ವಿರಾಟ್ ಕೊಹ್ಲಿಯ ಹೀನಾಯ ದಾಖಲೆ ಯಶಸ್ವಿ ಜೈಸ್ವಾಲ್ ಪಾಲು!

Updated on: Nov 28, 2026 | 9:49 AM

ಭಾರತದ ಯುವ ಆರಂಭಿಕ ದಾಂಡಿಗ ಯಶಸ್ವಿ ಜೈಸ್ವಾಲ್, ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗುವ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ (WTC) ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಡಕ್‌ಔಟ್ ಆದ ಭಾರತೀಯ ಸ್ಪೆಷಲಿಸ್ಟ್ ಬ್ಯಾಟರ್ ಎಂಬ ಅನಪೇಕ್ಷಿತ ದಾಖಲೆಗೆ ಪಾತ್ರರಾಗಿದ್ದಾರೆ.

1 / 5
ಟೀಮ್ ಇಂಡಿಯಾದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮತ್ತೊಂದು ದಾಖಲೆ ಬರೆದಿದ್ದಾರೆ. ಆದರೆ ಈ ಬಾರಿ ಬರೆದಿರುವುದು ಹೀನಾಯ ದಾಖಲೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಅನಪೇಕ್ಷಿತ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: gettyimage)

ಟೀಮ್ ಇಂಡಿಯಾದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮತ್ತೊಂದು ದಾಖಲೆ ಬರೆದಿದ್ದಾರೆ. ಆದರೆ ಈ ಬಾರಿ ಬರೆದಿರುವುದು ಹೀನಾಯ ದಾಖಲೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ಅನಪೇಕ್ಷಿತ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. (PC: gettyimage)

2 / 5

ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲೆ ಓವಲ್‌ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಜೈಸ್ವಾಲ್ 6 ಎಸೆತಗಳನ್ನು ಎದುರಿಸಿ ಮ್ಯಾಟ್ ಹೆನ್ರಿ ಬೌಲಿಂಗ್‌ನಲ್ಲಿ ಶೂನ್ಯಕ್ಕೆ ಬೌಲ್ಡ್ ಆಗಿದ್ದಾರೆ. ಈ 'ಸೊನ್ನೆ'ಯೊಂದಿಗೆ  WTC ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಸ್ಪೆಷಲಿಸ್ಟ್​ ಬ್ಯಾಟರ್ ಎನಿಸಿಕೊಂಡಿದ್ದಾರೆ.  (PC: gettyimage)

3 / 5

ಇದಕ್ಕೂ ಮುನ್ನ ಈ ಹೀನಾಯ ದಾಖಲೆ ಟೀಮ್ ಇಂಡಿಯಾದ ಮಾಜಿ ನಾಯಕ ಹಾಗೂ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ  ಹೆಸರಿನಲ್ಲಿತ್ತು. ಕೊಹ್ಲಿ ತಮ್ಮ WTC ವೃತ್ತಿಜೀವನದಲ್ಲಿ ಆಡಿದ 65 ಇನ್ನಿಂಗ್ಸ್‌ಗಳಲ್ಲಿ ಒಟ್ಟು 7 ಬಾರಿ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದ್ದರು. (PC: gettyimage)

4 / 5

ಇದೀಗ ಕೊಹ್ಲಿಯ ಹೆಸರಿನಲ್ಲಿದ್ದ ಹೀನಾಯ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ. WTC ಸರಣಿಯಲ್ಲಿ ಈವರೆಗೆ 59 ಇನ್ನಿಂಗ್ಸ್‌ಗಳನ್ನು ಆಡಿರುವ ಯಶಸ್ವಿ ಜೈಸ್ವಾಲ್ ಒಟ್ಟು 8 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಸರಣಿಯಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಭಾರತೀಯ ಬ್ಯಾಟರ್ ಎಂಬ ಅನಪೇಕ್ಷಿತ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: gettyimage)

5 / 5

ಒಂದೆಡೆ ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಅನಪೇಕ್ಷಿತ ದಾಖಲೆ ಬರೆದಿದ್ದರೂ, ಯಶಸ್ವಿ ಜೈಸ್ವಾಲ್ ಭಾರತದ ಅತ್ಯಂತ ಯಶಸ್ವಿ WTC ಬ್ಯಾಟರ್‌ಗಳಲ್ಲಿ ಒಬ್ಬರಾಗಿದ್ದಾರೆ. ಇತ್ತೀಚೆಗಷ್ಟೇ ಅವರು 2,673 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿ (2,617 ರನ್) ಅವರನ್ನು ಹಿಂದಿಕ್ಕಿ, WTC ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ 5ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. (PC: gettyimage)

Published On - 9:48 am, Sat, 28 November 26

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us