AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಯಶಸ್ವಿ ಜೈಸ್ವಾಲ್ ಸಿಡಿಲಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

Yashasvi Jaiswal Records: ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಕೇವಲ 9 ಪಂದ್ಯಗಳ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 1000 ರನ್ ಪೂರೈಸಿದ್ದಾರೆ. ಈ ಮೂಲಕ ಅತೀ ಕಡಿಮೆ ಟೆಸ್ಟ್ ಪಂದ್ಯಗಳಲ್ಲಿ ಸಾವಿರ ರನ್​ಗಳ ಮೈಲುಗಲ್ಲು ದಾಟಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದರ ಜೊತೆಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ವಿಶ್ವ ದಾಖಲೆಯನ್ನೂ ಕೂಡ ಯಶಸ್ವಿ ಜೈಸ್ವಾಲ್ ಮುರಿದಿದ್ದಾರೆ.

TV9 Web
| Edited By: |

Updated on: Mar 09, 2024 | 10:53 AM

Share
ಟೀಮ್ ಇಂಡಿಯಾ (Team India) ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಂಚಲನ ಸೃಷ್ಟಿಸುತ್ತಿದ್ದಾರೆ. ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ 57 ರನ್ ಬಾರಿಸುವ ಮೂಲಕ ಯಶಸ್ವಿ ಟೆಸ್ಟ್ ಕ್ರಿಕೆಟ್​ನಲ್ಲಿ ಸಾವಿರ ರನ್ ಪೂರೈಸಿದ್ದಾರೆ.

1 / 6
ವಿಶೇಷ ಎಂದರೆ ಈ ಸಾವಿರ ರನ್​ಗಳಲ್ಲಿ ಯಶಸ್ವಿ ಬ್ಯಾಟ್​ನಿಂದ ಬರೋಬ್ಬರಿ 29 ಸಿಕ್ಸ್​ಗಳು ಮೂಡಿಬಂದಿವೆ. ಅಂದರೆ 9 ಟೆಸ್ಟ್ ಪಂದ್ಯಗಳ ಮೂಲಕ ಯಶಸ್ವಿ ಜೈಸ್ವಾಲ್ ಇದುವರೆಗೆ 29 ಸಿಕ್ಸ್​ಗಳನ್ನು ಬಾರಿಸಿದ್ದಾರೆ.

2 / 6
ಈ 29 ಸಿಕ್ಸ್​ಗಳಲ್ಲಿ 26 ಸಿಕ್ಸರ್​ಗಳು ಮೂಡಿಬಂದಿರುವುದು ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಎಂಬುದು ವಿಶೇಷ. ಇದೀಗ ಈ 26 ಸಿಕ್ಸ್​ಗಳೊಂದಿಗೆ ಯಶಸ್ವಿ ಭರ್ಜರಿ ದಾಖಲೆಯನ್ನು ಬರೆದಿದ್ದಾರೆ. ಅದು ಕೂಡ ಮಾಸ್ಟರ್ ಬ್ಲಾಸ್ಟರ್ ಸಚಿನ್ ದಾಖಲೆ ಮುರಿಯುವ ಮೂಲಕ.

3 / 6
ಹೌದು, ಟೆಸ್ಟ್ ಕ್ರಿಕೆಟ್​ನಲ್ಲಿ ತಂಡವೊಂದರ ವಿರುದ್ಧ ಅತ್ಯಧಿಕ ಸಿಕ್ಸ್​ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಆಸ್ಟ್ರೇಲಿಯಾ 25 ಸಿಕ್ಸ್​ ಬಾರಿಸುವ ಮೂಲಕ ಸಚಿನ್ ಈ ವಿಶೇಷ ದಾಖಲೆ ಬರೆದಿದ್ದರು.

4 / 6
ಇದೀಗ ಇಂಗ್ಲೆಂಡ್ ವಿರುದ್ಧ 26 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ ತಂಡವೊಂದರ ವಿರುದ್ಧ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಸದ್ಯ ಇಂಗ್ಲೆಂಡ್ ವಿರುದ್ಧ 712 ರನ್ ಕಲೆಹಾಕಿರುವ ಯಶಸ್ವಿ ಜೈಸ್ವಾಲ್ 2ನೇ ಇನಿಂಗ್ಸ್​ನಲ್ಲಿ 63 ರನ್​ ಬಾರಿಸಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅಂದರೆ ಭಾರತದ ಪರ ಟೆಸ್ಟ್ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಗವಾಸ್ಕರ್ 774 ರನ್ ಕಲೆಹಾಕಿದ್ದರು. ಇದೀಗ ಈ ಐತಿಹಾಸಿಕ ದಾಖಲೆ ಮುರಿಯಲು ಯಶಸ್ವಿ ಜೈಸ್ವಾಲ್​ಗೆ ಕೇವಲ 63 ರನ್​ಗಳ ಅವಶ್ಯಕತೆಯಿದೆ.

6 / 6
TV9 Web
TV9 Web

TV9 Kannada

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!