AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಭರ್ಜರಿ ದಾಖಲೆ ನಿರ್ಮಿಸಿದ ಯಶಸ್ವಿ ಜೈಸ್ವಾಲ್

India vs Zimbabwe: ಝಿಂಬಾಬ್ವೆ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 152 ರನ್​ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ಯಶಸ್ವಿ ಜೈಸ್ವಾಲ್ (93) ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಪರಿಣಾಮ 15.2 ಓವರ್​ಗಳಲ್ಲಿ ಗುರಿ ತಲುಪುವ ಮೂಲಕ ಭಾರತ ತಂಡ 10 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jul 14, 2024 | 8:03 AM

Share
ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 4ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ವಿಶೇಷ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 7
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ನೊಂದಿಗೆ ಅಬ್ಬರಿಲಾರಂಭಿಸಿದ ಯುವ ದಾಂಡಿಗ 29 ಎಸೆತಗಳಲ್ಲಿ ಆಕರ್ಷಕ ಅರ್ಧಶತಕ ಪೂರೈಸಿದರು. ಅದು ಕೂಡ ಮೊದಲ 7 ಓವರ್​ಗಳ ಒಳಗೆ ಎಂಬುದು ವಿಶೇಷ. ಇದರೊಂದಿಗೆ ವಿಶೇಷ ದಾಖಲೆಯೊಂದು ಯಶಸ್ವಿ ಪಾಲಾಯಿತು.

2 / 7
ಅಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೊದಲ 7 ಓವರ್​ಗಳಲ್ಲಿ ಅತೀ ಹೆಚ್ಚು ಬಾರಿ 50+ ಸ್ಕೋರ್​ಗಳಿಸಿದ ವಿಶೇಷ ದಾಖಲೆಯೊಂದು ರೋಹಿತ್ ಶರ್ಮಾ ಹೆಸರಿನಲ್ಲಿತ್ತು. ಹಿಟ್​ಮ್ಯಾನ್ 2 ಬಾರಿ 7 ಓವರ್​ಗಳ ಒಳಗೆ ಅರ್ಧಶತಕ ಪೂರೈಸಿ ಈ ದಾಖಲೆ ನಿರ್ಮಿಸಿದ್ದರು.

3 / 7
ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ. ಝಿಂಬಾಬ್ವೆ ವಿರುದ್ಧ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವುದರೊಂದಿಗೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಮೊದಲ 7 ಓವರ್​ಗಳ ಒಳಗೆ ಅತ್ಯಧಿಕ ಬಾರಿ 50+ ಸ್ಕೋರ್ ಗಳಿಸಿದ ವಿಶೇಷ ದಾಖಲೆಯೊಂದು ಜೈಸ್ವಾಲ್ ಪಾಲಾಗಿದೆ.

4 / 7
ಯಶಸ್ವಿ ಜೈಸ್ವಾಲ್ ಈವರೆಗೆ ಮೂರು ಬಾರಿ 7 ಓವರ್​ಗಳ ಒಳಗೆ ಅರ್ಧಶತಕಕ್ಕಿಂತ ಹೆಚ್ಚು ರನ್ ಗಳಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಹೆಸರಿನಲ್ಲಿದ್ದ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಳ್ಳುವಲ್ಲಿ ಯುವ ಎಡಗೈ ದಾಂಡಿಗ ಯಶಸ್ವಿಯಾಗಿದ್ದಾರೆ.

5 / 7
ಇದಲ್ಲದೆ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಮೂರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೂ ಜೈಸ್ವಾಲ್ ಪಾತ್ರರಾಗಿದ್ದಾರೆ. 22 ವರ್ಷದ ಯಶಸ್ವಿ ಜೈಸ್ವಾಲ್ ಈವರೆಗೆ 3 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.

6 / 7
ಇನ್ನು ಈ ಪಂದ್ಯದಲ್ಲಿ 53 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ 2 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ ಅಜೇಯ 93 ರನ್ ಬಾರಿಸಿದರು. ಅಲ್ಲದೆ ಶುಭ್​ಮನ್ ಗಿಲ್ (58) ಜೊತೆಗೂಡಿ ಭಾರತ ತಂಡವನ್ನು 15.2 ಓವರ್​ಗಳಲ್ಲಿ 156 ರನ್​ಗಳ ಗುರಿ ತಲುಪಿಸುವ ಮೂಲಕ ಟೀಮ್ ಇಂಡಿಯಾಗೆ 10 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟರು.

7 / 7
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ