ಜೈ ಹೋ ಜೈಸ್ವಾಲ್… ಟೆಸ್ಟ್​ನಲ್ಲಿ ಭರ್ಜರಿ ದಾಖಲೆ ಬರೆದ ಯುವ ದಾಂಡಿಗ

India vs New Zealand, 2nd Test: ಪುಣೆಯಲ್ಲಿ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವು ಟೀಮ್ ಇಂಡಿಯಾಗೆ 359 ರನ್​ಗಳ ಗುರಿ ನೀಡಿದೆ. ಈ ಗುರಿಯನ್ನು ಬೆನ್ನತ್ತಿರುವ ಟೀಮ್ ಇಂಡಿಯಾಗೆ ಯಶಸ್ವಿ ಜೈಸ್ವಾಲ್ (46*) ಸ್ಪೋಟಕ ಆರಂಭ ಒದಗಿಸಿದ್ದು, ಈ ಮೂಲಕ ಭೋಜನಾ ವಿರಾಮದ ವೇಳೆಗೆ ಭಾರತ ತಂಡವು 1 ವಿಕೆಟ್ ಕಳೆದುಕೊಂಡು 81 ರನ್ ಕಲೆಹಾಕಿದೆ.

|

Updated on: Oct 26, 2024 | 11:55 AM

ನ್ಯೂಝಿಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 3 ಭರ್ಜರಿ ಸಿಕ್ಸ್ ಸಿಡಿಸಿದ್ದಾರೆ. ಈ ಸಿಕ್ಸರ್​ಗಳೊಂದಿಗೆ ಜೈಸ್ವಾಲ್ ಅಪರೂಪದ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 5
ಹೌದು, ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಒಂದೇ ವರ್ಷದೊಳಗೆ 30+ ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಇದಕ್ಕೂ ಮುನ್ನ ಇಂತಹದೊಂದು ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು.

2 / 5
2008 ರಲ್ಲಿ ವೀರೇಂದ್ರ ಸೆಹ್ವಾಗ್ ಒಟ್ಟು 22 ಸಿಕ್ಸ್​ಗಳನ್ನು ಬಾರಿಸಿ ಒಂದೇ ವರ್ಷದೊಳಗೆ ಟೆಸ್ಟ್​ನಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಅಳಿಸಿ ಹಾಕಿರುವ ಜೈಸ್ವಾಲ್ 30 ಸಿಕ್ಸ್​ಗಳ ಗಡಿದಾಟಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಒಂದೇ ವರ್ಷ 30 ಕ್ಕಿಂತ ಹೆಚ್ಚು ಸಿಕ್ಸ್ ಸಿಡಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ನ್ಯೂಝಿಲೆಂಡ್​ನ ಮಾಜಿ ನಾಯಕ ಬ್ರೆಂಡನ್ ಮೆಕಲಂ. 2014 ರಲ್ಲಿ 33 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಮೆಕಲಂ ಟೆಸ್ಟ್​ನಲ್ಲಿ ಒಂದೇ ವರ್ಷ ಅತ್ಯಧಿಕ ಸಿಕ್ಸ್ ಬಾರಿಸಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

4 / 5
ಇದೀಗ 32 ಸಿಕ್ಸ್​ಗಳೊಂದಿಗೆ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಇನ್ನೂ ಎರಡು ಸಿಕ್ಸ್​ಗಳನ್ನು ಬಾರಿಸಿದರೆ ಮೆಕಲಂ ಬರೆದ 10 ವರ್ಷಗಳ ಹಳೆಯ ವಿಶ್ವ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಗಲಿದೆ. ಹೀಗಾಗಿ ನ್ಯೂಝಿಲೆಂಡ್ ಅಥವಾ ಆಸ್ಟ್ರೇಲಿಯಾ ಸರಣಿಯಲ್ಲಿ ಜೈಸ್ವಾಲ್ ಕಡೆಯಿಂದ ಈ ವಿಶ್ವ ದಾಖಲೆ ನಿರೀಕ್ಷಿಸಬಹುದು.

5 / 5
Follow us