- TV9 Kannada Kannada News Photos Cricket Photos Yashasvi Jaiswal Breaks Sachin's Test Venue Record: Young Indian Opener's Feat
ಸಚಿನ್ ತೆಂಡೂಲ್ಕರ್ ದಾಖಲೆ ಪುಡಿಗಟ್ಟಿದ ಯಶಸ್ವಿ ಜೈಸ್ವಾಲ್; ಟೆಸ್ಟ್‌ನಲ್ಲಿ ಹೊಸ ಮೈಲಿಗಲ್ಲು
ಭಾರತದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅತಿ ಹೆಚ್ಚು ವಿಭಿನ್ನ ಮೈದಾನಗಳಲ್ಲಿ ಟೆಸ್ಟ್ ಪಂದ್ಯಗಳನ್ನಾಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿ, ಸಂಜಯ್ ಮಂಜ್ರೇಕರ್ ಅವರ ಸಾಧನೆಗೆ ಸರಿಸಮಾನವಾಗಿ ನಿಂತಿದ್ದಾರೆ. ಕ್ರೈಸ್ಟ್‌ಚರ್ಚ್ ಪಂದ್ಯದೊಂದಿಗೆ ಜೈಸ್ವಾಲ್ 33 ವಿಭಿನ್ನ ಮೈದಾನಗಳಲ್ಲಿ ಆಡಿದ ಸಾಧನೆ ಮಾಡಿದ್ದಾರೆ. ಇದು ಅವರ ವೃತ್ತಿಜೀವನದ ಮಹತ್ವದ ಮೈಲಿಗಲ್ಲು.
Updated on: Nov 27, 2026 | 1:24 PM

ಭಾರತದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಅಪರೂಪದ ಸಾಧನೆ ಮಾಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಮೂಲಕ ಈ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿದ್ದು, ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರ ಸಾಧನೆಯ ಸರಿಸಮಾನವಾಗಿ ನಿಂತಿದ್ದಾರೆ(PC-PTI).

ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಬಳಿಕ ಅತಿ ಹೆಚ್ಚು ವಿಭಿನ್ನ ಮೈದಾನಗಳಲ್ಲಿ ಟೆಸ್ಟ್ ಪಂದ್ಯಗಳನ್ನಾಡಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಜೈಸ್ವಾಲ್ ಅಗ್ರಸ್ಥಾನಕ್ಕೇರಿದ್ದಾರೆ. ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದೊಂದಿಗೆ ಅವರು 33 ವಿಭಿನ್ನ ಮೈದಾನಗಳಲ್ಲಿ ಆಡಿದ ಸಾಧನೆ ಮಾಡಿದ್ದಾರೆ(PC-PTI).

ಇದಕ್ಕೂ ಮೊದಲು ಸಚಿನ್ ತೆಂಡೂಲ್ಕರ್ 32 ವಿಭಿನ್ನ ಮೈದಾನಗಳಲ್ಲಿ ಟೆಸ್ಟ್ ಪಂದ್ಯಗಳನ್ನಾಡಿ ಈ ದಾಖಲೆ ಹೊಂದಿದ್ದರು. ಇದೀಗ 33 ಪಂದ್ಯಗಳೊಂದಿಗೆ ಜೈಸ್ವಾಲ್ ಸಚಿನ್ ಅವರನ್ನು ಹಿಂದಿಕ್ಕಿದ್ದಾರೆ. ಇದೇ ಪಟ್ಟಿಯಲ್ಲಿ ಸಂಜಯ್ ಮಂಜ್ರೇಕರ್ ಕೂಡ 33 ಮೈದಾನಗಳಲ್ಲಿ ಆಡಿದ ಸಾಧನೆ ಹೊಂದಿದ್ದಾರೆ(PC-PTI).

ಜೈಸ್ವಾಲ್ ತಮ್ಮ 32ನೇ ಟೆಸ್ಟ್ ಪಂದ್ಯವನ್ನು ನ್ಯೂಜಿಲೆಂಡ್‌ನ ಬೇಸಿನ್ ರಿಸರ್ವ್ ಮೈದಾನದಲ್ಲಿ ಆಡಿದ್ದರು. ಇತ್ತ ಸಚಿನ್ ತೆಂಡೂಲ್ಕರ್ ಕೂಡ ತಮ್ಮ 32ನೇ ಟೆಸ್ಟ್ ಪಂದ್ಯವನ್ನು ನ್ಯೂಜಿಲೆಂಡ್‌ನ ಸೆಡ್ಡನ್ ಪಾರ್ಕ್‌ನಲ್ಲಿ ಆಡಿದ್ದರು. ಆ ಪಂದ್ಯದಲ್ಲಿ ಸಚಿನ್ ಮೊದಲ ಇನ್ನಿಂಗ್ಸ್‌ನಲ್ಲಿ 43 ರನ್ ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 11 ರನ್ ಗಳಿಸಿದ್ದರು(PC-PTI).

2023ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಯಶಸ್ವಿ ಜೈಸ್ವಾಲ್, ಅಂದಿನಿಂದ ಭಾರತ ತಂಡದ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಚೊಚ್ಚಲ ಟೆಸ್ಟ್ ಸರಣಿಯಲ್ಲೇ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದ್ದ ಅವರು 88.67ರ ಸರಾಸರಿಯಲ್ಲಿ 266 ರನ್ ಗಳಿಸಿದ್ದರು(PC-PTI).

ತವರಿನಲ್ಲಿ ಟೆಸ್ಟ್ ಪಂದ್ಯಗಳನ್ನಾಡುವಾಗ 54.50ರ ಸರಾಸರಿ ಹೊಂದಿರುವ ಜೈಸ್ವಾಲ್, ವಿದೇಶಿ ನೆಲದಲ್ಲಿ 42.67ರ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ಪ್ರವಾಸ ಸೇರಿದಂತೆ ಕೆಲವು ಸರಣಿಗಳಲ್ಲಿ ಅವರ ಬ್ಯಾಟಿಂಗ್ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿರಲಿಲ್ಲ. ಆ ಸರಣಿಗಳಲ್ಲಿ ಕ್ರಮವಾಗಿ 20, 24 ಮತ್ತು 25ರ ಸರಾಸರಿಯಲ್ಲಿ ರನ್ ಗಳಿಸಿ ನಿರಾಸೆ ಮೂಡಿಸಿದ್ದರು. ಆದರೆ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಮತ್ತೆ ಲಯ ಕಂಡುಕೊಳ್ಳುವ ಸೂಚನೆ ನೀಡಿದ್ದಾರೆ(PC-PTI).

ಜೈಸ್ವಾಲ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಈವರೆಗೆ ಏಳು ಶತಕ ಹಾಗೂ 14 ಅರ್ಧಶತಕಗಳನ್ನು ಬಾರಿಸಿದ್ದಾರೆ. 32 ಟೆಸ್ಟ್ ಪಂದ್ಯಗಳಿಂದ 48.16ರ ಸರಾಸರಿಯಲ್ಲಿ 2,697 ರನ್ ಗಳಿಸಿದ್ದಾರೆ. ಇದೀಗ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಹಿಂದಿಕ್ಕಿರುವುದು ಅವರ ಟೆಸ್ಟ್ ವೃತ್ತಿಜೀವನದ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದೆ(PC-PTI).

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.
Read More



