Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ದ್ರಾವಿಡ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್: ಮುಂದಿನ ಟಾರ್ಗೆಟ್ ಕಿಂಗ್ ಕೊಹ್ಲಿ

Yashasvi Jaiswal Records: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಫಾರ್ಮ್ ಪ್ರದರ್ಶಿಸಿರುವ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ 2 ದ್ವಿಶತಕ ಸಿಡಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಜೊತೆಗೆ ಇದೀಗ ರಾಹುಲ್ ದ್ರಾವಿಡ್ ಹೆಸರಿನಲ್ಲಿದ್ದ ವಿಶೇಷ ರೆಕಾರ್ಡ್​ವೊಂದನ್ನು ಯಶಸ್ವಿಯಾಗಿ ಜೈಸ್ವಾಲ್ ಮುರಿದಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Feb 25, 2024 | 8:54 AM

ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 117 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 73 ರನ್ ಬಾರಿಸಿದರು.

1 / 6
ಈ 73 ರನ್​ಗಳೊಂದಿಗೆ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧ ಟೆಸ್ಟ್​ ಸರಣಿಯೊಂದರಲ್ಲಿ 600 ಕ್ಕೂ ಅಧಿಕ ರನ್ ಕಲೆಹಾಕಿದ ವಿಶೇಷ ಸಾಧನೆ ಮಾಡಿದರು. ಅದು ಕೂಡ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ.

2 / 6
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ 600+ ರನ್ ಕಲೆಹಾಕಿರುವುದು ಕೇವಲ ಮೂವರು ಬ್ಯಾಟರ್​ಗಳು ಮಾತ್ರ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ವಿರಾಟ್ ಕೊಹ್ಲಿ. 2017 ರಲ್ಲಿ ಕಿಂಗ್ ಕೊಹ್ಲಿ 8 ಇನಿಂಗ್ಸ್​ಗಳಲ್ಲಿ 655 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದಾರೆ.

3 / 6
ಇನ್ನು ಇದಕ್ಕೂ ಮುನ್ನ ರಾಹುಲ್ ದ್ರಾವಿಡ್ ಈ ಸಾಧನೆ ಮಾಡಿದ್ದರು. 2002 ರಲ್ಲಿ ಇಂಗ್ಲೆಂಡ್​ನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ದ್ರಾವಿಡ್ 6 ಇನಿಂಗ್ಸ್​ಗಳಲ್ಲಿ ಒಟ್ಟು 602 ರನ್ ಬಾರಿಸಿ ಈ ದಾಖಲೆ ಬರೆದಿದ್ದರು.

4 / 6
ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 7 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಯಶಸ್ವಿ ಜೈಸ್ವಾಲ್ ಒಟ್ಟು 618 ರನ್​ ಕಲೆಹಾಕಿದ್ದಾರೆ. ಈ ಮೂಲಕ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತ್ಯಧಿಕ ರನ್ ಬಾರಿಸಿದ 2ನೇ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಸದ್ಯ 618 ರನ್​ಗಳಿಸಿರುವ ಯಶಸ್ವಿ ಜೈಸ್ವಾಲ್​ಗೆ ಹೊಸ ಇತಿಹಾಸ ನಿರ್ಮಿಸಲು ಬೇಕಿರುವುದು ಕೇವಲ 38 ರನ್​ಗಳು ಮಾತ್ರ. ಒಂದು ವೇಳೆ ನಾಲ್ಕನೇ ಟೆಸ್ಟ್ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಅಥವಾ 5ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಒಟ್ಟು 38 ರನ್​ ಬಾರಿಸಿದರೆ ವಿರಾಟ್ ಕೊಹ್ಲಿ (655) ಹೆಸರಿನಲ್ಲಿರುವ ಶ್ರೇಷ್ಠ ದಾಖಲೆಯನ್ನು ಮುರಿಯಬಹುದು. ಕಿಂಗ್ ಕೊಹ್ಲಿ ಹೆಸರಿನಲ್ಲಿರುವ ಈ ದಾಖಲೆಯನ್ನು ಮುರಿದು ಯಶಸ್ವಿ ಹೊಸ ಇತಿಹಾಸ ಬರೆಲಿಯಲಿದ್ದಾರಾ ಕಾದು ನೋಡಬೇಕಿದೆ.

6 / 6

Published On - 8:54 am, Sun, 25 February 24

Follow us
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್