ರಾಜ್ಕೋಟ್ನಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಯಶಸ್ವಿ ಜೈಸ್ವಾಲ್ (Yashasvi Jaiswal) ರಾಜನಾಗಿ ಮೆರೆದಿದ್ದಾರೆ. ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 3ನೇ ಟೆಸ್ಟ್ನಲ್ಲಿ ಯಶಸ್ವಿ ಡಬಲ್ ಸೆಂಚುರಿ ಸಿಡಿಸುವ ಮೂಲಕ ಜೈಸ್ವಾಲ್ ಅಪರೂಪದ ದಾಖಲೆಯನ್ನೂ ಕೂಡ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿನಲ್ಲಿದ್ದ ಬಹು ಅಪರೂಪದ ರೆಕಾರ್ಡ್ ಅನ್ನು ಸರಿಗಟ್ಟುವ ಮೂಲಕ ಎಂಬುದೇ ವಿಶೇಷ.