Yashasvi Jaiswal: ಲಾರಾ ಅವರ ಅಪರೂಪದ ವಿಶ್ವ ದಾಖಲೆ ಸರಿಗಟ್ಟಿದ ಯಶಸ್ವಿ ಜೈಸ್ವಾಲ್

Edited By:

Updated on: Feb 03, 2024 | 2:24 PM

India vs England 2nd Test: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಪಂದ್ಯದಲ್ಲಿ ಭರ್ಜರಿ ಡಬಲ್ ಸೆಂಚುರಿ ಬಾರಿಸುವ ಮೂಲಕ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಅಲ್ಲದೆ ಈ ದಾಖಲೆಯೊಂದಿಗೆ ಲೆಜೆಂಡ್ ಬ್ರಿಯಾನ್ ಲಾರಾ ಹೆಸರಿನಲ್ಲಿದ್ದ ಅಪರೂಪದ ವಿಶ್ವ ದಾಖಲೆಯನ್ನೂ ಕೂಡ ಸರಿಗಟ್ಟಿದ್ದಾರೆ.

1 / 7
ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಆಕರ್ಷಕ ದ್ವಿಶತಕ ಬಾರಿಸಿದ್ದರು. ಯುವ ಆರಂಭಿಕ ಆಟಗಾರನ ಈ ದ್ವಿಶತಕದ ಹೊರತಾಗಿಯೂ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ 35 ರನ್​ ಕಲೆಹಾಕಿಲ್ಲ ಎಂಬುದು ವಿಶೇಷ.

ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಆಕರ್ಷಕ ದ್ವಿಶತಕ ಬಾರಿಸಿದ್ದರು. ಯುವ ಆರಂಭಿಕ ಆಟಗಾರನ ಈ ದ್ವಿಶತಕದ ಹೊರತಾಗಿಯೂ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ 35 ರನ್​ ಕಲೆಹಾಕಿಲ್ಲ ಎಂಬುದು ವಿಶೇಷ.

2 / 7

ಅಂದರೆ 396 ರನ್​ಗಳಲ್ಲಿ ಬಹುಪಾಲು ಸ್ಕೋರ್​ನ್ನು ಜೈಸ್ವಾಲ್ ಒಬ್ಬರೇ ಕಲೆಹಾಕಿದ್ದರು. ಇಲ್ಲಿ ಯಶಸ್ವಿ ಜೈಸ್ವಾಲ್ ಏಕಾಂಗಿಯಾಗಿ 209 ರನ್ ಕಲೆಹಾಕಿದರೆ, ಉಳಿದ ಬ್ಯಾಟರ್​ಗಳಿಂದ ಮೂಡಿಬಂದ ಒಟ್ಟು ಸ್ಕೋರ್ 185 ರನ್​ಗಳು. ಇದರಲ್ಲಿ ಅತ್ಯಧಿಕ ಸ್ಕೋರ್​ಗಳಿಸಿದ್ದು ಶುಭ್​ಮನ್ ಗಿಲ್ (34).

3 / 7

ಹೀಗೆ ಒಂದು ತಂಡದ ಒಟ್ಟು ಸ್ಕೋರ್​ನ ಮುಕ್ಕಾಲು ರನ್​ಗಳನ್ನು ಏಕಾಂಗಿಯಾಗಿ ಕಲೆಹಾಕಿ ಯಶಸ್ವಿ ಜೈಸ್ವಾಲ್ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಅದು ಕೂಡ ಬ್ರಿಯಾನ್ ಲಾರಾ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

4 / 7

ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಬ್ಯಾಟರ್​ರೊಬ್ಬರು ದ್ವಿಶತಕ ಬಾರಿಸಿ, ಉಳಿದ ಯಾವುದೇ ಬ್ಯಾಟ್ಸ್​ಮನ್​ 35 ರನ್​ ಕಲೆಹಾಕದೇ ಇರುವುದು ಇದು ಎರಡನೇ ಬಾರಿ. ಇದಕ್ಕೂ ಮುನ್ನ 2005 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಬ್ರಿಯಾನ್ ಲಾರ (226) ದ್ವಿಶತಕ ಬಾರಿಸಿ ಮಿಂಚಿದ್ದರು. ಅಂದು ಕೂಡ ವೆಸ್ಟ್ ಇಂಡೀಸ್ ತಂಡದ ಯಾವುದೇ ಬ್ಯಾಟರ್​ 35 ರನ್ ಕಲೆಹಾಕಲು ಸಾಧ್ಯವಾಗಿರಲಿಲ್ಲ.​

5 / 7

ಇದೀಗ 19 ವರ್ಷಗಳ ಬಳಿಕ ಯಶಸ್ವಿ ಜೈಸ್ವಾಲ್ ಅಪರೂಪದ ದಾಖಲೆಯನ್ನು ಪುನರಾವರ್ತಿಸಿದ್ದಾರೆ. ಅದು ಕೂಡ ಏಕಾಂಗಿಯಾಗಿ ತಂಡವನ್ನು ಮುನ್ನಡೆಸುವ ಮೂಲಕ ಎಂಬುದು ವಿಶೇಷ.

6 / 7

ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ ಭಾರತದ ಎಲ್ಲಾ ಬ್ಯಾಟರ್​ಗಳು ವಿಫಲರಾದರೂ ಯಶಸ್ವಿ ಜೈಸ್ವಾಲ್ 209 ರನ್​ ಬಾರಿಸಿದ್ದಾರೆ. ಈ ಮೂಲಕ 2005 ರಲ್ಲಿ ಲಾರಾ ಬರೆದ ವಿಶೇಷ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಸರಿಗಟ್ಟಿದ್ದಾರೆ.

7 / 7

ಇಂಗ್ಲೆಂಡ್ ವಿರುದ್ಧದ ಈ ಪಂದ್ಯದಲ್ಲಿ 290 ಎಸೆತಗಳನ್ನು ಎದುರಿಸಿದ ಯಶಸ್ವಿ ಜೈಸ್ವಾಲ್ 7 ಭರ್ಜರಿ ಸಿಕ್ಸ್ ಹಾಗೂ 19 ಫೋರ್​ಗಳೊಂದಿಗೆ 209 ರನ್ ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 396 ರನ್ ಕಲೆಹಾಕಿದೆ. ಇದೀಗ ಪ್ರಥಮ ಇನಿಂಗ್ಸ್ ಬ್ಯಾಟಿಂಗ್ ಮಾಡುತ್ತಿರುವ ಇಂಗ್ಲೆಂಡ್ ತಂಡವು 20 ಓವರ್​ಗಳ ಮುಕ್ತಾಯದ ವೇಳೆಗೆ 1 ವಿಕೆಟ್​ ಕಳೆದುಕೊಂಡು 105 ರನ್ ಕಲೆಹಾಕಿದೆ.

Loading...
Unable to load recommendations.
Follow Us