Yashasvi Jaiswal: ಟೆಸ್ಟ್ನಲ್ಲಿ ಹೊಸ ಇತಿಹಾಸ ಬರೆದ ಯಶಸ್ವಿ ಜೈಸ್ವಾಲ್
TV9 Web | Updated By: ಝಾಹಿರ್ ಯೂಸುಫ್
Updated on:
Feb 27, 2024 | 12:22 PM
Yashasvi Jaiswal Records: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಮೂಲಕ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಹಾಗೂ ವಿಶ್ವದ 2ನೇ ಬ್ಯಾಟ್ಸ್ಮನ್ ಎಂಬ ವಿಶ್ವ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.
1 / 7
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿರುವ ಯಶಸ್ವಿ ಜೈಸ್ವಾಲ್ (Yashasvi Jaiswal) ಇದೀಗ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಸರಣಿಯ 4 ಪಂದ್ಯಗಳಲ್ಲಿ ಯಶಸ್ವಿ ಒಟ್ಟು 655 ರನ್ ಬಾರಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯೊಂದರಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತದ ಎಡಗೈ ಬ್ಯಾಟರ್ ಎನಿಸಿಕೊಂಡಿದ್ದಾರೆ.
2 / 7
ಹಾಗೆಯೇ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ಯಶಸ್ವಿ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಸುನಿಲ್ ಗವಾಸ್ಕರ್ ಹೆಸರಿನಲ್ಲಿತ್ತು.
3 / 7
ಲಿಟಲ್ ಮಾಸ್ಟರ್ ಖ್ಯಾತಿಯ ಸುನಿಲ್ ಗವಾಸ್ಕರ್ ಮೊದಲ 8 ಟೆಸ್ಟ್ ಪಂದ್ಯಗಳ 16 ಇನಿಂಗ್ಸ್ಗಳಲ್ಲಿ ಒಟ್ಟು 938 ರನ್ ಕಲೆಹಾಕಿದ್ದರು. ಈ ಮೂಲಕ ಭಾರತದ ಪರ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು.
4 / 7
ಇದೀಗ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಯಶಸ್ವಿ ಜೈಸ್ವಾಲ್ ಬರೋಬ್ಬರಿ 971 ರನ್ ಕಲೆಹಾಕಿದ್ದಾರೆ. ಈ ವೇಳೆ 2 ದ್ವಿಶತಕ, 3 ಶತಕ ಹಾಗೂ 3 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಪರ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಭಾರತೀಯ ಬ್ಯಾಟ್ಸ್ಮನ್ ಎನಿಸಿಕೊಂಡಿದ್ದಾರೆ.
5 / 7
ಹಾಗೆಯೇ ಮೊದಲ 8 ಟೆಸ್ಟ್ ಪಂದ್ಯಗಳಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಶ್ರೇಷ್ಠ ಬ್ಯಾಟರ್ ಸರ್ ಡಾನ್ ಬ್ರಾಡ್ಮ್ಯಾನ್.
6 / 7
ಆಸ್ಟ್ರೇಲಿಯಾದ ಡಾನ್ ಬ್ರಾಡ್ಮ್ಯಾನ್ ಮೊದಲ 8 ಟೆಸ್ಟ್ ಪಂದ್ಯಗಳ 14 ಇನಿಂಗ್ಸ್ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 1210 ರನ್ಗಳು. ಇದುವರೆಗೆ ಈ ವಿಶ್ವ ದಾಖಲೆಯನ್ನು ಮುರಿಯಲು ಯಾರಿಂದಲೂ ಸಾಧ್ಯವಾಗಿಲ್ಲ.
7 / 7
ಇದೀಗ 8 ಟೆಸ್ಟ್ ಪಂದ್ಯಗಳಲ್ಲಿ 15 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ 971 ರನ್ ಕಲೆಹಾಕಿದ್ದಾರೆ. ಈ ಮೂಲಕ ಡಾನ್ ಬ್ರಾಡ್ಮ್ಯಾನ್ ನಂತರದ ಸ್ಥಾನವನ್ನು ಯಶಸ್ವಿ ಜೈಸ್ವಾಲ್ ಅಲಂಕರಿಸಿರುವುದು ವಿಶೇಷ.