Yashasvi Jaiswal: ಯಶಸ್ವಿಯಾಗಿ ಮತ್ತೊಂದು ದಾಖಲೆ ಬರೆದ ಜೈಸ್ವಾಲ್

Yashasvi Jaiswal: ಭಾರತ ತಂಡದ ಯಂಗ್ ಸೆನ್ಸೇಷನ್ ಯಶಸ್ವಿ ಜೈಸ್ವಾಲ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್​ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಎನಿಸಿಕೊಂಡಿರುವ ಜೈಸ್ವಾಲ್ ಇದೀಗ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 02, 2024 | 7:33 AM

ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಮತ್ತೊಂದು ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.

1 / 7
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 52 ಎಸೆತಗಳಲ್ಲಿ 30 ರನ್ ಬಾರಿಸಿದ್ದಾರೆ. ಈ ಮೂವತ್ತು ರನ್​ಗಳೊಂದಿಗೆ ಯುವ ದಾಂಡಿಗ ಟೆಸ್ಟ್​ ಕ್ರಿಕೆಟ್​ನಲ್ಲಿ 1400+ ರನ್​ ಕಲೆಹಾಕಿದ್ದಾರೆ.

2 / 7
ಈ ಮೂಲಕ ಟೀಮ್ ಇಂಡಿಯಾ ಪರ ಮೊದಲ 25 ಟೆಸ್ಟ್ ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಓಪನರ್​ ಎಂಬ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿತ್ತು.

3 / 7
2013 ರಲ್ಲಿ ಟೆಸ್ಟ್ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದ ಮೊದಲ 25 ಇನಿಂಗ್ಸ್​ನಲ್ಲಿ 1324 ರನ್ ಪೇರಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಮೊದಲ ಇಪ್ಪತ್ತೈದು ಇನಿಂಗ್ಸ್​ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಆಟಗಾರ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಜೈಸ್ವಾಲ್ ಮುರಿದಿದ್ದಾರೆ.

4 / 7
2023 ರಿಂದ ಟೀಮ್ ಇಂಡಿಯಾ ಪರ ಟೆಸ್ಟ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಯಶಸ್ವಿ ಜೈಸ್ವಾಲ್ ಮೊದಲ 25 ಇನಿಂಗ್ಸ್​ಗಳಲ್ಲಿ 2 ದ್ವಿಶತಕ, 3 ಶತಕ ಹಾಗೂ 8 ಅರ್ಧಶತಕಗಳೊಂದಿಗೆ ಒಟ್ಟು 1402 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಭಾರತದ ಪರ ಮೊದಲ 25 ಇನಿಂಗ್ಸ್​ಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಆರಂಭಿಕ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

5 / 7
ಹಾಗೆಯೇ ಒಂದು ಕ್ಯಾಲೆಂಡರ್ ವರ್ಷದಲ್ಲಿ 1100+ ರನ್​ ಕಲೆಹಾಕಿದ ಭಾರತದ ಮೊದಲ ಹಾಗೂ ವಿಶ್ವದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ವರ್ಷ ಜೈಸ್ವಾಲ್ ಒಟ್ಟು 1111 ರನ್ ಕಲೆಹಾಕಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್​ನ ಗ್ಯಾರಿ ಸೋಬರ್ಸ್ ಅಗ್ರಸ್ಥಾನದಲ್ಲಿದ್ದಾರೆ.

6 / 7
1958 ರಲ್ಲಿ ವೆಸ್ಟ್ ಇಂಡೀಸ್​ನ ಲೆಜೆಂಡ್ ಗ್ಯಾರಿ ಸೋಬರ್ಸ್ 1298 ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದರು. ಈ ಮೂಲಕ ಒಂದು ಕ್ಯಾಲೆಂಡ್​ ವರ್ಷದಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ವರ್ಲ್ಡ್ ರೆಕಾರ್ಡ್ ಮುರಿಯಲು ಯಶಸ್ವಿ ಜೈಸ್ವಾಲ್​​ಗೆ 187 ರನ್​ಗಳ ಅವಶ್ಯಕತೆಯಿದ್ದು, ಹೀಗಾಗಿ ಮುಂಬರುವ ಪಂದ್ಯಗಳ ಮೂಲಕ ಜೈಸ್ವಾಲ್ ಬ್ಯಾಟ್​ನಿಂದ ಯಶಸ್ವಿ ವಿಶ್ವ ದಾಖಲೆಯನ್ನು ನಿರೀಕ್ಷಿಸಬಹುದು.

7 / 7
Follow us
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ

ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ

ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.

ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ

ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ

ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ

ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ