- Kannada News Photo gallery Cricket photos Yashasvi Jaiswal Becomes Fastest Indian Batter To Score 2 Thousand Runs In Tests
ಯಶಸ್ವಿ ಜೈಸ್ವಾಲ್ ಆರ್ಭಟಕ್ಕೆ ದ್ರಾವಿಡ್, ಸೆಹ್ವಾಗ್ ದಾಖಲೆಗಳೇ ಧೂಳೀಪಟ
India vs England 2nd Test: ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್ನಲ್ಲಿ 587 ರನ್ ಕಲೆಹಾಕಿದೆ. ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಶುರು ಮಾಡಿದ ಇಂಗ್ಲೆಂಡ್ ತಂಡವು 407 ರನ್ಗಳಿಸಿ ಆಲೌಟ್ ಆಗಿದೆ.
Updated on:Jul 05, 2025 | 9:54 AM

ಟೆಸ್ಟ್ ಕ್ರಿಕೆಟ್ನ ಆರಂಭಿಕ ಹಂತದಲ್ಲಿರುವ ಯಶಸ್ವಿ ಜೈಸ್ವಾಲ್ ಭರ್ಜರಿ (Yashasvi Jaiswal) ದಾಖಲೆ ಬರೆಯುವ ಮೂಲಕ ಗಮನ ಸೆಳೆದಿದ್ದಾರೆ. ಅದು ಕೂಡ 21 ಟೆಸ್ಟ್ ಪಂದ್ಯಗಳ ಮೂಲಕ. ಈ ಮ್ಯಾಚ್ಗಳ ಮೂಲಕ ಯಶಸ್ವಿ ಜೈಸ್ವಾಲ್ ಮುರಿದಿರುವುದು ಲೆಜೆಂಡ್ ರಾಹುಲ್ ದ್ರಾವಿಡ್ ಹಾಗೂ ವಿರೇಂದ್ರ ಸೆಹ್ವಾಗ್ ಅವರ ದಾಖಲೆಗಳನ್ನು ಎಂಬುದು ವಿಶೇಷ.

ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 115 ರನ್ ಕಲೆಹಾಕಿದ್ದಾರೆ. ಮೊದಲ ಇನಿಂಗ್ಸ್ನಲ್ಲಿ 87 ರನ್ ಬಾರಿಸಿದ್ದ ಯಶಸ್ವಿ ದ್ವಿತೀಯ ಇನಿಂಗ್ಸ್ನಲ್ಲಿ 28 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಅದರಂತೆ ಒಟ್ಟು 115 ರನ್ಗಳಿಸುವ ಮೂಲಕ ಜೈಸ್ವಾಲ್ ಟೆಸ್ಟ್ ಕ್ರಿಕೆಟ್ನಲ್ಲಿ 2000 ರನ್ ಪೂರೈಸಿದ್ದಾರೆ.

ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಅತೀ ಕಡಿಮೆ ಪಂದ್ಯದ ಮೂಲಕ 2 ಸಾವಿರ ರನ್ ಕಲೆಹಾಕಿದ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಯಿತು. ಇದಕ್ಕೂ ಮುನ್ನ ಈ ಭರ್ಜರಿ ದಾಖಲೆಗಳು ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಹಾಗೂ ಡ್ಯಾಶಿಂಗ್ ಓಪನರ್ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು.

ರಾಹುಲ್ ದ್ರಾವಿಡ್ ಹಾಗೂ ವೀರೇಂದ್ರ ಸೆಹ್ವಾಗ್ ಕ್ರಮವಾಗಿ 25 ಟೆಸ್ಟ್ ಪಂದ್ಯಗಳಲ್ಲಿ 40 ಇನಿಂಗ್ಸ್ ಆಡಿ 2000 ಸಾವಿರ ರನ್ ಕಲೆಹಾಕಿದ್ದರು. ಈ ಮೂಲಕ ಟೀಮ್ ಇಂಡಿಯಾ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳಲ್ಲಿ ಹಾಗೂ ಕನಿಷ್ಠ ಇನಿಂಗ್ಸ್ಗಳ ಮೂಲಕ 2000 ರನ್ ಗಳಿಸಿದ ಬ್ಯಾಟರ್ಗಳು ಎನಿಸಿಕೊಂಡಿದ್ದರು.

ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ 2000 ರನ್ ಪೂರೈಸಲು ತೆಗೆದುಕೊಂಡಿರುವುದು ಕೇವಲ 21 ಟೆಸ್ಟ್ ಪಂದ್ಯಗಳನ್ನು ಮಾತ್ರ. ಈ 21 ಟೆಸ್ಟ್ ಪಂದ್ಯಗಳಲ್ಲಿ 40 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ ಭಾರತದ ಪರ ಅತೀ ಕಡಿಮೆ ಟೆಸ್ಟ್ ಮ್ಯಾಚ್ ಆಡಿ, ಕನಿಷ್ಠ ಇನಿಂಗ್ಸ್ನೊಂದಿಗೆ 2 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
Published On - 9:54 am, Sat, 5 July 25
