AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಯಶಸ್ವಿ ಜೈಸ್ವಾಲ್ ಆರೋಗ್ಯ ಹೇಗಿದೆ? ಹೊರಬಿತ್ತು ಬಿಗ್​ ಅಪ್​ಡೇಟ್

Yashasvi Jaiswal health update: ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿ ವೇಳೆ ಅನಾರೋಗ್ಯಕ್ಕೀಡಾಗಿದ್ದ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತೀವ್ರ ಗ್ಯಾಸ್ಟ್ರೋಎಂಟರೈಟಿಸ್‌ನಿಂದ ಬಳಲಿದ್ದ ಜೈಸ್ವಾಲ್, ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ವೈದ್ಯರ ಸಲಹೆಯಂತೆ ವಿಶ್ರಾಂತಿ ಪಡೆಯುತ್ತಿದ್ದು, ಶೀಘ್ರದಲ್ಲೇ ಮೈದಾನಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. ಸದ್ಯಕ್ಕೆ ಟೆಸ್ಟ್ ಸರಣಿಗಳಿಲ್ಲದ ಕಾರಣ, ಐಪಿಎಲ್ ಮೂಲಕ ಅವರು ಕ್ರಿಕೆಟ್‌ಗೆ ಕಮ್‌ಬ್ಯಾಕ್ ಮಾಡುವ ನಿರೀಕ್ಷೆಯಿದೆ.

ಪೃಥ್ವಿಶಂಕರ
|

Updated on: Dec 19, 2025 | 6:07 PM

Share
ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯ ವೇಳೆ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಯುವ ಆರಂಭಿಕ ಯಶಸ್ವಿ ಜೈಸ್ವಾಲ್ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ. ತಾನು ಚೆನ್ನಾಗಿ ಚೇತರಿಸಿಕೊಳ್ಳುತ್ತಿರುವುದಾಗಿ ಹೇಳಿರುವ ಜೈಸ್ವಾಲ್ ಶೀಘ್ರದಲ್ಲೇ ಮೈದಾನಕ್ಕೆ ಮರಳುವ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.

1 / 5
ವಾಸ್ತವವಾಗಿ ಪುಣೆಯಲ್ಲಿ ನಡೆಯುತ್ತಿದ್ದ ಹರಿಯಾಣ ವಿರುದ್ಧದ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯದ ವೇಳೆ ಜೈಸ್ವಾಲ್ ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾಗಿದ್ದರು. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರ ತಪಾಸಣೆಯ ಬಳಿಕ ಜೈಸ್ವಾಲ್ ಅವರಿಗೆ ತೀವ್ರವಾದ ಗ್ಯಾಸ್ಟ್ರೋಎಂಟರೈಟಿಸ್ ಇರುವುದು ಪತ್ತೆಯಾಯಿತು.

2 / 5
ಹೀಗಾಗಿ ವೈದ್ಯರು ಯಶಸ್ವಿ ಜೈಸ್ವಾಲ್ ಅವರಿಗೆ ಸಂಪೂರ್ಣ ಫಿಟ್ ಆಗುವವರೆಗೆ ಕ್ರಿಕೆಟ್ ಆಡದಂತೆ ಮತ್ತು ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಇದೀಗ ತಮ್ಮ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಿದ ಯಶಸ್ವಿ ಜೈಸ್ವಾಲ್, ಆಸ್ಪತ್ರೆಯಲ್ಲಿ ತಮಗೆ ದೊರೆತ ಸೌಲಭ್ಯಗಳು ಮತ್ತು ಚಿಕಿತ್ಸೆಯನ್ನು ಶ್ಲಾಘಿಸಿದ್ದಾರೆ. ವೈದ್ಯಕೀಯ ಸಿಬ್ಬಂದಿ ಮತ್ತು ತಮಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

3 / 5
ಇನ್ನು ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಜೈಸ್ವಾಲ್ ಆಡಿದ ಮೂರು ಪಂದ್ಯಗಳಲ್ಲಿ 48.33 ಸರಾಸರಿ ಮತ್ತು 168.6 ಸ್ಟ್ರೈಕ್ ರೇಟ್‌ನಲ್ಲಿ 145 ರನ್ ಗಳಿಸಿದ್ದಾರೆ. ಇದಕ್ಕೂ ಮುನ್ನ, ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅವರು ಮೂರು ಪಂದ್ಯಗಳಲ್ಲಿ 78 ರ ಸರಾಸರಿಯಲ್ಲಿ 156 ರನ್ ಗಳಿಸಿದ್ದರು. ಈ ಅವಧಿಯಲ್ಲಿ ಅವರು ತಮ್ಮ ಮೊದಲ ಏಕದಿನ ಶತಕವನ್ನೂ ಬಾರಿಸಿದ್ದರು.

4 / 5
ಈ ವರ್ಷ ಟೀಂ ಇಂಡಿಯಾ ಯಾವುದೇ ಟೆಸ್ಟ್ ಸರಣಿಯನ್ನು ಆಡದ ಕಾರಣ ಯಶಸ್ವಿ ಜೈಸ್ವಾಲ್ ಚೇತರಿಕೆಗೆ ಸಾಕಷ್ಟು ಸಮಯ ಸಿಗಲಿದೆ. ಭಾರತ ತಂಡ ಮುಂದಿನ ವರ್ಷ ಆಗಸ್ಟ್​ನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಆ ಸರಣಿಯೊಂದಿಗೆ ಜೈಸ್ವಾಲ್ ಭಾರತ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ ಅದಕ್ಕೂ ಮುನ್ನ ಅವರು ಐಪಿಎಲ್​ನಲ್ಲಿ ಮಿಂಚಲಿದ್ದಾರೆ.

5 / 5
Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?

ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?

KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!

ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ

ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ

‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ

ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?

ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ

ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ