- Kannada News Photo gallery Cricket photos Yashasvi Jaiswal becomes first Indian To Smash 30 Sixes A Year in Test
ಜೈ ಹೋ ಜೈಸ್ವಾಲ್… ಟೆಸ್ಟ್ನಲ್ಲಿ ಭರ್ಜರಿ ದಾಖಲೆ ಬರೆದ ಯುವ ದಾಂಡಿಗ
India vs New Zealand, 2nd Test: ಪುಣೆಯಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಟೀಮ್ ಇಂಡಿಯಾಗೆ 359 ರನ್ಗಳ ಗುರಿ ನೀಡಿದೆ. ಈ ಗುರಿಯನ್ನು ಬೆನ್ನತ್ತಿರುವ ಟೀಮ್ ಇಂಡಿಯಾಗೆ ಯಶಸ್ವಿ ಜೈಸ್ವಾಲ್ (46*) ಸ್ಪೋಟಕ ಆರಂಭ ಒದಗಿಸಿದ್ದು, ಈ ಮೂಲಕ ಭೋಜನಾ ವಿರಾಮದ ವೇಳೆಗೆ ಭಾರತ ತಂಡವು 1 ವಿಕೆಟ್ ಕಳೆದುಕೊಂಡು 81 ರನ್ ಕಲೆಹಾಕಿದೆ.
Updated on: Oct 26, 2024 | 11:55 AM

ನ್ಯೂಝಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 3 ಭರ್ಜರಿ ಸಿಕ್ಸ್ ಸಿಡಿಸಿದ್ದಾರೆ. ಈ ಸಿಕ್ಸರ್ಗಳೊಂದಿಗೆ ಜೈಸ್ವಾಲ್ ಅಪರೂಪದ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಹೌದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಒಂದೇ ವರ್ಷದೊಳಗೆ 30+ ಸಿಕ್ಸ್ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಇದಕ್ಕೂ ಮುನ್ನ ಇಂತಹದೊಂದು ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು.

2008 ರಲ್ಲಿ ವೀರೇಂದ್ರ ಸೆಹ್ವಾಗ್ ಒಟ್ಟು 22 ಸಿಕ್ಸ್ಗಳನ್ನು ಬಾರಿಸಿ ಒಂದೇ ವರ್ಷದೊಳಗೆ ಟೆಸ್ಟ್ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿರುವ ಜೈಸ್ವಾಲ್ 30 ಸಿಕ್ಸ್ಗಳ ಗಡಿದಾಟಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ವರ್ಷ 30 ಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ನ್ಯೂಝಿಲೆಂಡ್ನ ಮಾಜಿ ನಾಯಕ ಬ್ರೆಂಡನ್ ಮೆಕಲಂ. 2014 ರಲ್ಲಿ 33 ಸಿಕ್ಸ್ಗಳನ್ನು ಸಿಡಿಸುವ ಮೂಲಕ ಮೆಕಲಂ ಟೆಸ್ಟ್ನಲ್ಲಿ ಒಂದೇ ವರ್ಷ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಇದೀಗ 32 ಸಿಕ್ಸ್ಗಳೊಂದಿಗೆ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಇನ್ನೂ ಎರಡು ಸಿಕ್ಸ್ಗಳನ್ನು ಬಾರಿಸಿದರೆ ಮೆಕಲಂ ಬರೆದ 10 ವರ್ಷಗಳ ಹಳೆಯ ವಿಶ್ವ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಗಲಿದೆ. ಹೀಗಾಗಿ ನ್ಯೂಝಿಲೆಂಡ್ ಅಥವಾ ಆಸ್ಟ್ರೇಲಿಯಾ ಸರಣಿಯಲ್ಲಿ ಜೈಸ್ವಾಲ್ ಕಡೆಯಿಂದ ಈ ವಿಶ್ವ ದಾಖಲೆ ನಿರೀಕ್ಷಿಸಬಹುದು.




