2024 ರಲ್ಲಿ ಟೆಸ್ಟ್, ಏಕದಿನ ಮತ್ತು ಟಿ20 ಕ್ರಿಕೆಟ್ನಲ್ಲಿ ಒಟ್ಟು 18 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ 1082 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 2 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 1023 ರನ್ ಬಾರಿಸಿದ್ದಾರೆ. ಈ ಮೂಲಕ ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.