ಯಶಸ್ವಿ ಜೈಸ್ವಾಲ್ ಆರ್ಭಟಕ್ಕೆ ಸೆಹ್ವಾಗ್ ದಾಖಲೆಯೇ ಧ್ವಂಸ..!

Yashasvi Jaiswal Records: ಕಾನ್ಪುರದ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್​ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ 72(51) ರನ್ ಬಾರಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲೂ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 51(45) ರನ್ ಕಲೆಹಾಕಿದ್ದರು. ಈ ಮೂಲಕ ಒಂದೇ ಪಂದ್ಯದಲ್ಲಿ ಯುವ ದಾಂಡಿಗ ಎರಡು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 01, 2024 | 2:59 PM

ಟೆಸ್ಟ್ ಕ್ರಿಕೆಟ್​ನಲ್ಲಿ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಆರ್ಭಟ ಮುಂದುವರೆದಿದೆ. ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಜೈಸ್ವಾಲ್ ಸ್ಪೋಟಕ ಅರ್ಧಶತಕ ಬಾರಿಸಿದ್ದರು. ಈ ಸಿಡಿಲಬ್ಬರದ ಅರ್ಧಶತಕದೊಂದಿಗೆ ಮಾಜಿ ಡ್ಯಾಶಿಂಗ್ ಓಪನರ್ ವಿರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಮುರಿದಿದ್ದಾರೆ.

1 / 8
ಈ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದರೊಂದಿಗೆ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

2 / 8
ಇದಕ್ಕೂ ಮುನ್ನ ಈ ದಾಖಲೆ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿತ್ತು. 2008 ರಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೆಹ್ವಾಗ್ ಕೇವಲ 32 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ ಟೆಸ್ಟ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ಆರಂಭಿಕ ಆಟಗಾರ ಎನಿಸಿಕೊಂಡಿದ್ದರು.

3 / 8
ಇದೀಗ ಬಾಂಗ್ಲಾದೇಶ್ ವಿರುದ್ಧ ಕೇವಲ 31 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಸೆಹ್ವಾಗ್ ಹೆಸರಿನಲ್ಲಿದ್ದ ದಾಖಲೆಯನ್ನು ಜೈಸ್ವಾಲ್ ಮುರಿದಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಭಾರತದ ಪರ ಅತೀ ಕಡಿಮೆ ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ ಓಪನರ್ ಎನಿಸಿಕೊಂಡಿದ್ದಾರೆ.

4 / 8
ಹಾಗೆಯೇ ಈ ಪಂದ್ಯದ 2ನೇ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ 45 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 51 ರನ್ ಬಾರಿಸಿದ್ದರು. ಈ ಮೂಲಕ ವೀರೇಂದ್ರ ಸೆಹ್ವಾಗ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

5 / 8
ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಎರಡು ಇನಿಂಗ್ಸ್​ಗಳಲ್ಲಿ 100ರ ಸ್ಟ್ರೈಕ್​ ರೇಟ್​ನಲ್ಲಿ 50+ ಸ್ಕೋರ್​ಗಳಿಸಿದ ವಿಶೇಷ ದಾಖಲೆಯೊಂದು ಸೆಹ್ವಾಗ್ ಹೆಸರಿನಲ್ಲಿತ್ತು. 2011 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ ಸೆಹ್ವಾಗ್ ಎರಡು ಇನಿಂಗ್ಸ್​ಗಳಲ್ಲಿ ಕ್ರಮವಾಗಿ 55(46) ಮತ್ತು 55(55) ರನ್ ಬಾರಿಸಿದ್ದರು.

6 / 8
ಇದೀಗ ಈ ದಾಖಲೆಯನ್ನು ಸರಿಗಟ್ಟುವಲ್ಲಿ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್​ನ ಮೊದಲ ಇನಿಂಗ್ಸ್​ನಲ್ಲಿ 72(51) ರನ್ ಬಾರಿಸಿದ್ದ ಜೈಸ್ವಾಲ್ ದ್ವಿತೀಯ ಇನಿಂಗ್ಸ್​ನಲ್ಲಿ 51(45) ರನ್ ಕಲೆಹಾಕಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್​ನ ಎರಡು ಇನಿಂಗ್ಸ್​ಗಳಲ್ಲಿ 100ರ ಸ್ಟ್ರೈಕ್​ ರೇಟ್​ನಲ್ಲಿ 50+ ಸ್ಕೋರ್​ಗಳಿಸಿದ ಭಾರತದ ಮೊದಲ ಎಡಗೈ ದಾಂಡಿಗ, 2ನೇ ಆಟಗಾರ ಎನಿಸಿಕೊಂಡಿದ್ದಾರೆ.

7 / 8
ಅಂದಹಾಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ  ಭಾರತೀಯ ಬ್ಯಾಟರ್​ನ ದಾಖಲೆ​ ರಿಷಭ್ ಪಂತ್ ಹೆಸರಿನಲ್ಲಿದೆ. 2022 ರಲ್ಲಿ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಂತ್ ಕೇವಲ 28 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದ್ದರು. ಈ ದಾಖಲೆಯನ್ನು ಈವರೆಗೆ ಯಾರಿಂದಲೂ ಮುರಿಯಲು ಸಾಧ್ಯವಾಗಿಲ್ಲ ಎಂಬುದು ವಿಶೇಷ.

8 / 8
Follow us
ಮೈಸೂರು: ತ್ರಿವೇಣಿ ಸಂಗಮ ಕುಂಭಮೇಳದ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯವರಿಗೆ ಇಂದು ನಾಲ್ಕು ಗ್ರಹಗಳ ಶುಭಫಲವಿದೆ

ಹಾಸಿಗೆ ಹಿಡಿದ ಮಗನ ಚಿಕಿತ್ಸೆಗೆ ಕುಮಾರಸ್ವಾಮಿ ಬಳಿ ಸಹಾಯ ಕೇಳಿದ ತಾಯಿ

ಕೊಹ್ಲಿಯ ಕೈ ಮುಟ್ಟಿ ಸ್ವರ್ಗ ಸಿಕ್ಕವನಂತೆ ಕುಣಿದಾಟಿದ ಬಾಲಕ

ಬೆಂಗಳೂರು: ಮಾದಾವರ ಸುತ್ತಮುತ್ತ ಫುಲ್​ ಟ್ರಾಫಿಕ್​ಜಾಮ್, ವಾಹನ ಸವಾರರ ಪರದಾಟ

ಕಟಕ್‌ನಲ್ಲಿ ಅರ್ಧಕ್ಕೆ ನಿಂತ ಪಂದ್ಯ; ಮೈದಾನ ತೊರೆದ ಎಲ್ಲಾ ಆಟಗಾರರು..!

Aero india: ಬೆಂಗಳೂರಿನಲ್ಲಿ ರಾಜನಾಥ್​ ಸಿಂಗ್​ ಸುದ್ದಿಗೋಷ್ಠಿಯ ನೇರಪ್ರಸಾರ

ಬೆಂಗಳೂರು: ಖ್ಯಾತ ಗಾಯಕನ ಸಂಗೀತ ಕಾರ್ಯಕ್ರಮಕ್ಕೆ ಪೊಲೀಸರಿಂದ ತಡೆ

ಮಜಾ ಟಾಕೀಸ್​: ಉಗ್ರಂ ಮಂಜು ಇಂಗ್ಲಿಷ್ ಕೇಳಿ ಬಿದ್ದು ಬಿದ್ದು ನಕ್ಕ ಗೌತಮಿ

ರಾಜನಹಳ್ಳಿ ವಾಲ್ಮೀಕಿ ಜಾತ್ರೆಯಲ್ಲಿ ಸತೀಶ್ ಜಾರಕಿಹೊಳಿಯದ್ದೇ ಫುಲ್ ಹವಾ..!