AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವೇಗ ಅತಿವೇಗ.. ಗಂಗೂಲಿ, ದ್ರಾವಿಡ್, ಕೊಹ್ಲಿಯನ್ನು ಮೀರಿಸಿದ ಜೈಸ್ವಾಲ್

Yashasvi Jaiswal: ದೆಹಲಿ ಟೆಸ್ಟ್‌ನಲ್ಲಿ ಯಶಸ್ವಿ ಜೈಸ್ವಾಲ್ ದ್ವಿಶತಕದ ಸನಿಹದಲ್ಲಿದ್ದಾರೆ, ಅಜೇಯ 173 ರನ್ ಗಳಿಸಿದ್ದಾರೆ. ಈ ಇನ್ನಿಂಗ್ಸ್‌ನೊಂದಿಗೆ ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್‌ರಂತಹ ದಂತಕಥೆಗಳನ್ನು ಹಿಂದಿಕ್ಕಿದ್ದಾರೆ. ಕೇವಲ 71 ಇನ್ನಿಂಗ್ಸ್‌ಗಳಲ್ಲಿ 3,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರೈಸಿ, ಸುನಿಲ್ ಗವಾಸ್ಕರ್ ನಂತರ ವೇಗದ ಸಾಧನೆ ಮಾಡಿದ್ದಾರೆ.

ಪೃಥ್ವಿಶಂಕರ
|

Updated on: Oct 10, 2025 | 10:36 PM

Share
ದೆಹಲಿಯಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ ಯಶಸ್ವಿ ಜೈಸ್ವಾಲ್ ದ್ವಿಶತಕದತ್ತ ದಾಪುಗಾಲಿಟ್ಟಿದ್ದಾರೆ. ಮೊದಲ ದಿನದಾಟದಂತ್ಯಕ್ಕೆ ಅಜೇಯ 173 ರನ್ ಬಾರಿಸಿರುವ ಜೈಸ್ವಾಲ್ ಈ ಇನ್ನಿಂಗ್ಸ್‌ನೊಂದಿಗೆ ವಿರಾಟ್ ಕೊಹ್ಲಿ ಮತ್ತು ರಾಹುಲ್ ದ್ರಾವಿಡ್‌ರಂತಹ ದಂತಕಥೆಗಳನ್ನು ಹಿಂದಿಕ್ಕಿದರು.

1 / 5
ಈ ಶತಕದ ಇನ್ನಿಂಗ್ಸ್ ಮೂಲಕ ಯಶಸ್ವಿ ಜೈಸ್ವಾಲ್ ಭಾರತದ ಪರ 3,000 ಅಂತರರಾಷ್ಟ್ರೀಯ ರನ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಕೇವಲ 71 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿರುವ ಜೈಸ್ವಾಲ್, ಸುನಿಲ್ ಗವಾಸ್ಕರ್ ನಂತರ 3,000 ರನ್‌ಗಳನ್ನು ಅತಿ ವೇಗವಾಗಿ ಪೂರೈಸಿದ ಭಾರತೀಯ ಆಟಗಾರ ಎನಿಸಿಕೊಂಡಿದ್ದಾರೆ.

2 / 5
ಈ ಮೂಲಕ ಜೈಸ್ವಾಲ್, ಸೌರವ್ ಗಂಗೂಲಿ, ಶುಭ್‌ಮನ್ ಗಿಲ್, ರಾಹುಲ್ ದ್ರಾವಿಡ್ ಮತ್ತು ವಿರಾಟ್ ಕೊಹ್ಲಿಯಂತಹ ಲೆಜೆಂಡರಿ ಆಟಗಾರರನ್ನು ಹಿಂದಿಕ್ಕಿದ್ದಾರೆ. ಶುಭ್‌ಮನ್ ಗಿಲ್ 3,000 ರನ್‌ಗಳನ್ನು ತಲುಪಲು 77 ಇನ್ನಿಂಗ್ಸ್‌ಗಳನ್ನು ತೆಗೆದುಕೊಂಡರೆ, ಗಂಗೂಲಿ 74, ದ್ರಾವಿಡ್ 78 ಮತ್ತು ವಿರಾಟ್ ಕೊಹ್ಲಿ 80 ಇನ್ನಿಂಗ್ಸ್‌ಗಳಲ್ಲಿ 3,000 ರನ್‌ ಪೂರೈಸಿದ್ದರು.

3 / 5
ಹಾಗೆಯೇ ಈ ದಶಕದಲ್ಲಿ ಭಾರತ ಪರ ಅತಿ ಹೆಚ್ಚು ಐವತ್ತು ಪ್ಲಸ್ ಸ್ಕೋರ್‌ಗಳನ್ನು ಗಳಿಸಿದ ದಾಖಲೆಯೂ ಯಶಸ್ವಿ ಜೈಸ್ವಾಲ್ ಅವರ ಹೆಸರಿನಲ್ಲಿದೆ. ಅವರು 48 ಇನ್ನಿಂಗ್ಸ್‌ಗಳಲ್ಲಿ 19 ಬಾರಿ ಈ ದಾಖಲೆಯನ್ನು ಮೀರಿಸಿದ್ದಾರೆ. ರೋಹಿತ್ ಶರ್ಮಾ 14 ಬಾರಿ ಐವತ್ತು ಪ್ಲಸ್ ಸ್ಕೋರ್‌ಗಳನ್ನು ಗಳಿಸಿದ್ದಾರೆ. ಮತ್ತೊಂದೆಡೆ, ಶುಭಮನ್ ಗಿಲ್ ಈ ದಾಖಲೆಯನ್ನು ಕೇವಲ ಆರು ಬಾರಿ ಮಾಡಿದ್ದಾರೆ. ಸ್ಪಷ್ಟವಾಗಿ, ಯಶಸ್ವಿ ಜೈಸ್ವಾಲ್ ಪ್ರಸ್ತುತ ನಾಯಕ ಶುಭ್​ಮನ್ ಗಿಲ್‌ಗಿಂತ ಮೂರು ಪಟ್ಟು ಮುಂದಿದ್ದಾರೆ.

4 / 5
ಇದು ಮಾತ್ರವಲ್ಲದೆ 145 ಎಸೆತಗಳಲ್ಲಿ ತಮ್ಮ ಏಳನೇ ಟೆಸ್ಟ್ ಶತಕವನ್ನು ಪೂರ್ಣಗೊಳಿಸಿದ ಜೈಸ್ವಾಲ್ ಕೇವಲ 48 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಜೈಸ್ವಾಲ್ ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ ಎರಡು ದ್ವಿಶತಕಗಳನ್ನು ಗಳಿಸಿದ್ದು, ಇದೀಗ ಮೂರನೇ ದ್ವಿಶತಕವನ್ನು ಬಾರಿಸುವ ಹೊಸ್ತಿಲಿನಲಿದ್ದಾರೆ. ಇದೀಗ ಎರಡನೇ ದಿನದಾಟದಲ್ಲಿ ಜೈಸ್ವಾಲ್ ತಮ್ಮ ಇನ್ನಿಂಗ್ಸ್ ಅನ್ನು ಎಲ್ಲಿಯವರೆಗೆ ಕೊಂಡೊಯ್ಯುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ