ಮೊದಲ ಎಸೆತದಲ್ಲೇ ಭರ್ಜರಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
IPL 2026 DC vs RR: ಇಂಡಿಯನ್ ಪ್ರೀಮಿಯರ್ ಲೀಗ್ನ 43ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 225 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 19.5 ಓವರ್ಗಳಲ್ಲಿ 226 ರನ್ಗಳಿಸಿ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಸೋಲಿನ ನುಡವೆ ಯಶಸ್ವಿ ಜೈಸ್ವಾಲ್ ಭರ್ಜರಿ ದಾಖಲೆ ಬರೆದಿದ್ದಾರೆ.
Updated on: May 02, 2026 | 7:31 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಮತ್ತೊಂದು ದಾಖಲೆ ನಿರ್ಮಾಣವಾಗಿದೆ. ಈ ಬಾರಿ ದಾಖಲೆ ನಿರ್ಮಿಸಿರುವುದು ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal). ಅದು ಸಹ ಮೊದಲ ಎಸೆತಗಳಲ್ಲಿ ಸಿಕ್ಸ್ ಸಿಡಿಸುವ ಮೂಲಕ. ಹೀಗೆ ಸಿಡಿಸಿದ ಸಿಕ್ಸರ್ಗಳಿಂದ ಜೈಸ್ವಾಲ್ ಹೆಸರಿಗೆ ಭರ್ಜರಿ ದಾಖಲೆ ಸೇರ್ಪಡೆಯಾಗಿದೆ.

ಹೌದು, ಐಪಿಎಲ್ ಇತಿಹಾಸದಲ್ಲಿ ಇನಿಂಗ್ಸ್ನ ಮೊದಲ ಎಸೆತಗಳಲ್ಲಿ ಅತ್ಯಧಿಕ ಬಾರಿ ಸಿಕ್ಸ್ ಸಿಡಿಸಿದ ವಿಶೇಷ ದಾಖಲೆಯೊಂದು ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಮಿಚೆಲ್ ಮಾರ್ಷ್ ಎಸೆದ ಮೊದಲ ಓವರ್ನ ಮೊದಲ ಎಸೆತದಲ್ಲೇ ಯಶಸ್ವಿ ಭರ್ಜರಿ ಸಿಕ್ಸರ್ ಸಿಡಿಸಿದ್ದರು.

ಈ ಮೂಲಕ ಐಪಿಎಲ್ ಟೂರ್ನಿಯಲ್ಲಿ ನಾಲ್ಕು ಬಾರಿ ಇನಿಂಗ್ಸ್ನ ಮೊದಲ ಎಸೆತದಲ್ಲಿ ಸಿಕ್ಸ್ ಸಿಡಿಸಿದ ಆರಂಭಿಕ ದಾಂಡಿಗ ಎನಿಸಿಕೊಂಡಿದ್ದಾರೆ. ಅಲ್ಲದೆ ಯಶಸ್ವಿ ಜೈಸ್ವಾಲ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್ ಮೊದಲ ಓವರ್ನ ಮೊದಲ ಎಸೆತದಲ್ಲಿ 4 ಬಾರಿ ಸಿಕ್ಸ್ ಬಾರಿಸಿಲ್ಲ.

ಇದಕ್ಕೂ ಮುನ್ನ ಈ ದಾಖಲೆ ಪಂಜಾಬ್ ಕಿಂಗ್ಸ್ ತಂಡದ ಯುವ ಎಡಗೈ ಓಪನರ್ ಪ್ರಿಯಾಂಶ್ ಆರ್ಯ ಹೆಸರಿನಲ್ಲಿತ್ತು. ಪ್ರಿಯಾಂಶ್ ಎರಡು ಬಾರಿ ಮೊದಲ ಓವರ್ನ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸಿ ಇನಿಂಗ್ಸ್ ಆರಂಭಿಸಿದ್ದರು. ಇದೀಗ ಈ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಮುರಿದಿದ್ದಾರೆ.

2023 ರಲ್ಲಿ ಪಂಜಾಬ್ ಕಿಂಗ್ಸ್ ತಂಡದಲ್ಲಿದ್ದ ಸ್ಯಾಮ್ ಕರನ್ ಎಸೆದ ಇನಿಂಗ್ಸ್ನ ಮೊದಲ ಎಸೆತದಲ್ಲಿ ಸಿಕ್ಸ್ ಸಿಡಿಸಿದ್ದರು. ಇದಾದ ಬಳಿಕ 2023 ರಲ್ಲಿ ಕೆಕೆಆರ್ ತಂಡದಲ್ಲಿ ನಿತೀಶ್ ರಾಣಾ ಅವರ ಎಸೆದ ಇಇನಿಂಗ್ಸ್ನ ಮೊದಲ ಓವರ್ನ ಮೊದಲ ಬಾಲ್ನಲ್ಲೇ ಸಿಕ್ಸ್ ಬಾರಿಸಿದ್ದರು. ಇನ್ನು 2025 ರಲ್ಲಿ ಆರ್ಸಿಬಿಯ ಭುವನೇಶ್ವರ್ ಕುಮಾರ್ ಎಸೆತದಲ್ಲಿ ಸಿಕ್ಸ್ ಸಿಡಿಸಿದ್ದರು. ಇದೀಗ ಮಿಚೆಲ್ ಸ್ಟಾರ್ಕ್ ಎಸೆತದಲ್ಲಿ ಸಿಕ್ಸ್ ಬಾರಿಸಿ ಐಪಿಎಲ್ ಇನಿಂಗ್ಸ್ನ ಮೊದಲ ಓವರ್ನ ಮೊದಲ ಎಸೆತದಲ್ಲಿ 4 ಬಾರಿಸಿ ಸಿಕ್ಸ್ ಸಿಡಿಸಿದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದಾರೆ.




