IND vs AFG: 2ನೇ ಏಕದಿನ ಶತಕ ಬಾರಿಸಿ ಅಗ್ರಸ್ಥಾನಕ್ಕೇರಿದ ಯಶಸ್ವಿ ಜೈಸ್ವಾಲ್

Updated on: Jun 20, 2026 | 9:10 PM

Yashasvi Jaiswal Century: ಅಫ್ಘಾನಿಸ್ತಾನ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಅಜೇಯ 110 ರನ್ ಗಳಿಸಿ ಭಾರತಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು. ಇದು ಜೈಸ್ವಾಲ್ ಅವರ ಎರಡನೇ ODI ಶತಕವಾಗಿದ್ದು, ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಎರಡು ಶತಕ ಬಾರಿಸಿದ ಭಾರತದ ಮೊದಲನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರೋಹಿತ್ ಶರ್ಮಾ ಜೊತೆ ಪಾಲುದಾರಿಕೆ ಮಾಡಿ, ಹಲವು ದಾಖಲೆಗಳನ್ನು ಮುರಿದು ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಅವರ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶನವು ಪಂದ್ಯದ ಪ್ರಮುಖ ಅಂಶವಾಗಿತ್ತು.

1 / 5
ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭಾರತದ ಯುವ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅಜೇಯ ಶತಕ ಬಾರಿಸುವ ಮೂಲಕ ತಂಡಕ್ಕೆ ಅಮೋಘ ಗೆಲುವು ತಂದುಕೊಟ್ಟರು. ಮೊದಲ ಎರಡು ಪಂದ್ಯಗಳಲ್ಲಿ ರನ್ ಗಳಿಸುವಲ್ಲಿ ವಿಫಲರಾಗಿದ್ದ ಜೈಸ್ವಾಲ್ ಮೂರನೇ ಪಂದ್ಯದಲ್ಲಿ, ರೋಹಿತ್ ಶರ್ಮಾ ಅವರೊಂದಿಗೆ ಶತಕದ ಪಾಲುದಾರಿಕೆ ಮಾಡುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು (PC-PTI).

2 / 5
ಈ ಪಂದ್ಯದಲ್ಲಿ 86 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ ಅಜೇಯ 110 ರನ್ ಗಳಿಸಿದರು. ಇದು ಯಶಸ್ವಿ ಅವರ ಎರಡನೇ ಏಕದಿನ ಶತಕವಾಗಿದ್ದು, ಈ ಮೂಲಕ ಭಾರತದ ಪರ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಶತಕ ಗಳಿಸಿದ ಮೊದಲನೇ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಜೈಸ್ವಾಲ್ ಪಾತ್ರರಾಗಿದ್ದಾರೆ. ಈ ಮೂಲಕ ಜೈಸ್ವಾಲ್, ಶಿಖರ್ ಧವನ್ ಅವರನ್ನು ಹಿಂದಿಕ್ಕಿದರು (PC-PTI)

3 / 5
ಶಿಖರ್ ಧವನ್ ಏಳು ಇನ್ನಿಂಗ್ಸ್‌ಗಳಲ್ಲಿ ತಮ್ಮ ಎರಡನೇ ಏಕದಿನ ಶತಕವನ್ನು ಬಾರಿಸಿದ್ದರು. ಕೇದಾರ್ ಜಾಧವ್ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರೆ, ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ 17 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಭಾರತದ ಹಾಲಿ ನಾಯಕ ಶುಭಮನ್ ಗಿಲ್ 18 ಇನ್ನಿಂಗ್ಸ್‌ಗಳಲ್ಲಿ ಎರಡು ಶತಕಗಳನ್ನು ಕಲೆಹಾಕಿದ್ದರು (PC-PTI).

4 / 5
ಇನ್ನು ಅಫ್ಘಾನಿಸ್ತಾನದ ವಿರುದ್ಧ ಏಕದಿನ ಪಂದ್ಯದಲ್ಲಿ ಅತಿ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಜೈಸ್ವಾಲ್ ಸ್ಥಾನ ಪಡೆದಿದ್ದಾರೆ. ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಇಯಾನ್ ಮಾರ್ಗನ್ 57 ಎಸೆತಗಳಲ್ಲಿ ಶತಕ ಬಾರಿಸಿದರೆ, ರೋಹಿತ್ ಶರ್ಮಾ 63 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. ಹಾಗೆಯೇ ಇದೇ ಸರಣಿಯಲ್ಲಿ, ಇಶಾನ್ ಕಿಶನ್ 71 ಎಸೆತಗಳಲ್ಲಿ ಮತ್ತು ಶುಭಮನ್ ಗಿಲ್ 77 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಇದೀಗ ಯಶಸ್ವಿ ಜೈಸ್ವಾಲ್ 83 ಎಸೆತಗಳಲ್ಲಿ ತಮ್ಮ ಶತಕವನ್ನು ಪೂರೈಸಿದ್ದಾರೆ (PC-PTI).

5 / 5
ಪಂದ್ಯದ ವಿಚಾರಕ್ಕೆ ಬರುವುದಾದರೆ ಯಶಸ್ವಿ ಜೈಸ್ವಾಲ್ ಆರಂಭದಿಂದಲೇ ಆಕ್ರಮಣಕಾರಿಯಾಗಿ ಬ್ಯಾಟ್ ಬೀಸಿ ಕೇವಲ 37 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಜೈಸ್ವಾಲ್ 86 ಎಸೆತಗಳಲ್ಲಿ 110 ರನ್ ಬಾರಿಸಿ ಅಜೇಯರಾಗಿ ಉಳಿದರು. ಜೈಸ್ವಾಲ್ ಅವರ ಇನ್ನಿಂಗ್ಸ್​ನಲ್ಲಿ 13 ಬೌಂಡರಿಗಳು ಮತ್ತು ಮೂರು ಸಿಕ್ಸರ್‌ಗಳು ಸೇರಿದ್ದವು (PC-PTI).

Follow Us