Yashasvi Jaiswal: ಯಶಸ್ವಿಯಾಗಿ ಮತ್ತೊಂದು ದಾಖಲೆ ಬರೆದ ಜೈಸ್ವಾಲ್
Yashasvi Jaiswal: ಭಾರತ ತಂಡದ ಯಂಗ್ ಸೆನ್ಸೇಷನ್ ಯಶಸ್ವಿ ಜೈಸ್ವಾಲ್ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಾ ಸಾಗುತ್ತಿದ್ದಾರೆ. ಈಗಾಗಲೇ ಟೆಸ್ಟ್ ಕ್ರಿಕೆಟ್ನಲ್ಲಿ ಒಂದು ಕ್ಯಾಲೆಂಡರ್ ವರ್ಷದಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಎನಿಸಿಕೊಂಡಿರುವ ಜೈಸ್ವಾಲ್ ಇದೀಗ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ಮತ್ತೊಂದು ದಾಖಲೆಯನ್ನು ಮುರಿದಿದ್ದಾರೆ.
1 / 7
ಟೀಮ್ ಇಂಡಿಯಾದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಮತ್ತೊಂದು ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಅವರ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಮುರಿಯುವ ಮೂಲಕ ಎಂಬುದು ವಿಶೇಷ.
2 / 7
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 52 ಎಸೆತಗಳಲ್ಲಿ 30 ರನ್ ಬಾರಿಸಿದ್ದಾರೆ. ಈ ಮೂವತ್ತು ರನ್ಗಳೊಂದಿಗೆ ಯುವ ದಾಂಡಿಗ ಟೆಸ್ಟ್ ಕ್ರಿಕೆಟ್ನಲ್ಲಿ 1400+ ರನ್ ಕಲೆಹಾಕಿದ್ದಾರೆ.
3 / 7
ಈ ಮೂಲಕ ಟೀಮ್ ಇಂಡಿಯಾ ಪರ ಮೊದಲ 25 ಟೆಸ್ಟ್ ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಓಪನರ್ ಎಂಬ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ವಿಶೇಷ ದಾಖಲೆ ರೋಹಿತ್ ಶರ್ಮಾ ಅವರ ಹೆಸರಿನಲ್ಲಿತ್ತು.
4 / 7
2013 ರಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ರೋಹಿತ್ ಶರ್ಮಾ ಆರಂಭಿಕನಾಗಿ ಕಣಕ್ಕಿಳಿದ ಮೊದಲ 25 ಇನಿಂಗ್ಸ್ನಲ್ಲಿ 1324 ರನ್ ಪೇರಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತದ ಪರ ಮೊದಲ ಇಪ್ಪತ್ತೈದು ಇನಿಂಗ್ಸ್ಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಆರಂಭಿಕ ಆಟಗಾರ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಜೈಸ್ವಾಲ್ ಮುರಿದಿದ್ದಾರೆ.
5 / 7
2023 ರಿಂದ ಟೀಮ್ ಇಂಡಿಯಾ ಪರ ಟೆಸ್ಟ್ನಲ್ಲಿ ಆರಂಭಿಕನಾಗಿ ಕಣಕ್ಕಿಳಿಯುತ್ತಿರುವ ಯಶಸ್ವಿ ಜೈಸ್ವಾಲ್ ಮೊದಲ 25 ಇನಿಂಗ್ಸ್ಗಳಲ್ಲಿ 2 ದ್ವಿಶತಕ, 3 ಶತಕ ಹಾಗೂ 8 ಅರ್ಧಶತಕಗಳೊಂದಿಗೆ ಒಟ್ಟು 1402 ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಮೊದಲ 25 ಇನಿಂಗ್ಸ್ಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಆರಂಭಿಕ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.
6 / 7
ಹಾಗೆಯೇ ಒಂದು ಕ್ಯಾಲೆಂಡರ್ ವರ್ಷದಲ್ಲಿ 1100+ ರನ್ ಕಲೆಹಾಕಿದ ಭಾರತದ ಮೊದಲ ಹಾಗೂ ವಿಶ್ವದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಈ ವರ್ಷ ಜೈಸ್ವಾಲ್ ಒಟ್ಟು 1111 ರನ್ ಕಲೆಹಾಕಿದ್ದಾರೆ. ಈ ಪಟ್ಟಿಯಲ್ಲಿ ವೆಸ್ಟ್ ಇಂಡೀಸ್ನ ಗ್ಯಾರಿ ಸೋಬರ್ಸ್ ಅಗ್ರಸ್ಥಾನದಲ್ಲಿದ್ದಾರೆ.
7 / 7
1958 ರಲ್ಲಿ ವೆಸ್ಟ್ ಇಂಡೀಸ್ನ ಲೆಜೆಂಡ್ ಗ್ಯಾರಿ ಸೋಬರ್ಸ್ 1298 ರನ್ ಕಲೆಹಾಕಿ ವಿಶ್ವ ದಾಖಲೆ ನಿರ್ಮಿಸಿದ್ದರು. ಈ ಮೂಲಕ ಒಂದು ಕ್ಯಾಲೆಂಡ್ ವರ್ಷದಲ್ಲಿ ಟೆಸ್ಟ್ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದೀಗ ಈ ವರ್ಲ್ಡ್ ರೆಕಾರ್ಡ್ ಮುರಿಯಲು ಯಶಸ್ವಿ ಜೈಸ್ವಾಲ್ಗೆ 187 ರನ್ಗಳ ಅವಶ್ಯಕತೆಯಿದ್ದು, ಹೀಗಾಗಿ ಮುಂಬರುವ ಪಂದ್ಯಗಳ ಮೂಲಕ ಜೈಸ್ವಾಲ್ ಬ್ಯಾಟ್ನಿಂದ ಯಶಸ್ವಿ ವಿಶ್ವ ದಾಖಲೆಯನ್ನು ನಿರೀಕ್ಷಿಸಬಹುದು.