Yashasvi Jaiswal: ವಿರಾಟ್ ಕೊಹ್ಲಿಯ ವಿಶೇಷ ದಾಖಲೆಯನ್ನು ಸರಿಗಟ್ಟಿದ ಯಶಸ್ವಿ ಜೈಸ್ವಾಲ್

| Updated By: ಝಾಹಿರ್ ಯೂಸುಫ್

Updated on: Feb 26, 2024 | 11:07 AM

Yashasvi Jaiswal - Virat Kohli: 2017 ರಲ್ಲಿ ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ನಿರ್ಮಿಸಿದ್ದ ವಿಶೇಷ ದಾಖಲೆಯನ್ನು ಟೀಮ್ ಇಂಡಿಯಾದ ಯುವ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಸರಿಗಟ್ಟಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದ ಮೂಲಕ ಹೊಸ ಇತಿಹಾಸ ನಿರ್ಮಿಸುವ ಅವಕಾಶ ಜೈಸ್ವಾಲ್ ಮುಂದಿದೆ.

1 / 6
ರಾಂಚಿಯಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಒಟ್ಟು 110 ರನ್ ಬಾರಿಸಿದ್ದಾರೆ. ಮೊದಲ ಇನಿಂಗ್ಸ್​ನಲ್ಲಿ 73 ರನ್​ ಸಿಡಿಸಿದ್ದ ಜೈಸ್ವಾಲ್, ದ್ವಿತೀಯ ಇನಿಂಗ್ಸ್​ನಲ್ಲಿ 37 ರನ್​ಗಳಿಸಿ ಔಟಾದರು. ಈ ರನ್​ಗಳೊಂದಿಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಸರಿಗಟ್ಟಿದ್ದಾರೆ.

2 / 6
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2017 ರಲ್ಲಿ 8 ಇನಿಂಗ್ಸ್​ಗಳಲ್ಲಿ 655 ರನ್ ಬಾರಿಸಿ ಈ ದಾಖಲೆ ನಿರ್ಮಿಸಿದ್ದಾರೆ. ಇದೀಗ ಈ ದಾಖಲೆಯನ್ನು ಜೈಸ್ವಾಲ್ ಸರಿಗಟ್ಟಿರುವುದು ವಿಶೇಷ.

3 / 6
ಪ್ರಸ್ತುತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 8 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಯಶಸ್ವಿ ಜೈಸ್ವಾಲ್ ಒಟ್ಟು 655 ರನ್ ಕಲೆಹಾಕಿದ್ದಾರೆ. ಈ ಮೂಲಕ 7 ವರ್ಷಗಳ ಹಿಂದೆ ವಿರಾಟ್ ಕೊಹ್ಲಿ ನಿರ್ಮಿಸಿದ್ದ ವಿಶೇಷ ದಾಖಲೆಯನ್ನು ಸರಿಗಟ್ಟುವಲ್ಲಿ ಜೈಸ್ವಾಲ್ ಯಶಸ್ವಿಯಾಗಿದ್ದಾರೆ.

4 / 6
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯ ಮಾರ್ಚ್ 7 ರಿಂದ ಶುರುವಾಗಲಿದೆ. ಈ ಪಂದ್ಯದಲ್ಲಿ 1 ರನ್​ ಕಲೆಹಾಕಿದರೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ 22 ವರ್ಷದ ಯಶಸ್ವಿ ಜೈಸ್ವಾಲ್ ಪಾಲಾಗಲಿದೆ.

5 / 6
ಅಂದಹಾಗೆ ಭಾರತದ ಪರ ಟೆಸ್ಟ್ ಸರಣಿಯೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 8 ಇನಿಂಗ್ಸ್​ಗಳಲ್ಲಿ 774 ರನ್ ಬಾರಿಸುವ ಮೂಲಕ ಗವಾಸ್ಕರ್ ಈ ದಾಖಲೆ ಬರೆದಿದ್ದಾರೆ.

6 / 6
ಇದೀಗ ಸುನಿಲ್ ಗವಾಸ್ಕರ್ ಹೆಸರಿನಲ್ಲಿರುವ ಈ ಸರ್ವಶ್ರೇಷ್ಠ ದಾಖಲೆ ಮುರಿಯಲು ಯಶಸ್ವಿ ಜೈಸ್ವಾಲ್​​ಗೆ 119 ರನ್​ಗಳ ಅವಶ್ಯಕತೆಯಿದೆ. ಅದರಂತೆ ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದ ಮೂಲಕ ಯಶಸ್ವಿ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಲಿದ್ದಾರಾ ಕಾದು ನೋಡಬೇಕಿದೆ.

Published On - 11:03 am, Mon, 26 February 24