Yashasvi Jaiswal: ರಾಹುಲ್ ದಾಖಲೆ ಉಡೀಸ್: ಯಶಸ್ವಿ ಜೈಸ್ವಾಲ್ ಸ್ಪೋಟಕ ಅರ್ಧಶತಕ
TV9 Web | Updated By: ಝಾಹಿರ್ ಯೂಸುಫ್
Updated on:
May 11, 2023 | 10:28 PM
Fastest Fifty in Ipl History: 2011 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ಸಿಬಿ ಮೊದಲ ಓವರ್ನಲ್ಲಿ 27 ರನ್ ಬಾರಿಸಿತ್ತು. ಆದರೆ ಆ ಓವರ್ನಲ್ಲಿ 7 ಎಕ್ಸ್ಟ್ರಾ ರನ್ಗಳಿದ್ದವು.
1 / 7
IPL 2023: ಐಪಿಎಲ್ ಇತಿಹಾಸದಲ್ಲೇ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆ ಇದೀಗ ರಾಜಸ್ಥಾನ್ ರಾಯಲ್ಸ್ ತಂಡದ ಯಶಸ್ವಿ ಜೈಸ್ವಾಲ್ ಪಾಲಾಗಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಜೈಸ್ವಾಲ್ ಹೊಸ ಇತಿಹಾಸ ನಿರ್ಮಿಸಿದರು.
2 / 7
ಇದಕ್ಕೂ ಮುನ್ನ ಈ ದಾಖಲೆ ಕೆಎಲ್ ರಾಹುಲ್ ಹೆಸರಿನಲ್ಲಿತ್ತು. 2018 ರಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದ ಕೆಎಲ್ ರಾಹುಲ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು.
3 / 7
ಇದಾದ ಬಳಿಕ 2022 ರಲ್ಲಿ ಕೆಕೆಆರ್ ಪರ ಕಣಕ್ಕಿಳಿದಿದ್ದ ಪ್ಯಾಟ್ ಕಮಿನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಕೇವಲ 14 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ರಾಹುಲ್ ಅವರ ದಾಖಲೆ ಸರಿಗಟ್ಟಿದ್ದರು.
4 / 7
ಇದೀಗ ಕೇವಲ 13 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 7 ಫೋರ್ನೊಂದಿಗೆ 50 ರನ್ ಬಾರಿಸಿ ಕೆಎಲ್ ರಾಹುಲ್ ಹಾಗೂ ಪ್ಯಾಟ್ ಕಮಿನ್ಸ್ ಹೆಸರಿನಲ್ಲಿದ್ದ ದಾಖಲೆಯನ್ನು ಯಶಸ್ವಿ ಜೈಸ್ವಾಲ್ ಅಳಿಸಿ ಹಾಕಿದ್ದಾರೆ.
5 / 7
ಇನ್ನು ನಿತೀಶ್ ರಾಣಾ ಎಸೆದ ಈ ಪಂದ್ಯದ ಮೊದಲ ಓವರ್ನಲ್ಲಿ 20 ವರ್ಷದ ಯಶಸ್ವಿ ಜೈಸ್ವಾಲ್ 6, 6, 4, 4, 2, 4 ಫೋರ್ ಬಾರಿಸಿದ್ದರು. ಈ ಮೂಲಕ ಮೊದಲ ಓವರ್ನಲ್ಲೇ ಅತ್ಯಧಿಕ ರನ್ ಕಲೆಹಾಕಿದ ಅತ್ಯಂತ ಕಿರಿಯ ಬ್ಯಾಟ್ಸ್ಮನ್ ಎನಿಸಿಕೊಂಡರು.
6 / 7
ಹಾಗೆಯೇ ಮೊದಲ ಓವರ್ನಲ್ಲಿ ಅತೀ ಹೆಚ್ಚು ಬಾರಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಇದಕ್ಕೂ ಮುನ್ನ 2011 ರಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಆರ್ಸಿಬಿ ಮೊದಲ ಓವರ್ನಲ್ಲಿ 27 ರನ್ ಬಾರಿಸಿತ್ತು. ಆದರೆ ಆ ಓವರ್ನಲ್ಲಿ 7 ಎಕ್ಸ್ಟ್ರಾ ರನ್ಗಳಿದ್ದವು.
7 / 7
ಆದರೀಗ ಯಶಸ್ವಿ ಜೈಸ್ವಾಲ್ ಮೊದಲ ಓವರ್ನಲ್ಲಿ 2 ಭರ್ಜರಿ ಸಿಕ್ಸ್, ಮೂರು ಫೋರ್ ಹಾಗೂ 2 ರನ್ಗಳೊಂದಿಗೆ 26 ರನ್ ಬಾರಿಸಿ ಐಪಿಎಲ್ ಇತಿಹಾಸದಲ್ಲೇ ಪ್ರಥಮ ಓವರ್ನಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟ್ಸ್ಮನ್ ಎಂಬ ದಾಖಲೆ ನಿರ್ಮಿಸಿದ್ದಾರೆ.