AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 10 ರನ್​… ಯಶಸ್ವಿ ಜೈಸ್ವಾಲ್ ಪಾಲಿಗೆ ದ್ರಾವಿಡ್ ದಾಖಲೆ ಜಸ್ಟ್​ ಮಿಸ್

Yashasvi Jaiswal: ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 107 ಎಸೆತಗಳನ್ನು ಎದುರಿಸಿ 13 ಫೋರ್​ಗಳೊಂದಿಗೆ 87 ರನ್​ ಕಲೆಹಾಕಿದ್ದರು. ಆದರೆ ಶತಕದಂಚಿನಲ್ಲಿ ಎಡವಿದ ಯುವ ದಾಂಡಿಗ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿರುವ ವಿಶೇಷ ದಾಖಲೆಯನ್ನು ಮುರಿಯುವ ಅವಕಾಶವನ್ನು ಕೈ ತಪ್ಪಿಸಿಕೊಂಡರು.

ಝಾಹಿರ್ ಯೂಸುಫ್
|

Updated on: Jul 03, 2025 | 2:54 PM

Share
ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ (Yashasvi Jaiswal) ಅಬ್ಬರಿಸಿದ್ದಾರೆ. ಹೆಡಿಂಗ್ಲೆ ಟೆಸ್ಟ್​ನಲ್ಲಿ ಶತಕ ಸಿಡಿಸಿ ಮಿಂಚಿದ್ದ ಜೈಸ್ವಾಲ್ ಎಡ್ಜ್​ಬಾಸ್ಟನ್​ನಲ್ಲಿ 87 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಕೇವಲ 13 ರನ್​ಗಳಿಂದ ಮತ್ತೊಂದು ಸೆಂಚುರಿ ಸಿಡಿಸುವ ಅವಕಾಶವನ್ನು ತಪ್ಪಿಸಿಕೊಂಡರು.

1 / 5
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಕಲೆಹಾಕಿದ ದಾಖಲೆ ಮುರಿಯುವ ಅವಕಾಶವನ್ನು ಸಹ ಕೈ ಚೆಲ್ಲಿಕೊಂಡರು. ಅಂದರೆ ಇಂಗ್ಲೆಂಡ್ ವಿರುದ್ಧದ ಮೊದಲ ಇನಿಂಗ್ಸ್​ನಲ್ಲಿ 97 ರನ್​ಗಳಿಸಿದ್ದರೆ, ಭಾರತದ ಪರ ಅತೀ ಕಡಿಮೆ ಇನಿಂಗ್ಸ್​ಗಳಲ್ಲಿ 2000 ರನ್ ಪೂರೈಸಿದ ಬ್ಯಾಟರ್ ಎಂಬ ದಾಖಲೆ ಯಶಸ್ವಿ ಪಾಲಾಗುತ್ತಿತ್ತು.

2 / 5
ಸದ್ಯ ಈ ದಾಖಲೆ ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. ಟೀಮ್ ಇಂಡಿಯಾ ಪರ ಆಡಿದ ಮೊದಲ 40 ಇನಿಂಗ್ಸ್​ಗಳ ಮೂಲಕ ದ್ರಾವಿಡ್ 2000 ರನ್ ಕಲೆಹಾಕಿದ್ದರು. ಈ ಮೂಲಕ ಭಾರತದ ಪರ ಟೆಸ್ಟ್​ನಲ್ಲಿ ಅತೀ ವೇಗವಾಗಿ 2 ಸಾವಿರ ರನ್ ಕಲೆಹಾಕಿದ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

3 / 5
ಈ ದಾಖಲೆಯನ್ನು ಮುರಿಯಲು ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 97 ರನ್​ ಕಲೆಹಾಕಬೇಕಿತ್ತು. ಆದರೆ 87 ರನ್​ಗಳಿಸಿ ಔಟಾಗುವ ಮೂಲಕ ಜೈಸ್ವಾಲ್ ಅಗ್ರಸ್ಥಾನಕ್ಕೇರುವ ಅವಕಾಶವನ್ನು ತಪ್ಪಿಸಿಕೊಂಡಿದ್ದಾರೆ. ಇದಾಗ್ಯೂ ಮುಂದಿನ ಇನಿಂಗ್ಸ್​ನ ಮೂಲಕ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸರಿಗಟ್ಟಬಹುದು.

4 / 5
ಟೀಮ್ ಇಂಡಿಯಾ ಪರ ಈವರೆಗೆ 21 ಟೆಸ್ಟ್ ಪಂದ್ಯಗಳನ್ನಾಡಿರುವ ಯಶಸ್ವಿ ಜೈಸ್ವಾಲ್ 39 ಇನಿಂಗ್ಸ್​ಗಳ ಮೂಲಕ 1990 ರನ್ ಕಲೆಹಾಕಿದ್ದಾರೆ. ಮುಂದಿನ ಇನಿಂಗ್ಸ್​ನಲ್ಲಿ 10 ರನ್​ ಗಳಿಸಿದರೆ, ರಾಹುಲ್ ದ್ರಾವಿಡ್ ಹೆಸರಿನಲ್ಲಿರುವ ಭಾರತದ ಪರ ಟೆಸ್ಟ್ ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 2000 ರನ್ ಗಳಿಸಿದ ದಾಖಲೆಯನ್ನು ಸರಿಗಟ್ಟಬಹುದು.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!

ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ

ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ

ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್

ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್

ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?

ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ

ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!

ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್