AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

Yashasvi Jaiswal Records: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ದಾಖಲೆಗಳ ಪಟ್ಟಿಯಲ್ಲಿ ಸಿಕ್ಸ್​ಗಳ ವಿಶ್ವ ದಾಖಲೆ ಕೂಡ ಇರುವುದು ವಿಶೇಷ. ಸಿಕ್ಸ್ ಸಿಡಿಸಿ ಯಶಸ್ವಿ ನಿರ್ಮಿಸಿದ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

TV9 Web
| Edited By: |

Updated on: Feb 18, 2024 | 1:57 PM

Share
ರಾಜ್​ಕೋಟ್​ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ (Yashasvi Jaiswal) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ ಅಜೇಯ ದ್ವಿಶತಕ ಬಾರಿಸಿದ್ದಾರೆ. ಈ ದ್ವಿಶತಕದೊಂದಿಗೆ ಅವರ ಬ್ಯಾಟ್​ನಿಂದ ಮೂಡಿಬಂದ ಸಿಕ್ಸರ್​ಗಳ ಸಂಖ್ಯೆ ಬರೋಬ್ಬರಿ 12​.

1 / 8
ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನ ಇನಿಂಗ್ಸ್​ವೊಂದರಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಅಲ್ಲದೆ ಟೆಸ್ಟ್​ ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ ಒಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ.

2 / 8
ಟೆಸ್ಟ್ ಕ್ರಿಕೆಟ್​ನ ಇನಿಂಗ್ಸ್​ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ದಾಖಲೆ ಪಾಕಿಸ್ತಾನ್ ತಂಡದ ಮಾಜಿ ನಾಯಕ ವಾಸಿಂ ಅಕ್ರಮ್ ಹೆಸರಿನಲ್ಲಿತ್ತು. 1996 ರಲ್ಲಿ ಝಿಂಬಾಬ್ವೆ ವಿರುದ್ಧ ವಾಸಿಂ ಅಕ್ರಮ್ 12 ಸಿಕ್ಸ್​ಗಳೊಂದಿಗೆ 257 ರನ್ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

3 / 8
ಇದೀಗ ಇಂಗ್ಲೆಂಡ್ ವಿರುದ್ಧ ಸಿಕ್ಸ್​ಗಳ ಸುರಿಮಳೆಗೈದಿರುವ ಯಶಸ್ವಿ ಜೈಸ್ವಾಲ್ ಅಕ್ರಮ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಸರಿಗಟ್ಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಅತೀ ಕಿರಿಯ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು 22 ವರ್ಷದ ಜೈಸ್ವಾಲ್ ತಮ್ಮದಾಗಿಸಿಕೊಂಡಿದ್ದಾರೆ.

4 / 8
ಹಾಗೆಯೇ ಟೆಸ್ಟ್ ಕ್ರಿಕೆಟ್​ನ ಇನಿಂಗ್ಸ್​ವೊಂದರಲ್ಲಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ಸಿಕ್ಸ್ ಸಿಡಿಸಿದ ದಾಖಲೆ ಕೂಡ ಇದೀಗ ಜೈಸ್ವಾಲ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ನವಜೋತ್ ಸಿಂಗ್ ಸಿಧು ಹಾಗೂ ಮಯಾಂಕ್ ಅಗರ್ವಾಲ್ ಹೆಸರಿನಲ್ಲಿತ್ತು.

5 / 8
1994 ರಲ್ಲಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ನವಜೋತ್ ಸಿಂಗ್ ಸಿಧು 8 ಸಿಕ್ಸ್​ಗಳನ್ನು ಬಾರಿಸಿದ್ದರು. ಇದಾದ ಬಳಿಕ 2019 ರಲ್ಲಿ ಬಾಂಗ್ಲಾದೇಶ್ ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ 8 ಸಿಕ್ಸ್ ಸಿಡಿಸಿ ಈ ದಾಖಲೆಯನ್ನು ಸರಿಗಟ್ಟಿದ್ದರು.

6 / 8
ಇದೀಗ ಬರೋಬ್ಬರಿ 12 ಸಿಕ್ಸ್​ಗಳೊಂದಿಗೆ ಯಶಸ್ವಿ ಜೈಸ್ವಾಲ್ ಹಳೆಯ ದಾಖಲೆಗಳನ್ನು ಉಡೀಸ್ ಮಾಡಿದ್ದಾರೆ. ಅಷ್ಟೇ ಅಲ್ಲದೆ 147 ವರ್ಷಗಳ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸವನ್ನೇ ನಿರ್ಮಸಿದ್ದಾರೆ.

7 / 8
ಇನ್ನು ಈ ಪಂದ್ಯದಲ್ಲಿ 236 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಳ್ 12 ಸಿಕ್ಸ್​ ಹಾಗೂ 14 ಫೋರ್​ಗಳೊಂದಿಗೆ ಅಜೇಯ 214 ರನ್ ಬಾರಿಸಿದರು. ಈ ದ್ವಿಶತಕದ ನೆರವಿನಿಂದ ಟೀಮ್ ಇಂಡಿಯಾ ದ್ವಿತೀಯ ಇನಿಂಗ್ಸ್​ನಲ್ಲಿ 4 ವಿಕೆಟ್ ಕಳೆದುಕೊಂಡು 430 ರನ್​ಗಳಿಸಿ ಡಿಕ್ಲೇರ್ ಮಾಡಿಕೊಂಡಿದೆ. ಈ ಮೂಲಕ ಇಂಗ್ಲೆಂಡ್ ತಂಡಕ್ಕೆ ದ್ವಿತೀಯ ಇನಿಂಗ್ಸ್​ನಲ್ಲಿ 557 ರನ್​ಗಳ ಕಠಿಣ ಗುರಿ ನೀಡಿದೆ.

8 / 8
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ

ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ

ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು

ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!