Yashasvi Jaiswal: ಅತ್ಯಂತ ನಿಧಾನಗತಿಯ ಅರ್ಧಶತಕ ಬಾರಿಸಿದ ಯಶಸ್ವಿ ಜೈಸ್ವಾಲ್

Updated on: Apr 06, 2025 | 9:04 AM

IPL 2025 PBKS vs RR: ಐಪಿಎಲ್​ನ 18ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ 69 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 205 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಪಂಜಾಬ್ ಕಿಂಗ್ಸ್ ತಂಡವು 155 ರನ್​ಗಳಿಸಲಷ್ಟೇ ಶಕ್ತರಾದರು.

1 / 5
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಂತ ವೇಗದ ಅರ್ಧಶತಕದ ದಾಖಲೆ ಬರೆದಿರುವ ಯಶಸ್ವಿ ಜೈಸ್ವಾಲ್ (Yashasvi Jaiswal) ಇದೀಗ ಅತ್ಯಂತ ನಿಧಾನಗತಿಯಲ್ಲಿ ಹಾಫ್ ಸೆಂಚುರಿ ಸಿಡಿಸಿ ಸುದ್ದಿಯಾಗಿದ್ದಾರೆ. ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಅತ್ಯಂತ ವೇಗದ ಅರ್ಧಶತಕದ ದಾಖಲೆ ಬರೆದಿರುವ ಯಶಸ್ವಿ ಜೈಸ್ವಾಲ್ (Yashasvi Jaiswal) ಇದೀಗ ಅತ್ಯಂತ ನಿಧಾನಗತಿಯಲ್ಲಿ ಹಾಫ್ ಸೆಂಚುರಿ ಸಿಡಿಸಿ ಸುದ್ದಿಯಾಗಿದ್ದಾರೆ. ಮುಲ್ಲನ್​ಪುರ್​ನಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಜೈಸ್ವಾಲ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ್ದರು.

2 / 5

ಈ ಬ್ಯಾಟಿಂಗ್​​ನೊಂದಿಗೆ ಯಶಸ್ವಿ ಜೈಸ್ವಾಲ್ 40 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಜೈಸ್ವಾಲ್ ಅವರ ಐಪಿಎಲ್​ ಕೆರಿಯರ್​ನಲ್ಲೇ ಅತ್ಯಂತ ನಿಧಾನಗತಿಯ ಅರ್ಧಶತಕ ಎಂಬುದು ವಿಶೇಷ. ಅಂದರೆ ಈವರೆಗೆ ಅವರು ಅರ್ಧಶತಕ ಬಾರಿಸಲು 40 ಎಸೆತಗಳನ್ನು ತೆಗೆದುಕೊಂಡಿರಲಿಲ್ಲ. ಇದಕ್ಕೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 39 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದು, ಅವರ ನಿಧಾನಗತಿಯ ಬ್ಯಾಟಿಂಗ್ ಆಗಿತ್ತು.

3 / 5

ಇದೀಗ ಪಂಜಾಬ್ ಕಿಂಗ್ಸ್ ವಿರುದ್ಧ 40 ಎಸೆತಗಳನ್ನು ಎದುರಿಸುವ ಮೂಲಕ ಐಪಿಎಲ್​ನಲ್ಲಿ ನಿಧಾನಗತಿಯಲ್ಲಿ ಅರ್ಧಶತಕ ಪೂರೈಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಈ ಪಂದ್ಯದಲ್ಲಿ 45 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 5 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 67 ರನ್ ಸಿಡಿಸಿ ಮಿಂಚಿದರು. ಈ ಮೂಲಕ ರಾಜಸ್ಥಾನ್ ರಾಯಲ್ಸ್ ತಂಡ ಬೃಹತ್ ಮೊತ್ತ ಪೇರಿಸಲು ಭದ್ರ ಬುನಾದಿ ಹಾಕಿಕೊಟ್ಟರು.

4 / 5

ಇನ್ನು ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತ್ಯಂತ ನಿಧಾನಗತಿಯ ಅರ್ಧಶತಕ ಬಾರಿಸಿದ ದಾಖಲೆ ಸೌತ್ ಆಫ್ರಿಕಾದ ಜೆಪಿ ಡುಮಿನಿ ಹೆಸರಿನಲ್ಲಿದೆ. 2009ರ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಕಣಕ್ಕಿಳಿದ ಡುಮಿನಿ ಅರ್ಧಶತಕ ಬಾರಿಸಲು ಬರೋಬ್ಬರಿ 55 ಎಸೆತಗಳನ್ನು ತೆಗೆದುಕೊಂಡಿದ್ದರು. ಇದುವೇ ಐಪಿಎಲ್ ಇತಿಹಾಸದ ಅತ್ಯಂತ ನಿಧಾನಗತಿಯ ಅರ್ಧಶತಕವಾಗಿದೆ.

5 / 5

ಇದೀಗ 40 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಯಶಸ್ವಿ ಜೈಸ್ವಾಲ್ ತನ್ನ ಕೆರಿಯರ್​ನ ನಿಧಾನಗತಿಯ ಹಾಫ್ ಸೆಂಚುರಿಯನ್ನು ಬಾರಿಸಿದ್ದಾರೆ. ಇದಾಗ್ಯೂ ಐಪಿಎಲ್​ನಲ್ಲಿ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಕೂಡ ಜೈಸ್ವಾಲ್ ಹೆಸರಿನಲ್ಲಿದೆ. 2023 ರಲ್ಲಿ ಯಶಸ್ವಿ ಜೈಸ್ವಾಲ್ ಕೆಕೆಆರ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ಈ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us