ ಟೀಂ ಇಂಡಿಯಾವನ್ನ ಸೇರಿಕೊಂಡಿರುವ ಯಶ್ ದಯಾಲ್ ಅವರು ಇತ್ತೀಚಿನ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತ ಟಿ20 ತಂಡದ ಭಾಗವಾಗಿದ್ದರು. ಆದರೆ ಅವರಿಗೆ ತಂಡದಲ್ಲಿ ಆಡುವ ಅವಕಾಶ ಸಿಗಲಿಲ್ಲ. ಹೀಗಾಗಿ ಅವರು ಜೋಹಾನ್ಸ್‌ಬರ್ಗ್‌ನಿಂದ ನೇರವಾಗಿ ಪರ್ತ್ ತಲುಪಿದ್ದಾರೆ.

5 / 7
ಈ ಬಗ್ಗೆ ಪಿಟಿಐಗೆ ಮಾಹಿತಿ ನೀಡಿರುವ ಬಿಸಿಸಿಐ ಮೂಲವೊಂದು, ‘ಭಾರತ ತಂಡದ ಅಭ್ಯಾಸಕ್ಕಾಗಿ ಮಿಚೆಲ್ ಸ್ಟಾರ್ಕ್ ಅವರಂತಹ ಬೌಲರ್ ಬೇಕಾಗಿರುವುದರಿಂದ ಯಶ್ ದಯಾಳ್ ಅವರನ್ನು ತಂಡಕ್ಕೆ ಆಯ್ಕೆಮಾಡಲಾಗಿದೆ. ಈ ಹಿಂದೆ ದಯಾಳ್ ಭಾರತ ಎ ತಂಡದೊಂದಿಗೆ ಎರಡು ಅನಧಿಕೃತ ಟೆಸ್ಟ್ ಆಡಬೇಕಿತ್ತು. ಆದರೆ ಅವರನ್ನು ದಕ್ಷಿಣ ಆಫ್ರಿಕಾಕ್ಕೆ ಕಳುಹಿಸಲಾಯಿತು ಎಂದು ಉಲ್ಲೇಖಿಸಿದೆ.

6 / 7
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್. ಮೀಸಲು ಆಟಗಾರರು: ಮುಖೇಶ್ ಕುಮಾರ್, ನವದೀಪ್ ಸೈನಿ, ಯಶ್ ದಯಾಳ್.

7 / 7
Follow us
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ