Yashasvi Jaiswal: ಐತಿಹಾಸಿಕ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

| Updated By: ಝಾಹಿರ್ ಯೂಸುಫ್

Updated on: Mar 09, 2024 | 3:20 PM

Yashasvi Jaiswal Records: ಮೊದಲ ಇನಿಂಗ್ಸ್​ನಲ್ಲಿ ಅರ್ಧಶತಕ ಬಾರಿಸಿ ಹಲವು ದಾಖಲೆ ಬರೆದಿರುವ ಯಶಸ್ವಿ ಜೈಸ್ವಾಲ್​ಗೆ ಇದೀಗ ಮತ್ತೊಂದು ಶ್ರೇಷ್ಠ ದಾಖಲೆ ಬರೆಯುವ ಅವಕಾಶವಿದೆ. ಅದು ಕೂಡ ಲೆಜೆಂಡ್ ಸುನಿಲ್ ಗವಾಸ್ಕರ್ ಹೆಸರಿನಲ್ಲಿರುವ ಸರ್ವ ಶ್ರೇಷ್ಠ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 6
ಧರ್ಮಶಾಲಾದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ (Team India) ಯುವ ದಾಂಡಿಗ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 58 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 5 ಫೋರ್​ಗಳೊಂದಿಗೆ 57 ರನ್ ಬಾರಿಸಿದ್ದಾರೆ.

2 / 6
ಈ 57 ರನ್​ಗಳೊಂದಿಗೆ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ ಎಂಬುದು ವಿಶೇಷ. ಅಂದರೆ ಭಾರತದ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳ ಮೂಲಕ ಸಾವಿರ ರನ್ ಪೂರೈಸಿದ ದಾಖಲೆ ಇದೀಗ ಯಶಸ್ವಿ ಜೈಸ್ವಾಲ್ ಪಾಲಾಗಿದೆ.

3 / 6
ಇದಕ್ಕೂ ಮುನ್ನ ಈ ದಾಖಲೆ ಚೇತೇಶ್ವರ ಪೂಜಾರ ಹಾಗೂ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು. ಗವಾಸ್ಕರ್ ಹಾಗೂ ಪೂಜಾರ 11 ಟೆಸ್ಟ್ ಪಂದ್ಯಗಳ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 1000 ರನ್ ಕಲೆಹಾಕಿದ್ದರು. ಇದೀಗ ಈ ದಾಖಲೆಯನ್ನು ಯಶಸ್ವಿ ಯಶಸ್ವಿಯಾಗಿಯೇ ಅಳಿಸಿ ಹಾಕಿದ್ದಾರೆ.

4 / 6
ಟೀಮ್ ಇಂಡಿಯಾ ಪರ ಕಣಕ್ಕಿಳಿದ ಮೊದಲ 9 ಟೆಸ್ಟ್ ಪಂದ್ಯಗಳಲ್ಲೇ 1028* ರನ್​ ಕಲೆಹಾಕುವ ಮೂಲಕ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಭಾರತದ ಪರ ಅತೀ ಕಡಿಮೆ ಟೆಸ್ಟ್ ಪಂದ್ಯಗಳ ಮೂಲಕ ಸಾವಿರ ರನ್ ಪೂರೈಸಿದ ಹೊಸ ದಾಖಲೆ ಬರೆದಿದ್ದಾರೆ.

5 / 6
ಹಾಗೆಯೇ ಈ ಅರ್ಧಶತಕದೊಂದಿಗೆ ಯಶಸ್ವಿ ಜೈಸ್ವಾಲ್ ಟೆಸ್ಟ್ ಸರಣಿವೊಂದರಲ್ಲಿ 700+ ರನ್ ಕಲೆಹಾಕಿದ ವಿಶೇಷ ದಾಖಲೆಯನ್ನು ಕೂಡ ಬರೆದಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ 700+ ರನ್ ಕಲೆಹಾಕಿದ ಮೊದಲ ಭಾರತೀಯ ಎನಿಸಿಕೊಂಡಿದ್ದಾರೆ.

6 / 6
ಸದ್ಯ ಇಂಗ್ಲೆಂಡ್ ವಿರುದ್ಧ 712 ರನ್ ಕಲೆಹಾಕಿರುವ ಯಶಸ್ವಿ ಜೈಸ್ವಾಲ್ 2ನೇ ಇನಿಂಗ್ಸ್​ನಲ್ಲಿ 63 ರನ್​ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅಂದರೆ ಭಾರತದ ಪರ ಟೆಸ್ಟ್ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗವಾಸ್ಕರ್ 774 ರನ್ ಕಲೆಹಾಕಿದ್ದರು. ಇದೀಗ ಈ ಐತಿಹಾಸಿಕ ದಾಖಲೆ ಮುರಿಯಲು ಯಶಸ್ವಿ ಜೈಸ್ವಾಲ್​ಗೆ ಕೇವಲ 63 ರನ್​ಗಳ ಅವಶ್ಯಕತೆಯಿದೆ.

Published On - 7:31 am, Sat, 9 March 24