ಅಂದರೆ ಎರಡೂ ಪಂದ್ಯಗಳಲ್ಲೂ ಸ್ಪೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದರೂ ಯಶಸ್ವಿ ಜೈಸ್ವಾಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಯಿಂದ ವಂಚಿತರಾಗಿದ್ದಾರೆ. ಇದನ್ನೇ ಈಗ ಅನೇಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನಿಸಿದ್ದಾರೆ. 22 ವರ್ಷದ ಯುವ ಆಟಗಾರನೊಬ್ಬ ಅದ್ಭುತ ಪ್ರದರ್ಶನ ನೀಡಿದರೂ ಆತನನ್ನು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಪರಿಗಣಿಸದಿರುವುದು ಅನ್ಯಾಯ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.