AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: 2 ಬಾರಿ ದ್ವಿಶತಕ ಸಿಡಿಸಿದ್ರು ಜೈಸ್ವಾಲ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಮಾತ್ರ ಸಿಕ್ಕಿಲ್ಲ..!

India vs England: ರಾಜ್​ಕೋಟ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಜೈಸ್ವಾಲ್ ಅಜೇಯ ದ್ವಿಶತಕ ಬಾರಿಸಿದ್ದರು. ಈ ಡಬಲ್ ಸೆಂಚುರಿಯ ಹೊರತಾಗಿಯೂ ಈ ಪಂದ್ಯದ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಜೈಸ್ವಾಲ್​ಗೆ ಸಿಕ್ಕಿಲ್ಲ ಎಂಬುದು ವಿಶೇಷ.

TV9 Web
| Edited By: |

Updated on: Feb 19, 2024 | 10:28 AM

Share
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಟೆಸ್ಟ್ ಸರಣಿಯಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಬ್ಯಾಕ್ ಟು ಬ್ಯಾಕ್ ಡಬಲ್ ಸೆಂಚುರಿ ಸಿಡಿಸಿ ಅಬ್ಬರಿಸಿದ್ದಾರೆ. ಈ ಎರಡು ದ್ವಿಶತಕಗಳ ಹೊರತಾಗಿಯೂ ಜೈಸ್ವಾಲ್​ಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಿಕ್ಕಿಲ್ಲ ಎಂಬುದು ವಿಶೇಷ.

1 / 5
ವಿಶಾಖಪಟ್ಟಣಂನಲ್ಲಿ ನಡೆದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಯಶಸ್ವಿ ಜೈಸ್ವಾಲ್ 209 ರನ್​ ಬಾರಿಸಿ ಅಬ್ಬರಿಸಿದ್ದರು. ಆದರೆ ಇದೇ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿದ್ದ ಜಸ್​ಪ್ರೀತ್ ಬುಮ್ರಾ 2 ಇನಿಂಗ್ಸ್​ಗಳಿಂದ 9 ವಿಕೆಟ್ ಕಬಳಿಸಿದರು. ಈ ಮೂಲಕ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.

2 / 5
ಇನ್ನು ರಾಜ್​ಕೋಟ್​ನಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ವಿಫಲರಾಗಿದ್ದ ಯಶಸ್ವಿ ಜೈಸ್ವಾಲ್ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 214 ರನ್​ ಬಾರಿಸಿದ್ದರು. ಆದರೆ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 112 ರನ್​ಗಳಿಸಿದ್ದ ಜಡೇಜಾ ಬೌಲಿಂಗ್​ನಲ್ಲಿ 6 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಇದರೊಂದಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಜಡ್ಡುಗೆ ಒಲಿದಿದೆ.

3 / 5
ಅಂದರೆ ಎರಡೂ ಪಂದ್ಯಗಳಲ್ಲೂ ಸ್ಪೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದರೂ ಯಶಸ್ವಿ ಜೈಸ್ವಾಲ್​ ಪಂದ್ಯ ಶ್ರೇಷ್ಠ ಪ್ರಶಸ್ತಿಯಿಂದ ವಂಚಿತರಾಗಿದ್ದಾರೆ. ಇದನ್ನೇ ಈಗ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ. 22 ವರ್ಷದ ಯುವ ಆಟಗಾರನೊಬ್ಬ ಅದ್ಭುತ ಪ್ರದರ್ಶನ ನೀಡಿದರೂ ಆತನನ್ನು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಪರಿಗಣಿಸದಿರುವುದು ಅನ್ಯಾಯ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

4 / 5
ಏಕೆಂದರೆ ಇಲ್ಲಿ ಜಸ್​ಪ್ರೀತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ಅವರ ಟೆಸ್ಟ್ ಅನುಭವವನ್ನು ಕೂಡ ಪರಿಗಣಿಸಬೇಕು. ಇಲ್ಲಿ ಜೈಸ್ವಾಲ್ ಆಡಿರುವುದು ಕೇವಲ 7 ಟೆಸ್ಟ್ ಪಂದ್ಯಗಳನ್ನು ಮಾತ್ರ. ಇದಾಗ್ಯೂ 22 ವರ್ಷದ ಯುವ ಆಟಗಾರನ ಪ್ರತಿಭೆಯನ್ನು ಪ್ರೋತ್ಸಾಹಿಸದೇ ಹಿರಿಯ ಆಟಗಾರರನ್ನೇ ಪಂದ್ಯ ಶ್ರೇಷ್ಠ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿರುವುದು ನ್ಯಾಯಯುತವಾಗಿಲ್ಲ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​