AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶಸ್ವಿ ಜೈಸ್ವಾಲ್ ಆರ್ಭಟಕ್ಕೆ ದ್ರಾವಿಡ್, ಸೆಹ್ವಾಗ್ ದಾಖಲೆಗಳೇ ಧೂಳೀಪಟ

India vs England 2nd Test: ಬರ್ಮಿಂಗ್​ಹ್ಯಾಮ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 587 ರನ್ ಕಲೆಹಾಕಿದೆ. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಶುರು ಮಾಡಿದ ಇಂಗ್ಲೆಂಡ್ ತಂಡವು 407 ರನ್​ಗಳಿಸಿ ಆಲೌಟ್ ಆಗಿದೆ.

ಝಾಹಿರ್ ಯೂಸುಫ್
|

Updated on:Jul 05, 2025 | 9:54 AM

Share
ಟೆಸ್ಟ್ ಕ್ರಿಕೆಟ್​ನ ಆರಂಭಿಕ ಹಂತದಲ್ಲಿರುವ ಯಶಸ್ವಿ ಜೈಸ್ವಾಲ್ ಭರ್ಜರಿ (Yashasvi Jaiswal) ದಾಖಲೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಅದು ಕೂಡ 21 ಟೆಸ್ಟ್ ಪಂದ್ಯಗಳ ಮೂಲಕ. ಈ ಮ್ಯಾಚ್​ಗಳ ಮೂಲಕ ಯಶಸ್ವಿ ಜೈಸ್ವಾಲ್ ಮುರಿದಿರುವುದು ಲೆಜೆಂಡ್ ರಾಹುಲ್ ದ್ರಾವಿಡ್ ಹಾಗೂ ವಿರೇಂದ್ರ ಸೆಹ್ವಾಗ್ ಅವರ ದಾಖಲೆಗಳನ್ನು ಎಂಬುದು ವಿಶೇಷ.

1 / 5
ಎಡ್ಜ್​ಬಾಸ್ಟನ್​​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 115 ರನ್​ ಕಲೆಹಾಕಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 87 ರನ್ ಬಾರಿಸಿದ್ದ ಯಶಸ್ವಿ ದ್ವಿತೀಯ ಇನಿಂಗ್ಸ್​ನಲ್ಲಿ 28 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಅದರಂತೆ ಒಟ್ಟು 115 ರನ್​ಗಳಿಸುವ ಮೂಲಕ ಜೈಸ್ವಾಲ್ ಟೆಸ್ಟ್ ಕ್ರಿಕೆಟ್​ನಲ್ಲಿ 2000 ರನ್ ಪೂರೈಸಿದ್ದಾರೆ.

2 / 5
ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಅತೀ ಕಡಿಮೆ ಪಂದ್ಯದ ಮೂಲಕ 2 ಸಾವಿರ ರನ್ ಕಲೆಹಾಕಿದ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆಗಳು ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಹಾಗೂ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು.

3 / 5
ರಾಹುಲ್ ದ್ರಾವಿಡ್ ಹಾಗೂ ವೀರೇಂದ್ರ ಸೆಹ್ವಾಗ್ ಕ್ರಮವಾಗಿ 25 ಟೆಸ್ಟ್ ಪಂದ್ಯಗಳಲ್ಲಿ 40 ಇನಿಂಗ್ಸ್ ಆಡಿ 2000 ಸಾವಿರ ರನ್ ಕಲೆಹಾಕಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳಲ್ಲಿ ಹಾಗೂ ಕನಿಷ್ಠ ಇನಿಂಗ್ಸ್​ಗಳ ಮೂಲಕ 2000 ರನ್ ಗಳಿಸಿದ ಬ್ಯಾಟರ್​ಗಳು ಎನಿಸಿಕೊಂಡಿದ್ದರು.

4 / 5
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ 2000 ರನ್ ಪೂರೈಸಲು ತೆಗೆದುಕೊಂಡಿರುವುದು ಕೇವಲ 21 ಟೆಸ್ಟ್ ಪಂದ್ಯಗಳನ್ನು ಮಾತ್ರ. ಈ 21 ಟೆಸ್ಟ್ ಪಂದ್ಯಗಳಲ್ಲಿ 40 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ ಭಾರತದ ಪರ ಅತೀ ಕಡಿಮೆ ಟೆಸ್ಟ್ ಮ್ಯಾಚ್​ ಆಡಿ, ಕನಿಷ್ಠ ಇನಿಂಗ್ಸ್​ನೊಂದಿಗೆ 2 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 5

Published On - 9:54 am, Sat, 5 July 25

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್

ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ

ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ