ಭರ್ಜರಿ ಸೆಂಚುರಿ ಸಿಡಿಸಿ ಹಲವು ದಾಖಲೆ ಬರೆದ ಯಶಸ್ವಿ ಜೈಸ್ವಾಲ್
Yashasvi Jaiswal Records: ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 49 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 100 ರನ್ ಬಾರಿಸಿದರು. ಈ ಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡರು.
Updated on: Oct 03, 2023 | 3:28 PM

ಚೀನಾದ ಹ್ಯಾಂಗ್ಝೌನಲ್ಲಿ ನಡೆದ ಏಷ್ಯನ್ ಗೇಮ್ಸ್ನ ಮೊದಲ ಕ್ವಾರ್ಟರ್ ಫೈನಲ್ನಲ್ಲಿ ನೇಪಾಳ ವಿರುದ್ಧ ಭರ್ಜರಿ ಶತಕ ಸಿಡಿಸಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ 49 ಎಸೆತಗಳಲ್ಲಿ 7 ಭರ್ಜರಿ ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 100 ರನ್ ಬಾರಿಸಿದರು. ಈ ಶತಕದೊಂದಿಗೆ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡರು.

ಇದಕ್ಕೂ ಮುನ್ನ ಈ ದಾಖಲೆ ಶುಭ್ಮನ್ ಗಿಲ್ ಹೆಸರಿನಲ್ಲಿತ್ತು. ಗಿಲ್ ತಮ್ಮ 23ನೇ ವಯಸ್ಸಿನಲ್ಲಿ (+146 ದಿನಗಳು) ಶತಕ ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಜೈಸ್ವಾಲ್ ಮುರಿದಿದ್ದಾರೆ.

ಇದೀಗ 21 ವರ್ಷದ ಯಶಸ್ವಿ ಜೈಸ್ವಾಲ್ ನೇಪಾಳ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದಲ್ಲದೆ ಏಷ್ಯನ್ ಗೇಮ್ಸ್ನಲ್ಲಿ ಶತಕ ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ. ಹಾಗೆಯೇ ಟಿ20 ಕ್ರಿಕೆಟ್ನಲ್ಲಿ ಸೆಂಚುರಿ ಸಿಡಿಸಿದ ಭಾರತದ 8ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಕಲೆಹಾಕಿತು. ಇದನ್ನು ಚೇಸ್ ಮಾಡಿದ ನೇಪಾಳ ತಂಡವು 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 179 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ 23 ರನ್ಗಳ ಜಯ ಸಾಧಿಸಿದ ಟೀಮ್ ಇಂಡಿಯಾ ಏಷ್ಯನ್ ಗೇಮ್ಸ್ನಲ್ಲಿ ಸೆಮಿಫೈನಲ್ಗೇರಿದೆ.



















