Yashasvi Jaiswal: ವಿಶೇಷ ಮೈಲುಗಲ್ಲು ದಾಟಿದ ಯಶಸ್ವಿ ಜೈಸ್ವಾಲ್

| Updated By: ಝಾಹಿರ್ ಯೂಸುಫ್

Updated on: Jul 29, 2024 | 8:24 AM

India vs Sri Lanka: ಪಲ್ಲೆಕೆಲೆಯ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 161 ರನ್ ಕಲೆಹಾಕಿತು. ಇತ್ತ ಭಾರತದ ಇನಿಂಗ್ಸ್ ಆರಂಭಕ್ಕೂ ಮಳೆ ಬಂದಿದ್ದರಿಂದ, ಓವರ್​ಗಳ ಕಡಿತ ಮಾಡಲಾಯಿತು. ಅದರಂತೆ 8 ಓವರ್​ಗಳಲ್ಲಿ 78 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ 6.3 ಓವರ್​ಗಳಲ್ಲಿ ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿದೆ. ಇದೇ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ವಿಶೇಷ ಮೈಲುಗಲ್ಲು ದಾಟಿರುವುದು ವಿಶೇಷ.

1 / 5
ಶ್ರೀಲಂಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ವಿಶೇಷ ಮೈಲುಗಲ್ಲು ದಾಟಿದ್ದಾರೆ. ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು.

2 / 5
15 ಎಸೆತಗಳನ್ನು ಎದುರಿಸಿದ್ದ ಜೈಸ್ವಾಲ್ 2 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 30 ರನ್ ಸಿಡಿಸಿ ಔಟಾದರು. ಈ ಮೂವತ್ತು ರನ್​ಗಳೊಂದಿಗೆ ಯಶಸ್ವಿ 2024 ರಲ್ಲಿ ಸಾವಿರ ರನ್ ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
2024 ರಲ್ಲಿ ಟೆಸ್ಟ್, ಏಕದಿನ ಮತ್ತು ಟಿ20 ಕ್ರಿಕೆಟ್​ನಲ್ಲಿ ಒಟ್ಟು 18 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ 1082 ಎಸೆತಗಳನ್ನು ಎದುರಿಸಿದ್ದಾರೆ. ಈ ವೇಳೆ 2 ಭರ್ಜರಿ ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 1023 ರನ್ ಬಾರಿಸಿದ್ದಾರೆ. ಈ ಮೂಲಕ ಈ ವರ್ಷ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸಾವಿರ ರನ್ ಪೂರೈಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಶ್ರೀಲಂಕಾದ ಆರಂಭಿಕ ಆಟಗಾರ ಕುಸಾಲ್ ಮೆಂಡಿಸ್. ಈ ವರ್ಷ 26 ಪಂದ್ಯಗಳಲ್ಲಿ 28 ಇನಿಂಗ್ಸ್ ಆಡಿರುವ ಮೆಂಡಿಸ್ 901 ಎಸೆತಗಳಲ್ಲಿ 888 ರನ್ ಕಲೆಹಾಕಿದ್ದಾರೆ. ಈ ಮೂಲಕ 2024ರ ರನ್ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

5 / 5
ಹಾಗೆಯೇ 2024 ರಲ್ಲಿ 100+ ಫೋರ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ. 18 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಜೈಸ್ವಾಲ್ 42 ಸಿಕ್ಸ್ ಹಾಗೂ 104 ಫೋರ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಬೌಂಡರಿಗಳ ಅಂಕಿ ಸಂಖ್ಯೆಯಲ್ಲೂ ಅಗ್ರಸ್ಥಾನದಲ್ಲಿದ್ದಾರೆ.