AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yashasvi Jaiswal: ಟೆಸ್ಟ್​​ನಲ್ಲಿ ಹೊಸ ಇತಿಹಾಸ ಬರೆದ ಯಶಸ್ವಿ ಜೈಸ್ವಾಲ್

Yashasvi Jaiswal Records: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಮೂಲಕ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಭಾರತೀಯ ಹಾಗೂ ವಿಶ್ವದ 2ನೇ ಬ್ಯಾಟ್ಸ್​ಮನ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

TV9 Web
| Edited By: |

Updated on: Feb 27, 2024 | 12:22 PM

Share
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ (Yashasvi Jaiswal) ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಸರಣಿಯ 4 ಪಂದ್ಯಗಳಲ್ಲಿ ಯಶಸ್ವಿ ಒಟ್ಟು 655 ರನ್​ ಬಾರಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತದ ಎಡಗೈ ಬ್ಯಾಟರ್ ಎನಿಸಿಕೊಂಡಿದ್ದಾರೆ.

1 / 7
ಹಾಗೆಯೇ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ಯಶಸ್ವಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು.

2 / 7
ಲಿಟಲ್ ಮಾಸ್ಟರ್ ಖ್ಯಾತಿಯ ಸುನಿಲ್ ಗವಾಸ್ಕರ್ ಮೊದಲ 8 ಟೆಸ್ಟ್ ಪಂದ್ಯಗಳ 16 ಇನಿಂಗ್ಸ್​ಗಳಲ್ಲಿ ಒಟ್ಟು 938 ರನ್ ಕಲೆಹಾಕಿದ್ದರು. ಈ ಮೂಲಕ ಭಾರತದ ಪರ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.

3 / 7
ಇದೀಗ ಮೊದಲ 8 ಟೆಸ್ಟ್​ ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಬರೋಬ್ಬರಿ 971 ರನ್ ಕಲೆಹಾಕಿದ್ದಾರೆ. ಈ ವೇಳೆ 2 ದ್ವಿಶತಕ, 3 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

4 / 7
ಹಾಗೆಯೇ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೇಷ್ಠ ಬ್ಯಾಟರ್ ಸರ್ ಡಾನ್ ಬ್ರಾಡ್​ಮ್ಯಾನ್.

5 / 7
ಆಸ್ಟ್ರೇಲಿಯಾದ ಡಾನ್ ಬ್ರಾಡ್​ಮ್ಯಾನ್ ಮೊದಲ 8 ಟೆಸ್ಟ್ ಪಂದ್ಯಗಳ 14 ಇನಿಂಗ್ಸ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 1210 ರನ್​ಗಳು. ಇದುವರೆಗೆ ಈ ವಿಶ್ವ ದಾಖಲೆಯನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಿಲ್ಲ.

6 / 7
ಇದೀಗ 8 ಟೆಸ್ಟ್ ಪಂದ್ಯಗಳಲ್ಲಿ 15 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ 971 ರನ್ ಕಲೆಹಾಕಿದ್ದಾರೆ. ಈ ಮೂಲಕ ಡಾನ್ ಬ್ರಾಡ್​​ಮ್ಯಾನ್ ನಂತರದ ಸ್ಥಾನವನ್ನು ಯಶಸ್ವಿ ಜೈಸ್ವಾಲ್ ಅಲಂಕರಿಸಿರುವುದು ವಿಶೇಷ.

7 / 7
Web contact
Web contact

TV9 Kannada

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!